ರಾಯಚೂರು | ಪೊಲೀಸರ ಕಿರುಕುಳದಿಂದ ವ್ಯಕ್ತಿ ಸಾವು; ಪತ್ನಿಯಿಂದ ದೂರು

Date:

ರಾಯಚೂರು ನಗರದ ನೇತಾಜಿನಗರ ಪೊಲೀಸ್ ಠಾಣೆಯ ಪೊಲೀಸರ ಕಿರುಕುಳದಿಂದ ನನ್ನ ಪತಿ ಸುನೀಲ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಸಂತ್ರಸ್ತೆ ನಾಗವೇಣಿ ಆರೋಪಿಸಿ ಈ ಕುರಿತು ನೇತಾಜಿನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -

ಗಾಂಜಾ ಮಾರಾಟದ ವಿಚಾರವಾಗಿ ನೇತಾಜಿನಗರದ ನಿವಾಸಿ ಸುನೀಲ್‌ ಅವರನ್ನು ನೇತಾಜಿನಗರ ಠಾಣೆಯ ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತ ನನ್ನ ಪತಿ 2024ರ ಡಿಸೆಂಬರ್‌ 31ರಂದು ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದನು. ಸುಟ್ಟಗಾಯಗಳಿಂದ ನರಳುತ್ತಿದ್ದ ಸುನೀಲ್‌ ಅವರಿಗೆ ರಾಯಚೂರು ರಿಮ್ಸ್‌ ಬೋಧಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದ್ದು, ಪೊಲೀಸರ ಕಿರುಕುಳದಿಂದಲೆಯೇ ನನ್ನ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಾವಿಗೆ ಪೊಲೀಸರೇ ಕಾರಣ” ಎಂದು ಆರೋಪಿಸಿ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಈ ಸುದ್ದಿ ಓದಿದ್ದೀರಾ? ಮಂಡ್ಯ | ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ರಂಗನತಿಟ್ಟು ನಾವಿಕರು; ಕಾಯಮಾತಿಗೆ ಪ್ರಶಾಂತ್‌ ಮೆತಲ್‌ ಮನವಿ

ಸಂತ್ರಸ್ತೆ ನೀಡಿದ ದೂರಿನ ಅನ್ವಯ ಕಲಂ 108, ಬಿಎನ್‌ಎಸ್‌ 2023ರ ಪ್ರಕಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...