ರಾಯಚೂರು | ಕುರುಬದೊಡ್ಡಿ ಗ್ರಾಮಕ್ಕೆ ಅಭಿವೃದ್ಧಿ ಕಾಮಗಾರಿ ಶೀಘ್ರದಲ್ಲಿ : ಎಂಎಲ್‌ಸಿ ವಸಂತಕುಮಾರ ಭರವಸೆ

Date:

Advertisements

ರಾಯಚೂರು ವಿಧಾನಸಭಾ ಕ್ಷೇತ್ರದ ಕುರುಬದೊಡ್ಡಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಎರಡು ತರಗತಿ ಕೊಠಡಿಗಳು, ಆಟದ ಮೈದಾನ, ಸಿಸಿ ರಸ್ತೆ ಹಾಗೂ ಗ್ರಾಮದಲ್ಲಿ ಶೌಚಾಲಯ ನಿರ್ಮಾಣಕ್ಕೆ ತಕ್ಷಣ ಕ್ರಮ ಕೈಗೊಳ್ಳುವುದಾಗಿ ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ ಭರವಸೆ ನೀಡಿದರು.

ಗ್ರಾಮಕ್ಕೆ ಭಾನುವಾರ ಭೇಟಿ ನೀಡಿದ ಎಂಎಲ್‌ಸಿ ವಸಂತಕುಮಾರರಿಗೆ ಗ್ರಾಮದ ಮುಖಂಡರು ಮನವಿ ಪತ್ರ ಸಲ್ಲಿಸಿ, ಹಲವು ವರ್ಷಗಳಿಂದ ಸರಕಾರದ ಮನೆಗಳು ಮಂಜೂರಾಗಿಲ್ಲದ ಕಾರಣ ಬಡ ಕುಟುಂಬಗಳು ಸಂಕಷ್ಟ ಅನುಭವಿಸುತ್ತಿವೆ ಎಂದು ತಿಳಿಸಿದರು. ಜೊತೆಗೆ ಮೂಲಭೂತ ಸೌಕರ್ಯಗಳ ಕೊರತೆ ಪರಿಹರಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಸಂತಕುಮಾರ, ಗ್ರಾಮದಲ್ಲಿ ಅಗತ್ಯವಾದ ಕಾಮಗಾರಿಗಳಿಗೆ ಸಂಬಂಧಪಟ್ಟ ಇಂಜಿನಿಯರ್‌ರಿಗೆ ಅಂದಾಜು ಪಟ್ಟಿ ತಯಾರಿಸಲು ಸೂಚನೆ ನೀಡಿದ್ದು, ಇದೇ ವರ್ಷ ಕಾಮಗಾರಿ ಪ್ರಾರಂಭವಾಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಮನೆಗಳ ಕುರಿತು ಸರಕಾರದ ಮಟ್ಟದಲ್ಲಿ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ಅತ್ಯಾಚಾರ ಪ್ರಕರಣ : ಅಪರಾಧಿಗೆ ಜೀವಾವಧಿ ಶಿಕ್ಷೆ

ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ವಕ್ತಾರರಾದ ಡಾ.ರಝಾಕ ಉಸ್ತಾದ, ಕೆ.ಅಸ್ಲಾಂ ಪಾಶಾ, ಮಹ್ಮದ ಉಸ್ಮಾನ, ಆಂಜನೇಯ, ಬಸವರಾಜ, ಮಹೇಶ, ಭೀಮರೆಡ್ಡಿ, ಹನುಮಂತ, ಟೈಲರ್‌ ನರಸಪ್ಪ, ಜನಾರ್ಧನಗೌಡ, ಆನಂದ, ಶಿವರಾಜ ಹಾಗೂ ಇತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೊರಬ | 30 ಅಡಿ ಬಾವಿಗೆ ಬಿದ್ದ ಆಕಳು ರಕ್ಷಣೆ

ಸೊರಬ, ಪಟ್ಟಣದ ಹೊಸಪೇಟೆ ಬಡಾವಣೆಯಲ್ಲಿ ಬಾವಿಗೆ ಬಿದ್ದ ಆಕಳನ್ನು ಅಗ್ನಿಶಾಮಕದಳದ ಸಿಬ್ಬಂದಿ...

ಶಿವಮೊಗ್ಗ | ಹಳೆ ದ್ವೇಷ : ಯುವಕನಿಗೆ ಚಾಕುವಿನಿಂದ ಇರಿದು ಕೊಲೆ

ಶಿವಮೊಗ್ಗ, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಸಂಬಂಧಿ ಯುವಕನಿಗೆ ಇನ್ನೊಬ್ಬ ಚಾಕುವಿನಿಂದ ಇರಿದು...

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

Download Eedina App Android / iOS

X