ರಾಯಚೂರು | ಸಹಾಯಕ‌ ಆಯುಕ್ತರ ವಜಾಕ್ಕೆ ವಕೀಲರ ಆಗ್ರಹ

Date:

ನ್ಯಾಯಾಲಯದ ಕಲಾಪಗಳಿಗೆ, ನ್ಯಾಯವಾದಿಗಳಿಗೆ ಗೌರವ ಕೊಡದೆ ಭ್ರಷ್ಟಾಚಾರ ನಡೆಸುತ್ತಿರುವ ಸಹಾಯಕ ಆಯುಕ್ತ ರಜನಿಕಾಂತ್ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ರಾಯಚೂರು ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

- Advertisement -

ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯಕರ್ತರು ಸಹಾಯಕ ಆಯುಕ್ತ ರಜನಿಕಾಂತ್ ಚವ್ಹಾಣ್ ಅವರ ಪ್ರತಿಕೃತ ದಹನ ಮಾಡಿ ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಕಂದಾಯ ಇಲಾಖೆಯ ಪ್ರಕರಣಗಳನ್ನು ಕೈಗೆತ್ತಿಕೊಳ್ಳುವಾಗ ವಕೀಲರಿಗೆ ಅಗೌರವ ತೋರುತ್ತಿದ್ದಾರೆ. ಈ ಬಗ್ಗೆ ಜನವರಿ 18ರಂದು ಸಹಾಯಕ ಆಯುಕ್ತ ರಜನಿಕಾಂತ್ ವಿರುದ್ಧ ಜಿಲ್ಲಾಧಿಕಾರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕನಿಷ್ಟ ನ್ಯಾಯವಾದಿಗಳ ಸಂಘದ ಪ್ರತಿನಿಧಿಗಳೊಂದಿಗೆ ಚರ್ಚಿಸದೇ ಅಸಹಕಾರ ಧೋರಣೆ ತೋರಿದ್ದಾರೆ” ಎಂದು ಆರೋಪಿಸಿದರು.

“ಸಹಾಯಕ ಆಯುಕ್ತ ರಜಿನಿಕಾಂತ್‌ ನ್ಯಾಯಾಲಯ ಕಲಾಪ ನಡೆಸದಂತೆ ತಡೆಯಬೇಕು. ಕೂಡಲೇ ಸಹಾಯಕ ಆಯುಕ್ತ ರಜನಿಕಾಂತ್ ವಿರುದ್ಧ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಿ ಸೇವೆಯಿಂದ ಅಮಾನತೆಗೊಳಿಸಬೇಕು. ಕ್ರಮ ಕೈಗೊಳ್ಳದಿದ್ದಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಮನವಿ ಸ್ವೀಕರಿಸದೇ ಮರಳಿದ ಡಿಸಿ: “ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎನ್ ಬಾನುರಾಜ ಅವರು ಎಸಿ ರಜನಿಕಾಂತ್ ವಿರುದ್ಧ ಕ್ರಮ ಕೈಗೊಳ್ಳದೇ ಭ್ರಷ್ಟಚಾರ ರಕ್ಷಿಸಲಾಗುತ್ತಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳಿಗೆ ಪರದಾಟ

ಅಧಿಕಾರಿಗಳ ವಿರುದ್ಧ ಅಸಂವಿಧಾನಿಕ ಪದ ಬಳಸಿದ್ದರಿಂದ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಮನವಿ ಸ್ವೀಕರಿಸದೆ ಮರಳಿದ ಘಟನೆ ಜರುಗಿತು. ಪೊಲೀಸರು ಮನವಿಯಲ್ಲಿರುವ ಅಂಶ ಬಿಟ್ಟು ಬೇರೆ ಬೇರೆ ಅಸಂವಿಧಾನಿಕ ಪದ ಬಳಸಿರುವ ಕುರಿತು ಆಕ್ಷೇಪ ವ್ಯಕ್ತಪಡಿಸಿದರು. ಸಹಾಯಕ ಆಯುಕ್ತ ರಜನಿಕಾಂತ್ ಚವ್ಹಾಣ್ ಅವರ ಪ್ರತಿಕೃತಿ ದಹಿಸಿ ನ್ಯಾಯವಾದಿಗಳು ಘೋಷಣೆಗಳು ಹಾಕಿ ಮರಳಿದರು.

ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಎನ್‌.ಭಾನುರಾಜ, ಪ್ರಧಾನ ಕಾರ್ಯದರ್ಶಿ ಉದಯಕುಮಾರ, ಉಪಾಧ್ಯಕ್ಷ ಬಿ.ಎನ್.ನಾಯಕ, ತಾಯಪ್ಪ, ಜಿತೇಂದ್ರ, ಜಿ.ಟಿ.ರೆಡ್ಡಿ, ಜಗದೀಶ, ಕರುಣಾಕರ ಕಟ್ಟಿಮನಿ, ದೊಡ್ಡಪ್ಪ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...