ರಾಯಚೂರು | ಸಿಡಿಲು ಬಡಿದು ಮರದಡಿಯಲ್ಲಿ ನಿಂತಿದ್ದ ವ್ಯಕ್ತಿ ಸಾವು

Date:

ಧಾರಾಕಾರ ಮಳೆಗೆ ಹೊಲದಲ್ಲಿದ್ದ ಮರದ ಕೆಳಗೆ ನಿಂತಾಗ ಸಿಡಿಲು ಬಡಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಬಳಗಾನೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.

- Advertisement -

ಮಲ್ಲಪ್ಪ ಬಡಿಗೇರ (54) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಬಳಗಾನೂರು ಪಟ್ಟಣದಲ್ಲಿ ಶುಕ್ರವಾರ ಸಂಜೆ ಹೊಲದ ಕೆಲಸದಲ್ಲಿ ತೊಡಗಿದ್ದ ತಕ್ಷಣ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಮಳೆಯಿಂದ ತಪ್ಪಿಸಿಕೊಳ್ಳಲು ಆಸರೆಗೆ ಹೊಲದಲ್ಲಿದ್ದ ಮರದ ಕೆಳಗೆ ನಿಂತಿದ್ದರು. ಈ ವೇಳೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಬಳಗಾನೂರ ಪಟ್ಟಣದ ಹೊರವಲಯದಲ್ಲಿ ಸಂಜೆ 6 ಗಂಟೆ ಸುಮಾರಿಗೆ ಘಟನೆ ಜರುಗಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಬಳಗಾನೂರು ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...