ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಖಂಡಿಸಿ ಲಾರಿ ಮಾಲೀಕರು ಪ್ರತಿಭಟನೆ ನಡೆಸಿದ್ದಾರೆ. ರಾಯಚೂರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ರಾಯಚೂರಿನಲ್ಲಿ ಲಾರಿ ಓನರ್ಸ್ ವೆಲ್‌ಫೇರ್ ಅಸೋಸಿಯೇಷನ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, “ತೈಲ ಬೆಲೆ ಹೆಚ್ಚಳದಿಂದ ಲಾರಿ ಮಾಲೀಕರು ತೀವ್ರ ಸಂಕಷ್ಟಕ್ಕೆ ಒಳಗಾಗುವಂತಾಗಿದೆ. ತೈಲ ದರ ಏರಿಕೆಯಾಗಿದ್ದು, ಕಡಿಮೆ ಬಾಡಿಗೆ ದೊರೆಯುತ್ತಿದೆ. ತೊಂದರೆ ಅನುಭವಿಸುವಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
“ಕಷ್ಟಪಟ್ಟು ಲೋಡಿಂಗ್ ಫಿಕ್ಸ್ ಮಾಡಿದಾಗ ಸರಕಿನ ಮಾಲೀಕರು ಅತ್ಯಂತ ಕಡಿಮೆ ದರದಲ್ಲಿ ಲಾರಿ ಬಾಡಿಗೆಗೆ ಕೇಳುತ್ತಾರೆ. ವಾಹನದ ಖರ್ಚು ವೆಚ್ಚಗಳು ಹೆಚ್ಚಾಗಿದ್ದು, ಸಾಲಸೂಲ ಮಾಡಿ ವಾಹನಗಳನ್ನು ಖರೀದಿಸಿರುವ ಮಾಲೀಕರು ಚಾಲಕರ ಮತ್ತು ಕ್ಲಿನರ್ ವೇತನ ನೀಡಲು ಸಾಧ್ಯವಾಗುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿfದಾರೆ.
ಕೂಡಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.
ವರದಿ : ಹಫೀಜುಲ್ಲ