ರಾಯಚೂರು | ಸಚಿವ ತಿಮ್ಮಾಪುರ ಒಡೆತನದ ಕಂಪನಿ ವಿರುದ್ಧ ಭೂಕಬಳಿಕೆ ಆರೋಪ

Date:

ಅಬಕಾರಿ ಸಚಿವ ಆರ್​ಬಿ ತಿಮ್ಮಾಪುರ ಒಡೆತನದ ಆರ್​​ಬಿ ಶುಗರ್ಸ್‌ ಕಂಪನಿ ವಿರುದ್ಧ ಸರ್ಕಾರಿ ಭೂಮಿ ಕಬಳಿಕೆ ಆರೋಪ ಕೇಳಿಬಂದಿದೆ. ಕಂಪನಿ ವಿರುದ್ಧ ಕ್ರಮ ಕೈಗೊಳ್ಳುವಂತೆ ರೈತ ಸಂಘ ಆಗ್ರಹಿಸಿದೆ.

- Advertisement -

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಚಿಕ್ಕ ಉಪ್ಪೇರಿ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ತಿಮ್ಮಾಪುರ ಅವರ ಆರ್‌ಬಿ ಶುಗರ್ಸ್‌ ಕಂಪನಿ ಮುಂದಾಗಿದೆ. ಗ್ರಾಮದ ಸರ್ವೆ ನಂ.62ರಲ್ಲಿರುವ ಗೈರಾಣಿ ಜಮೀನನ್ನು ಕಂಪನಿ ಅಕ್ರಮವಾಗಿ ವಶಕ್ಕೆ ಪಡೆದುಕೊಂಡಿದೆ ಎಂದು ರೈತ ಸಂಘ ಆರೋಪಿಸಿದೆ. ಕಂಪನಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಲಿಂಗಸುಗೂರು ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪ್ರಭಾವಿ ವ್ಯಕ್ತಿಗಳು ಒಂದಷ್ಟು ಜಮೀನು ಖರೀದಿ ಮಾಡಿದ್ದು, ಆ ಜಮೀನಿನ ಪಕ್ಕದಲ್ಲೇ ಇರುವ ಗೈರಾಣಿ ಭೂಮಿಯನ್ನೂ ಆಕ್ರಮಿಸಿಕೊಂಡಿದ್ದಾರೆ. ಆ ಗೈರಾಣಿ ಭೂಮಿ ಜಾನುವಾರುಗಳ ಮೇವಿಗಾಗಿ ಮೀಸಲಾಗಿದೆ. ಆ ಭೂಮಿಯಲ್ಲಿ ಸಕ್ಕರೆ ಕಾರ್ಖಾನೆ ನಿರ್ಮಿಸುತ್ತಾರೆಂಬ ಮಾತುಗಳು ಕೇಳಿಬರುತ್ತಿವೆ. ಕೂಡಲೇ ಕ್ರಮ ಕೈಗೊಂಡು, ಭೂಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ರೈತ ಸಂಘದ ಮುಖಂಡರು ಆಗ್ರಹಿಸಿದ್ದಾರೆ.

ಗ್ರಾಮದ ಬಳಿ ಸಕ್ಕರೆ ಕಾರ್ಖಾನೆ ನಿರ್ಮಾಣವಾದರೆ, ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ ಪರಿಸರ ಮಾಲಿನ್ಯವಾಗುತ್ತದೆ. ಕಾರ್ಖಾನೆಯ ಕಲುಷಿತ ತ್ಯಾಜ್ಯವನ್ನು ಹತ್ತಿರದಲ್ಲೇ ಹರಿಯುವ ಕೃಷ್ಣ ನದಿಗೆ ಹರಿಬಿಡುವ ಸಾಧ್ಯತೆ ಇದೆ. ಪರಿಣಾಮ, ರೈತರ ಬೆಳೆಗೆ ಮತ್ತು ಜಾನುವಾರುಗಳಿಗೆ ತೊಂದರೆಯಾಗಲಿದೆ. ಹೀಗಾಗಿ, ಗ್ರಾಮದ ಬಳಿ ಕಾರ್ಖಾನೆ ನಿರ್ಮಾಣಕ್ಕೆ ಅವಕಾಶ ಕೊಡಬಾರದು ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...

ಉಡುಪಿ | ಕಂಡ್ಲೂರಿನಲ್ಲಿ ಹೋಂ ಸ್ಟೇ ಎನ್‌ಒಸಿಗೆ ₹5 ಸಾವಿರ ಲಂಚ: ವಿಎ ಲೋಕಾಯುಕ್ತ ಬಲೆಗೆ

ಕಂಡ್ಲೂರಿನಲ್ಲಿ ನಿರ್ಮಾಣವಾಗಲಿರುವ ಹೋಂ ಸ್ಟೇಗೆ ನಿರಪೇಕ್ಷಣಾ ಪತ್ರ (ಎನ್‌ಒಸಿ) ನೀಡಲು ₹5...