ರಾಯಚೂರು ಜಿಲ್ಲೆಯ ಮಲಿಯಾಬಾದ್ ಬೆಟ್ಟದಲ್ಲಿ ಇತ್ತೀಚಿಗೆ ಕಾಣಿಸಿಕೊಂಡಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಆರು ತಿಂಗಳಿಂದ ಬೆಟ್ಟದ ಗುಹೆಯಲ್ಲಿ ವಾಸಿಸುತ್ತಿದ್ದ ಚಿರತೆ ಗ್ರಾಮದ ಸುತ್ತ ಮುತ್ತ ನಾಯಿಗಳು ಹಾಗೂ ಇತರೆ ಸಾಕು ಪ್ರಾಣಿಗಳನ್ನು ಬೇಟೆಯಾಡುತ್ತಿತ್ತು .ಇದರಿಂದ ಗ್ರಾಮಸ್ಥರು ಭಯದಲ್ಲಿ ಇದ್ದರು. ಸ್ಥಳೀಯರ ದೂರಿನ ಅನ್ವಯ ಅರಣ್ಯ ಇಲಾಖೆಯವರು ಇಂದು ಬೆಳಿಗ್ಗೆ ಸೆರೆಹಿಡಿದರು.
ಕೆಲವು ದಿನಗಳ ಹಿಂದೆ ಚಿರತೆಯ ಹೆಜ್ಜೆ ಗುರುತುಗಳು ಮಾತ್ರ ಪತ್ತೆಯಾಗಿದ್ದವು. ಸ್ಥಳೀಯರ ದೂರಿನ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಸಿಸಿ ಕ್ಯಾಮೆರಾ ಅಳವಡಿಸಿದ್ದರು. ಕ್ಯಾಮೆರಾದಲ್ಲಿ ಚಿರತೆಯ ಚಲನವಲನವೂ ಸೆರೆಯಾಗಿತ್ತು.
ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಅಳವಡಿಸಿದ್ದರು. ಇದೀಗ ಚಿರತೆ ಬೋನಿಗೆ ಬಿದ್ದಿದ್ದು, ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
