ಬೈಕ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಲಾರಿಯ ಚಕ್ರಕ್ಕೆ ಸಿಲುಕಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪಿರುವ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ನಗರದ ಕೂಡಲಸಂಗಮ ಚಿತ್ರಮಂದಿರದ ಬಳಿ ನಡೆದಿದೆ.
ತಾಲೂಕಿನ ಅರಳಹಳ್ಳಿ ಗ್ರಾಮದ ಹುಸೇನಪ್ಪ (45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ನಗರದ ಎಪಿಎಂಸಿಯಲ್ಲಿ ಹಮಾಲಿ ಕೆಲಸ ಮುಗಿಸಿಕೊಂಡು ತನ್ನ ಗ್ರಾಮಕ್ಕೆ ಹೋಗುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದ್ದು, ಹಿಂಬದಿ ಗಾಲಿಗೆ ಸಿಲುಕಿ, ತಲೆಗೆ ಬಲವಾದ ಪೆಟ್ಟು ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ: ರಾಯಚೂರು | ಕಲಬೆರಕೆ ಸೇಂದಿ ಮಾರಾಟ; ಇಬ್ಬರು ವಶಕ್ಕೆ
ಘಟನೆ ಜರುಗುತ್ತಿದ್ದಂತೆ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದ್ದು, ಸ್ಥಳಕ್ಕೆ ಶಹರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
