ರಾಯಚೂರು | ಲೋಕಸಭೆ ಚುನಾವಣೆ: ಕರಪತ್ರ, ಪೋಸ್ಟರ್ ಮುದ್ರಣ ಮಾಹಿತಿ ನೀಡುವುದು ಕಡ್ಡಾಯ: ಜಿಲ್ಲಾಧಿಕಾರಿ

Date:

ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಿಂಟಿಂಗ್ ಮತ್ತು ಪಬ್ಲಿಷಿಂಗ್ ಮಾಡುವ ಕರಪತ್ರ, ಪೋಸ್ಟರ್, ಬ್ಯಾನರ್ ಇತ್ಯಾದಿಗಳನ್ನು ಮುದ್ರಿಸುವ ಮುಂಚಿತವಾಗಿ ಕಡ್ಡಾಯವಾಗಿ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಒದಗಿಸುವುದು ಕಡ್ಡಾಯವಾಗಿದೆ ಎಂದು ರಾಯಚೂರಿನ ಅಪರ ಜಿಲ್ಲಾಧಿಕಾರಿ ಡಾ.ದುರುಗೇಶ ಹೇಳಿದರು.

- Advertisement -

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷ ಹಾಗೂ ಪ್ರಿಂಟಿಂಗ್ ಮತ್ತು ಪಬ್ಲಿಷಿಂಗ್ ಮುದ್ರಕರ ಸಂಘ ಮುಖಂಡರ ಸಭೆಯಲ್ಲಿ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

“ರಾಜಕೀಯ ಪಕ್ಷಗಳು ಹಾಗೂ ಮುದ್ರಕರು ಕರಪತ್ರ, ಪೋಸ್ಟರ್ ಇತ್ಯಾದಿಗಳನ್ನು ಮುದ್ರಿಸುವ ಸಂದರ್ಭದಲ್ಲಿ ಅರ್ಜಿ ಸಲ್ಲಿಸಿ ಪರವಾನಗಿ ಪಡೆಯಬೇಕು. ಅರ್ಜಿಯಲ್ಲಿ ಮುದ್ರಕರ ಹೆಸರು ಇತ್ಯಾದಿಗಳನ್ನು ಕಡ್ಡಾಯವಾಗಿ ರಾಜಕೀಯ ಪಕ್ಷಗಳು ಮುದ್ರಿಸಬೇಕು. ಪ್ರತಿದಿನ ಮುದ್ರಣದ ಮಾಹಿತಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಒದಗಿಸಬೇಕು” ಎಂದರು.

ಕರಪತ್ರ ಮತ್ತು ಇತರೆ ಮುದ್ರಣದ ಬಳಿಕ ಅದರ ಪ್ರತಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಮಾಹಿತಿಯೊಂದಿಗೆ ಸಲ್ಲಿಸಬೇಕು. ರಾಜಕೀಯ ಪ್ರೇರಿತ ಯಾವುದೇ ಮುದ್ರಣ ಕಾರ್ಯವನ್ನು ಕೈಗೊಳ್ಳುವ ಸಂದರ್ಭದಲ್ಲಿ ನಿಗದಿತ ಮಾರ್ಗಸೂಚಿಯನ್ನು ತಪ್ಪದೇ ಪಾಲಿಸಬೇಕು. ಇದನ್ನು ಉಲ್ಲಂಘಿಸುವವರ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ (1951) 127(ಎ) ಅಡಿ 6 ತಿಂಗಳ ಶಿಕ್ಷೆ, 2,000 ದಂಡ ಹಾಗೂ ಲೈಸೆನ್ಸ್ ರದ್ದು ಮಾಡಲಾಗುತ್ತದೆ” ಎಂದು ತಿಳಿಸಿದರು.

ಮುದ್ರಣದ ಮಾಹಿತಿಯನ್ನು ಅರ್ಜಿ ಪಡೆದು ನಮೂದಿಸಬೇಕು. ಇದರಲ್ಲಿ ಮುದ್ರಕರ ಹೆಸರು, ಅಭ್ಯರ್ಥಿ ವಿವರ, ವೆಚ್ಚ, ವಿಳಾಸ, ಪ್ರತಿಗಳ ಸಂಖ್ಯೆ ಇತ್ಯಾದಿ ವಿವರಗಳನ್ನು ನೀಡಬೇಕು ಸಮರ್ಪಕ ಮಾಹಿತಿ ಲಭ್ಯವಿಲ್ಲದಿದ್ದರೆ ಮುದ್ರಕರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು” ಎಂದು ತಿಳಿಸಿದರು.

“ಕೋಮುಭಾವನೆ, ಪ್ರಚೋದನೆಯಂತಹ ಪೋಸ್ಟರ್, ಕರಪತ್ರ, ಬ್ಯಾನರ್‌ಗಳನ್ನು ಮುದ್ರಿಸುವಂತಿಲ್ಲ, ಒಂದು ವೇಳೆ ಹಾಗೆ ಮುದ್ರಿಸಿದರೆ ಪ್ರಜಾಪ್ರತಿನಿಧಿ ಕಾಯ್ದೆಯಡಿ ಉಲ್ಲಂಘನೆಯಾಗುತ್ತದೆ. ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳು ₹95 ಲಕ್ಷದವರೆಗೆ ಮಾತ್ರ ಖರ್ಚು ಮಾಡಬೇಕು. ಪ್ರಚಾರದ ಪ್ರತಿ ಮಾಹಿತಿ ಸಲ್ಲಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಪ್ರಾದೇಶಿಕ ಭಾಷೆಗಳಲ್ಲಿ ವಿಜ್ಞಾನ ಸಂವಹನ ಕುರಿತ ವಿಚಾರ ಸಂಕಿರಣ

ಈ ಸಂದರ್ಭದಲ್ಲಿ ಸಿಪಿಐ(ಎಂ) ಪಕ್ಷದ ಮುಖಂಡ ಕೆ ಜಿ ವೀರೇಶ, ಜೆಡಿಎಸ್ ಪಕ್ಷದ ಕಾರ್ಯದರ್ಶಿ ರವಿ ಕುಮಾರ, ಬಿಜೆಪಿ ಕಾರ್ಯದರ್ಶಿ ತಿರುಮಲ ರೆಡ್ಡಿ, ಶಂಕರ್ ಕುಲಕರ್ಣಿ, ಅಮ್ ಆದ್ಮಿ ಪಕ್ಷದ ಮುಖಂಡರು ಸೇರಿದಂತೆ ಇತರರು ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಜಂತರ್ ಮಂತರ್‌ ಪ್ರತಿಭಟನೆಗೆ ದೆಹಲಿ ಪೊಲೀಸರ ನಿರ್ಬಂಧ; AIDSO ಖಂಡನೆ!

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಪೊಲೀಸರು ನಿರ್ಬಂಧ ಹೇರಿರುವುದನ್ನು ವಿಜಯನಗರ...

ಗದಗ | ಎಸ್ಸಿ, ಎಸ್ಟಿ ಜನಸಂಖ್ಯೆಗೆ ಅನುಗುಣವಾಗಿ  ಮೀಸಲಾತಿ ಪ್ರಮಾಣ ಹೆಚ್ಚಿಸಿ: ಬಾಲು ರಾಠೊಡ್ ಆಗ್ರಹ

"ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ...

ಹಾವೇರಿ | ರಾಜ್ಯ ಮಟ್ಟದ ಮಲ್ಲಕಂಬ ಸ್ಪರ್ಧೆ

ಶಾಲಾ ಶಿಕ್ಷಣ ಇಲಾಖೆಯ ಕರ್ನಾಟಕ ರಾಜ್ಯ ಮಟ್ಟದ 14/17 ವಯೋಮಿತಿಯ ಬಾಲಕ...

ರಾಯಚೂರು | ಪೋತ್ನಾಳ ಹಳ್ಳಕ್ಕೆ ನೀರು ಹರಿಸಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ: ಅಮೀನ್ ಪಾಷಾ ದಿದ್ದಗಿ

ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಜನರು ಹಾಗೂ ಜಾನುವಾರುಗಳಿಗೆ...