ರಾಯಚೂರು | ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ಕೂಡಲೇ ರದ್ದುಗೊಳಿಸಲು ಸಿಐಟಿಯು ಸಂಘಟನೆ ಆಗ್ರಹ

Date:

Advertisements

ಕಾರ್ಮಿಕರ ವಿರೋಧಿ ನಾಲ್ಕು ಸಂಹಿತೆಗಳನ್ನು ಕೂಡಲೇ ಕೇಂದ್ರ ಸರ್ಕಾರ ರದ್ದುಗೊಳಿಸಬೇಕು ಎಂದು ಲಿಂಗಸೂಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ಕಂಪನಿ ಮುಂದೆ ಸಿಐಟಿಯು ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿ ಕಂಪನಿ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

ಕಾರ್ಮಿಕ ವಿರೋಧಿ 4 ಸಂಹಿತೆಗಳಿಂದ ಕಾರ್ಮಿಕರಿಗೆ ದುಡಿಯುವ ವರ್ಗದ ಜನರ ಮೇಲೆ ಹೇರಲು ಆತುರದಿಂದ ಹವಣಿಸುತ್ತಿದೆ. ಕೆಲಸ ಹಾಗೂ ಕೆಲಸದ ಪರಿಸ್ಥಿತಿಗಳಿಗೆ ಸಂಬಂಧಿಸಿದ ದುಡಿಮೆಯ ಸಮಯ,ಕನಿಷ್ಠ ವೇತನಗಳು,ಸಾಮಾಜಿಕ ಭದ್ರತೆ ಇತ್ಯಾದಿ ಮತ್ತು ಸಂಘಟಿತರಾಗುವ ಹಕ್ಕು, ಅವರ ಸಾಮೂಹಿಕ ಚೌಕಾಶಿ ಹಕ್ಕುಗಳು, ಆಂದೋಲನಗಳು/ಹೋರಾಟಗಳು ಮತ್ತು ಮುಷ್ಕರದ ಹಕ್ಕು ಸೇರಿದಂತೆ ಪ್ರತಿಭಟನೆಗಳ ಯಾವುದೇ ರೀತಿಯ ಸಾಮೂಹಿಕ ಅಭಿವ್ಯಕ್ತಿಗಳ ಮೇಲೆ ಕಾರ್ಮಿಕರ ಎಲ್ಲಾ ಮೂಲಭೂತ ಹಕ್ಕುಗಳಿಗೆ ಗಂಭೀರ ಸವಾಲು ಒದಗಿ ಬಂದಿದೆ ಎಂದು ಒತ್ತಾಯಿಸಿದರು.

ವೇತನ ಸಂಹಿತೆಗಳಲ್ಲಿ 4 ಕಾನೂನು, ಕೈಗಾರಿಕಾ ಬಾಂದವ್ಯ ಸಂಹಿತೆಯಲ್ಲಿ 3 ಕಾನೂನು ಔದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆಯಲ್ಲಿ 13 ಕಾನೂನು ಮತ್ತು ಸಾಮಾಜಿಕ ಭದ್ರತಾ ಸಂಹಿತೆಯಲ್ಲಿ 9 ಕಾನೂನು ಸೇರಿದಂತೆ ಒಟ್ಟು 29 ಕಾನೂನುಗಳನ್ನು 4 ಸಂಹಿತೆಗಳಲ್ಲಿ ರೂಪಿಕರಿಸಲಾಗಿದೆ ಇದರಿಂದ ಗುಲಾಮ ರೀತಿಗೆ ತಳ್ಳುವ ಹುನ್ನಾರ ನಡೆದಿದೆ ಎಂದು ಕೂಡಲೇ ಕೇಂದ್ರ ಸರ್ಕಾರ ಕಾಯಿದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಯಲು ಬಹಿರ್ದೆಸೆಗೆ ಹೋಗುವಾಗ ಸಿಡಿಲು ಬಡಿದು ಮಹಿಳೆ ಸಾವು

ದೇಶದಲ್ಲಿ ಅತೀಹೆಚ್ಚು ಅಸಂಘಟಿತ, ಸ್ಕಿಂ ಮತ್ತು ಅನೌಪಚಾರಿಕ ಕಾರ್ಮಿಕರನ್ನು ಕಾನೂನುಗಳಡಿಯಲ್ಲಿ ತರಬೇಕು ಮತ್ತು 600 ರೂ. ಒಂದು ದಿನದ ವೇತನ ನಿಗದಿ ಮಾಡಬೇಕೆಂಬ ಕೇಂದ್ರ ಕಾರ್ಮಿಕ ಸಂಘಟನೆಗಳ ಬೇಡಿಕೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.ವೇತನ ಸಂಹಿತೆಯಲ್ಲಿ 15ನೇ ILC ಯ ಕನಿಷ್ಠ ವೇತನ, ನ್ಯಾಯ ಸಮ್ಮತ ಮತ್ತು ಜೀವಿತ ವೇತನಗಳನ್ನು ನಿಗದಿ ಮಾಡುವ ಅಂಶಗಳನ್ನು ಒಳಗೊಳ್ಳುವ ಬದಲಿಗೆ 187 ರೂ. ನೆಲದ ಕೂಲಿಯನ್ನು ನಿರ್ದಿಷ್ಟಗೊಳಿಸಿದ್ದರಿಂದ ಇನ್ನು ಮುಂದೆ ವೇತನ ಹೆಚ್ಚಳಗಳಿಗೆ ಪೆಟ್ಟು ಬೀಳುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

18 ಸಾವಿರಕ್ಕಿಂತ ಹೆಚ್ಚು ವೇತನ ಪಡೆಯುವವರು ಸೂಪರ್‌ವೈಸರ್‌ಗಳು, ಅಪ್ರೆಂಟೀನ್‌ಗಳು, 40 ಕಾರ್ಮಿಕರಿದ್ದು ವಿದ್ಯುತ್‌ರಹಿತ ಉದ್ಯಮಗಳಲ್ಲಿರುವ ಕಾರ್ಮಿಕರು 50ಕ್ಕಿಂತ ಕಡಿಮೆ ಗುತ್ತಿಗೆ ಕಾರ್ಮಿಕರನ್ನು ಹೊಂದಿರುವ ಗುತ್ತಿಗೆದಾರರು ಲೈಸೆನ್ಸ್ ತೆಗೆದುಕೊಳ್ಳಬೇಕಿಲ್ಲ.ಇದರಿಂದಾಗಿ ಭಾರತದ 70% ಕಾರ್ಮಿಕರಿಗೆ ಕಾರ್ಮಿಕ ಕಾನೂನುಗಳು ಅನ್ವಯವಾಗುವುದಿಲ್ಲ.
100ಕ್ಕಿಂತ ಹೆಚ್ಚು ಕಾರ್ಮಿಕರಿದ್ದರೆ ಕಾರ್ಖಾನೆಗಳ ಲೇಆಫ್, ರಿಟ್ರಿಂಚ್ ಮೆಂಟ್ ಮತ್ತು ಕಾರ್ಖಾನೆ ಮುಚ್ಚುವಿಕೆಗೆ ಸರ್ಕಾರದ ಪೂರ್ವನುಮತಿ ಪಡೆಯಬೇಕಿತ್ತು.ಈಗ 300 ಕಾರ್ಮಿಕರಿಗೆ ಹೆಚ್ಚಿಸಲಾಗಿದೆ. ಇದರಿಂದ ಯಾವಾಗ ಬೇಕಾದರೂ ಕಾರ್ಖಾನೆ ತೆರೆಯಬಹುದು, ಬೇಡದಿದ್ದರೆ ಮುಚ್ಚಬಹುದಾದ ಸ್ವಾತಂತ್ರ್ಯವನ್ನು ಮಾಲೀಕರಿಗೆ ಕೊಡಲಾಗಿದೆ ಎಂದರು.

ಕಾರ್ಮಿಕರ ವೆಚ್ಚ ಉಳಿಸಲು, ಶತಮಾನಗಳ ಹೋರಾಟಗಳ, ತ್ಯಾಗ-ಬಲಿದಾನಗಳ ಮುಖಾಂತರ ಬಂದಿರುವ 8 ಗಂಟೆಯಿಂದ 12 ಗಂಟೆಗೆ ಹೆಚ್ಚಿಸಲು ಓವರ್ ಟೈಮ(O.T)ನ್ನು 3 ತಿಂಗಳಿಗೆ 50 ಗಂಟೆ ಇದ್ದುದ್ದು, ಈಗ 125 ಗಂಟೆಗೆ ಹೆಚ್ಚಿಸಲು ಅನುಮತಿ ನೀಡಲು ಈ ಸಂಹಿತೆಗಳಲ್ಲಿ ತಿದ್ದುಪಡಿ ತರಲಾಗಿದೆ. ಇದರಿಂದ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಹೆಚ್ಚಾಗಿ ಕಡಿಮೆ ವಯಸ್ಸಿನಲ್ಲಿಯೇ ಕಾರ್ಮಿಕರಿಗೆ ಹೃದಯ ಸಂಬಂಧಿ, ಪಾರ್ಶ್ವವಾಯು, ಮಾನಸಿಕ ಖಿನ್ನತೆಯಂತಹ ಖಾಯಿಲೆಗಳು ಹೆಚ್ಚಾಗುತ್ತಿದೆ.

ಸಾಮೂಹಿಕ ಭದ್ರತೆಯ ಭಾಗವಾಗಿ ನಿವೃತ್ತಿಯಾದ ಕಾರ್ಮಿಕರಿಗೆ ಕನಿಷ್ಠ 9000 ರೂ ನಿವೃತ್ತಿ ವೇತನ ನೀಡುವ ಬದಲಿಗೆ ESI ಮತ್ತು PF ನ ಆಯ್ಕೆಯ ಸ್ವಾತಂತ್ರ್ಯವನ್ನು ಮಾಲೀಕರಿಗೆ ನೀಡಿ, ನಿಧಿಗಳ ನಿರ್ವಹಣೆಯ ಅಧಿಕಾರವನ್ನು ಕಾರ್ಯಾಂಗಕ್ಕೆ ನೀಡಿದೆ. ESI, PF, ಗುತ್ತಿಗೆ ಕಾರ್ಮಿಕರ, ಕಟ್ಟಡ ಕಾರ್ಮಿಕರ ಕನಿಷ್ಠ ವೇತನದ ಎಲ್ಲಾ ತ್ರಿಪಕ್ಷೀಯ ಸಮಿತಿಗಳನ್ನು ರದ್ದುಗೊಳಿಸುವ ಅಥವಾ ಅದರ ಪ್ರಾಮುಖ್ಯತೆಯನ್ನು ಇಲ್ಲವಾಗಿಸಿ ಮಾಲೀಕರಿಗೆ ಅಧಿಕಾರವನ್ನು ನೀಡಿ, ಕಾರ್ಮಿಕರನ್ನು ಪ್ರತಿನಿಧಿಸುವ ಎಲ್ಲಾ ವ್ಯವಸ್ಥೆಗಳಿಗೆ ತಿಲಾಂಜಲಿ ನೀಡಲಾಗುತ್ತಿದೆ. ILO ಒಡಂಬಡಿಕೆಗಳಿಗೂ ತಿಲಾಂಜಲಿ ನೀಡಿ ILC ಯನ್ನು ಕಡೆಗಣಿಸುವ ಮುಖಾಂತರ ಮೋದಿ ಸರ್ಕಾರ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸುತ್ತಿದೆ ಎಂದರು.

ಕಾರ್ಮಿಕರು ಮಾಡುವ ಮುಷ್ಕರವನ್ನು ಸಂಘಟಿತ ಅಪರಾಧ ಎನ್ನುವ ಸರ್ಕಾರ ಬಾಯ್ಸರ್ ಕಾಯ್ದೆ, ಅರಣ್ಯ ಕಾಯ್ದೆ, ಚಹಾ ಕಾಯ್ದೆ, ರಬ್ಬರ್ ಕಾಯ್ದೆ ಹಲವಾರು ಔಷಧವಲಯಗಳಿಗೆ ಸಂಬಂಧಿಸಿದ 41 ಕಾನೂನುಗಳಡಿಯಲ್ಲಿ 180 ಅಪರಾಧಗಳಿಂದ ಜನಾವಶ್ಯಕ ಕಾಯ್ದೆಯ ನಿಬಂಧನೆಗಳ ಪ್ರಕಾರ ಮಾಲಿಕರನ್ನು ಮುಕ್ತಗೊಳಿಸಿದೆ.ಕೂಡಲೇ ಹಿಂಪಡೆಯಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಮಾಡಲಾಗುವುದು

ಈ ಸಂದರ್ಭದಲ್ಲಿ ಸಿಐಟಿಯು ಮುಖಂಡರಾದ ಹನೀಫ್, ರಮೇಶ ವೀರಾಪೂರು, ನಿಂಗಪ್ಪ ವೀರಾಪೂರ್, ಹಟ್ಟಿ ಚಿನ್ನದ ಗಣಿ ಘಟಕದ ಅಧ್ಯಕ್ಷ ಫಕ್ರುದ್ದೀನ್, ಪ್ರಧಾನ ಕಾರ್ಯದರ್ಶಿ
ವೆಂಕಟೇಶ್ ಗೋರಕಲ್, ಅಲ್ಲಾಭಕ್ಷ, ಶ್ರೀದರ್, ದಾವೂದ್, ಪಾಲ್ ಸನ್, ಖಾಜಾ ಮೈನುದ್ದೀನ್, ಮಾಜಿ ಚುನಾಯಿತ ಸದಸ್ಯ ಪೆಂಚಲಯ್ಯ, ಡಿವೈಎಫ್ ಐ ಮುಖಂಡ ಚನ್ನಬಸವ, ಜನವಾದಿ ಮಹಿಳಾ ಸಂಘಟನೆ ತಾಲೂಕಾಧ್ಯಕ್ಷೆ ವನಜಾಕ್ಷಿ, ಶಾಂತಕುಮಾರಿ, ಈರಮ್ಮ, ಅಂಬಮ್ಮ, ಶಿವಮ್ಮ, ಗೌರಮ್ಮ, ಕನಕಮ್ಮ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X