ರಾಯಚೂರು | ನಕಲಿ ದಾಖಲೆ ಸೃಷ್ಟಿಸಿ ಭೂಮಿ ಕಬಳಿಕೆ; ಆರೋಪ

Date:

ರಾಯಚೂರು ನಗರದ ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು ನಕಲಿ ದಾಖಲೆ ಸೃಷ್ಠಿಸಿ ಭೂಮಿಯನ್ನು ಕಬಳಿಸಲು ಸಹಕಾರ ನೀಡಿದ ಆರೋಪ ಕೇಳಿಬಂದಿದೆ.

- Advertisement -

ರಾಯಚೂರು ತಾಲೂಕಿನ ಪೋತಗಲ್ ಗ್ರಾಮದ ಸರ್ವೆ ನಂ.172/3ರ 6ಎಕರೆ ಜಮೀನು ಗ್ರಾಮದ ಗೋವಿಂದಪ್ಪ ಎನ್ನುವವರ ಹೆಸರಿನಲ್ಲಿದ್ದು, ಅವರ ಮರಣದ ಬಳಿಕ ತಮ್ಮ ಪತ್ನಿ ಸುಶೀಲಮ್ಮ ಅವರ ಹೆಸರಿಗೆ ನೋಂದಣಿಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಕಳೆದ 15 ವರ್ಷಗಳಿಂದ ಭೂಮಿ ಇದೆ. ಆದರೆ ಸುಶೀಲಮ್ಮ ಮೃತಪಟ್ಟಿದ್ದಾರೆ. ಅವರಿಗೆ ಮಕ್ಕಳಿಲ್ಲವೆಂದು ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು ನಕಲಿ ದಾಖಲೆ ಸೃಷ್ಠಿಸಿ ಎಸ್ ಕೆ ನಾಗರೆಡ್ಡಿ ಎನ್ನುವವರ ಹೆಸರಿಗೆ ನೋಂದಣಿ ಮಾಡಿದ್ದಾರೆ.

“ಈ ಬಗ್ಗೆ ಮಾಹಿತಿ ತಿಳಿದುಕೊಂಡ ಸುಶೀಲಮ್ಮ ತಮ್ಮ ಮಕ್ಕಳೊಂದಿಗೆ ತಹಶೀಲ್ದಾರ್ ಕಚೇರಿಗೆ ದೂರು ನೀಡಿದ್ದು, “ಸುಶೀಲಮ್ಮ(68) ಎಂಬ ನಾನು ಬದುಕಿದ್ದು, ನನಗೆ ಮಕ್ಕಳಿದ್ದಾರೆ. ಆದರೆ ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿ ಮಾಡಿ ಜಮೀನು ಕಬಳಿಸಿದ್ದಾರೆ” ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿವಾಹೇತರ ಸಂಬಂಧ ಹೊಂದಿರುವ ಪತ್ನಿಯು ಪತಿಯಿಂದ ಜೀವನಾಂಶ ಕೇಳುವಂತಿಲ್ಲ: ಹೈಕೋರ್ಟ್‌

“ಅಕ್ರಮದ ಹಿಂದೆ ಬ್ರೋಕರ್‌ಗಳು, ಕಚೇರಿಯ ಸಿಬ್ಬಂದಿಗಳ ಕೈವಾಡವಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ವರದಿ : ಹಫೀಜುಲ್ಲ 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...