ರಾಯಚೂರು | ಹಾಸ್ಟೆಲ್‌ ಸಮಸ್ಯೆ ಪರಿಹರಿಸುವಂತೆ ಕೆವಿಎಸ್‌ ಆಗ್ರಹ

Date:

ಸಿಂಧನೂರಿನ ಶಿವಜ್ಯೋತಿ ನಗರದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಹಲವಾರು ಸಮಸ್ಯೆಗಳಿವೆ. ಇದರಿಂದ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಹಾಸ್ಟೆಲ್‌ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಕರ್ನಾಟಕ ವಿಧ್ಯಾರ್ಥಿ ಸಂಘಟನೆ (ಕೆವಿಎಸ್‌) ಕಾರ್ಯಕರ್ತರು ಒತ್ತಾಯಿಸಿದ್ದಾರೆ.

- Advertisement -

ಸಿಂಧನೂರು ತಹಶೀಲ್ದಾರ್‌ ಮತ್ತು ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ ಕಾರ್ಯಕರ್ತರು, “ಹಾಸ್ಟೆಲ್ ವಾರ್ಡ್‌ನ್ ಬೇಜವ್ದಾರಿ ಕಾರ್ಯನಿರ್ವಹಣೆ, ಮೂಲ ಸೌಕರ್ಯಗಳ ಕೊರತೆ ಹಾಗೂ ಅನಗತ್ಯ ಕಿರುಕುಳದಿಂದ ವಿದ್ಯಾರ್ಥಿನಿಯರು ಬೇಸತ್ತಿದ್ದಾರೆ. ಇದು ಅವರ ವಿದ್ಯಾಭ್ಯಾಸದ ಮೇಲೆ ಮತ್ತು ಪರೀಕ್ಷಾ ಫಲಿತಾಂಶದ ಮೇಲೆ ವ್ಯತಿರಿಕ್ತಿ ಪರಿಣಾಮ ಬೀರುತ್ತಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“ಹಾಸ್ಟೆಲ್‌ ಸಮಸ್ಯೆಗಳ ಕುರಿತು ಹಲವು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ, ಯಾವುದೇ ಪ್ರಯೋಜನವಾಗಿಲ್ಲ. ಸಮಸ್ಯೆಗಳ ಕಾರಣದಿಂದ ಹಾಸ್ಟೆಲ್‌ನ ವಿದ್ಯಾರ್ಥಿನಿಯರು ದಿನವೂ ಯಾತನೆ ಅನುಭವಿಸುವಂತಾಗಿದೆ. ದಿನದಿಂದ ದಿನಕ್ಕೆ ಪರಿಸ್ಥಿತಿಗೆ ಬಿಗಡಾಯಿಸುತ್ತಿದೆ. ಸಮಸ್ಯೆಗಳು ವಿಕೋಪಕ್ಕೆ ಹೋಗಿ ಪರಿಸ್ಥಿತಿ ಸಂಪೂರ್ಣ ಹದಗೆಡುವ ಮುನ್ನವೇ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

“ಹದಿನೈದು ದಿನಗಳಲ್ಲಿ ಹಾಸ್ಟೆಲ್‌ ಸಮಸ್ಯೆಗಳನ್ನು ಪರಿಹರಿಸದಿದ್ದರೆ, ತಾಲೂಕು ಕಚೇರಿ ಮುಂದೆ ಧರಣಿ ನಡೆಸಲಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಹಾಸ್ಟೆಲ್‌ ವಿದ್ಯಾರ್ಥಿನಿಯರ ಬೇಡಿಕೆಗಳು

  1. ಹಾಸ್ಟೆಲ್‌ ವಾರ್ಡನ್ ಅಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಹಾಗಾಗಿ ಕೂಡಲೇ ಅವರನ್ನು ಬೇರೆಡೆ ವರ್ಗಾವಣೆ ಮಾಡಬೇಕು.
  2. ರೇಷನ್ ಕೊರತೆ, ಊಟ ತಯಾರಿಕೆಯಲ್ಲಿ ಅಶುಚಿತ್ವ, ಗುಣಮಟ್ಟದ ತರಕಾರಿ ಬಳಸದೇ ಕೊಳೆತ ತರಕಾರಿ ಬಳಸಿ ಅಡುಗೆ ತಯಾರಿಸಲಾಗುತ್ತಿದೆ. ಅವ್ಯವಸ್ಥೆಯನ್ನು ಪರಿಹರಿಸಿ, ಗುಣಮಟ್ಟದ ಆಹಾರ ನೀಡಬೇಕು.
  3. ಗ್ರಂಥಾಲಯದಲ್ಲಿನ ಪುಸ್ತಕಗಳ ಕೊರತೆ ಪರಿಹರಿಸಬೇಕು.
  4. ಕ್ರೀಡಾ ಸಾಮಗ್ರಿಗಳನ್ನು ಒದಗಿಸಬೇಕು.
  5. ಹಾಸ್ಟೆಲ್‌ನ ವಾರ್ಡ್‌ನ್‌ ವಿದ್ಯಾರ್ಥಿನಿಯರ ಮೇಲೆ ಅನುಚಿತವಾಗಿ ವರ್ತಿಸುವುದಲ್ಲದೇ ಮಾನಸಿಕ ಕಿರುಕುಳ ನೀಡುತ್ತಿದ್ದು, ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು.

ಹಕ್ಕೊತ್ತಾಯ ಪತ್ರ ಸಲ್ಲಿಸುವ ವೇಳೆ ಕರ್ನಾಟಕ ವಿಧ್ಯಾರ್ಥಿ ಸಂಘಟನೆ ರಾಜ್ಯ ಮುಖಂಡ ಗುರುಬಸವ ಬರಗೂರು, ತಾಲ್ಲೂಕು ಮುಖಂಡ ಚಾಂದ್ ಪಾಶ, ಸಮದ್ ಚೌದ್ರಿ, ಹಾಗೂ ವಿಧ್ಯಾರ್ಥಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...