ರಾಯಚೂರು | ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ ನಾಯಕರನ್ನು ಭಾರೀ ಅಂತರದಿಂದ ಗೆಲ್ಲಿಸಿ: ಸಚಿವ ಬೋಸರಾಜು

Date:

Advertisements

ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ ನಾಯಕ ಅವರನ್ನು ಭಾರೀ ಅಂತರದಿಂದ ಜಯಸಾಧಿಸಲು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇಂದಿನಿಂದಲೇ ಕೆಲಸ ಪ್ರಾರಂಭಿಸಿ ಜನರನ್ನು ಜಾಗೃತಗೊಳಿಸಬೇಕಾಗಿದೆ ಎಂದು ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜು ಕರೆ ನೀಡಿದರು.

ರಾಯಚೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ ನಾಯಕ ಅವರು ಬೃಹತ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ ವೇಳೆ ಮಾತನಾಡಿದರು.

“ಜಿಲ್ಲಾಧಿಕಾರಿಯಾಗಿ ಸರ್ಕಾರದ ಅನೇಕ ಹುದ್ದೆಗಳನ್ನು ನಿರ್ವಹಿಸಿರುವ ಜಿ ಕುಮಾರ ನಾಯಕ ಪ್ರಾಮಾಣಿಕ, ಜನರ ನೋವಿಗೆ ಸ್ಪಂದಿಸುವ ವ್ಯಕ್ತಿತ್ವ ಹೊಂದಿದ್ದಾರೆ. ಅವರ ಸೇವಾ ಅನುಭವ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿಯಾಗಲಿದೆ” ಎಂದರು.

Advertisements

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಜಯ್‌ಸಿಂಗ್ ಮಾತನಾಡಿ, “ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ವಾಧಿಕಾರಿ ಸರ್ಕಾರ ಅಂತ್ಯಗೊಳಿಸಲು ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಉತ್ತರಿಸಬೇಕಾಗಿದೆ. ಹಿರಿಯ ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿರುವ ಜಿ ಕುಮಾರ ನಾಯಕ ಅವರನ್ನು ಅತಿ ಹೆಚ್ಚು ಮತಗಳಿಂದ ಗೆಲ್ಲಿಸಲು ಜನರು ಅಶೀರ್ವದಿಸಬೇಕು” ಎಂದು ಕೋರಿದರು.

ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ ನಾಯಕ ಮಾತನಾಡಿ, “ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಅವಕಾಶ ನೀಡಿದ್ದು, ಚುನಾವಣೆಯಲ್ಲಿ ಮತ ನೀಡುವ ಮೂಲಕ ಕ್ಷೇತ್ರದ ಜನರ ಅಭಿವೃದ್ಧಿಗೆ ಅವಕಾಶ ಕಲ್ಪಿಸಬೇಕು” ಎಂದು ಮನವಿ ಮಾಡಿದರು.

ಕಾರ್ಯಕ್ರಮಕ್ಕೂ ಮುನ್ನ ರಾಯಚೂರು ನಗರದ ಕರ್ನಾಟಕ ಸಂಘದಿಂದ ಆರಂಭವಾದ ಮೆರವಣಿಗೆ ಶೆಟ್ಟಿಭಾವಿ ವೃತ್ತ, ಸರಾಫ್ ಬಜಾರ್, ತೀನ್‌ಖಂದಿಲ್, ಬಟ್ಟೆ ಬಜಾರ್, ಮಹಾವೀರ ವೃತ್ತ, ಗಾಂಧಿ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಯಿತು. ತೆರೆದ ವಾಹನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ ನಾಯಕ ಮತ್ತು ಮುಖಂಡರು ಚುನಾವಣೆಯಲ್ಲಿ ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ರಾಯಚೂರು ಮತ್ತು ಯಾದಗಿರಿ ಜಿಲ್ಲೆಯ ಹಲವು ತಾಲೂಕಗಳಿಂದ ಆಗಮಿಸಿದ್ದ ಕಾಂಗ್ರೆಸ್ ಪಕ್ಷದ ಸಾವಿರಾರು ಕಾರ್ಯಕರ್ತರು ಮತ್ತು ಬೆಂಬಲಿಗರು ಅಭ್ಯರ್ಥಿ ಪರ ಜಯಘೋಷ ಮೊಳಗಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಬಿಜೆಪಿ ಸೋಲಿಸಿ, ಕಾಂಗ್ರೆಸ್ ಗೆಲ್ಲಿಸಿ: ಸಾಹಿತಿ ದೇವನೂರು ಮಹಾದೇವ ಕರೆ

ಮೆರವಣಿಗೆಯಲ್ಲಿ ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪೂರು, ಶಾಸಕರಾದ ಬಸನಗೌಡ ದದ್ದಲ, ಹಂಪಯ್ಯ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಎ ವಸಂತಕುಮಾರ, ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ್ ಭಯ್ಯಾಪೂರು, ಸುರಪುರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಪಾಟೀಲ್ ಇಟಗಿ, ಕೆಪಿಸಿಸಿ ಕಾರ್ಯದರ್ಶಿ ಕೆ ಶಾಂತಪ್ಪ, ರಾಮಣ್ಣ ಇರಬಗೇರಾ, ಯುವ ಕಾಂಗ್ರೆಸ್ ಮುಖಂಡ ರವಿ ಬೋಸರಾಜು, ಕಾಂಗ್ರೆಸ್ ಮುಖಂಡ ಮಹ್ಮದ್ ಶಾಲಂ, ಸ್ಟಾರ್ ಪ್ರಚಾರಕ ಅಂಬಣ್ಣ ಅರೋಲಿ, ಶೀಲಾ ಕುಮಾರ ನಾಯಕ ಸೇರಿದಂತೆ ಸಾವಿರಾರು ಕಾರ್ಯಕರ್ತರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X