ಪತ್ನಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದ ದುರುಳ ಪತಿಯೊಬ್ಬ, ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಾನವಿ ತಾಲೂಕಿನ ರಾಜೊಳ್ಳಿ ಗ್ರಾಮದಲ್ಲಿ ನಡೆದಿದೆ.
ಅಂಬಮ್ಮ(32) ಕೊಲೆಯಾದ ರ್ದುದೈವಿ. ಆಕೆಯನ್ನು ಕೊಲೆ ಮಾಡಿದ ಬಳಿಕ ಪತಿ ಖಾಸಿಮಪ್ಪ ನಾಯಕ(35) ಕೂಡ ತಮ್ಮ ಹೊಲದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಕಳೆದ 14 ವರ್ಷಗಳ ಹಿಂದೆ ಖಾಸಿಮಪ್ಪ ನಾಯಕ ಹಾಗೂ ಅಂಬಮ್ಮ ಇಬ್ಬರಿಗೂ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಕುಟುಂಬ ನಿರ್ವಹಣೆ ಮಾಡಬೇಕಾದ ಪತಿ ಕುಡಿತದ ಚಟಕ್ಕೆ ಬಿದ್ದಿದ್ದರಿಂದ ಪತ್ನಿ ಅಂಬಮ್ಮ ಅವರೇ ಕೂಲಿ ನಾಲಿ ಮಾಡಿ, ಬಂದ ಹಣದಿಂದ ಕುಟುಂಬ ನಿರ್ಹವಣೆ ಮಾಡುತ್ತಿದ್ದರು.
ಪತ್ನಿ ಅಂಬಮ್ಮ ಮಲಗಿದ್ದಾಗ ಕುಡಿದ ಮತ್ತಿನಲ್ಲಿದ್ದ ಖಾಸಿಮಪ್ಪ ಶುಕ್ರವಾರ ಬೆಳಿಗ್ಗೆ ತನ್ನ ಪತ್ನಿಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದನು. ಈ ಕುರಿತು ಮೃತಳ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡು ಆರೋಪಿಯನ್ನು ಸೆರೆ ಹಿಡಿಯುವುದಕ್ಕೆ ಮುಂದಾಗಿದ್ದರು.
ಕೃತ್ಯವೆಸಗಿ ಭಯಭೀತನಾಗಿದ್ದ ಪತಿ ಖಾಸಿಂಪ್ಪ ಹೆದರಿಕೊಂಡಿದ್ದು, ಶನಿವಾರ ಬೆಳಿಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಇತ್ತ ದಂಪತಿ ಮೃತಪಟ್ಟಿರುವುದರಿಂದ ತಮ್ಮ ಇಬ್ಬರು ಮಕ್ಕಳು ತಂದೆ ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಗ್ರಾಮಸ್ಥರು ಮತ್ತು ಮೃತನ ಕುಟುಂಬದವರೊಂದಿಗೆ ವಿಚಾರಣೆ ನಡೆಸಿದ್ದಾರೆ.
ಸಿಟಿಜನ್ ಜರ್ನಲಿಸ್ಟ್ : ಹಫೀಜುಲ್ಲ