ರಾಯಚೂರು | ಎಟಿಎಂನಲ್ಲಿ ಹಣ ಬಿಡಿಸುವ ವೇಳೆ ಮಹಿಳೆಯಿಂದ ಹಣ ದೋಚಿ ಪರಾರಿ

Date:

ಬ್ಯಾಂಕ್‌ನ ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಂಡು ಹಿಂತಿರುಗಿತ್ತಿದ್ದ ಮಹಿಳೆಯೊಬ್ಬರ ಲಕ್ಷಾಂತರ ರೂ. ಹಣ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

- Advertisement -

ನಗರದ ಲೋಹರವಾಡಿಯಲ್ಲಿರುವ ಎಸ್‌ಬಿಐ ಬ್ಯಾಂಕ್ ಬಳಿ ಎಟಿಎಂನಲ್ಲಿ ಹಣ ಡ್ರಾ ಮಾಡಲು ಬಂದಿದ್ದ ಮಹಿಳೆಯು ಒಂದು ಲಕ್ಷ ರೂಪಾಯಿ ಹಣ ಡ್ರಾ ಮಾಡಿಕೊಂಡು ಹೊರ ಬರುತ್ತಿರುವಾಗ ಆರೋಪಿಗಳು ಹೋಂಡಾ ಶೈನ್ ಬೈಕ್‌ನಲ್ಲಿ ಬಂದು ರಸ್ತೆಯಲ್ಲಿಯೇ ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಹಾಡುಹಗಲೇ ರಸ್ತೆಯಲ್ಲಿ ಹಣದೋಚಿ ಪರಾರಿಯಾಗುತ್ತಿರುವ ವಿಡಿಯೋ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ ನಿಖಿಲ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಬ್ಯಾಂಕ್ ಸುತ್ತಮುತ್ತಲಿನಲ್ಲಿರುವ ಸಿಸಿ ಟಿವಿ ಕ್ಯಾಮೆರಾ ದೃಶ್ಯವನ್ನು ಪರಿಶೀಲನೆ ನಡೆಸಿದರು. ಈ ಕುರಿತು ಸದರ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಸರೆಗೆ ಪೊಲೀಸರು ಬಲೆ ಬೀಸಿದ್ದಾರೆ.

“ಬ್ಯಾಂಕ್, ಎಟಿಎಂ ಸುತ್ತಮುತ್ತಲೂ ದುಷ್ಟರು ಕಾದು ಕುಳಿತಿರುತ್ತಾರೆ. ಎಟಿಎಂ ಪಕ್ಕದಲ್ಲೇ ಬೈಕ್ ನಿಲ್ಲಿಸಿ ಜನಸಾಮಾನ್ಯರಂತೆ ಮೊಬೈಲ್‌ನಲ್ಲಿ ಮಾತನಾಡಿಕೊಂಡು ತಿರುಗಾಡುತ್ತಿರುತ್ತಾರೆ. ಹಣ ಡ್ರಾ ಮಾಡಲು ಬಂದವರು ಅವರ ಚಲನವಲನಗಳನ್ನು ಗಮನಿಸದೇ ಇರುವುದರಿಂದ ಇಂತಹ ಕಳ್ಳತನದ ಘಟನೆಗಳು ನಡೆಯುತ್ತಿವೆ” ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬೈಕ್ – ಬಸ್ ನಡುವೆ ಅಪಘಾತ; ಮದುವೆಯಾದ ಎರಡೇ ದಿನಕ್ಕೆ ಯುವಕ ಸಾವು

ಯಾಮಾರಿದರೆ ಸಾಕು ಕೂಡಲೇ ದಾಳಿ ಮಾಡಿ  ಹಣ ದೋಚಿ ಪರಾರಿಯಾಗುತ್ತಾರೆ. ಇಂತಹ ಪ್ರಕರಣಗಳು  ಜಿಲ್ಲೆಯಲ್ಲಿ ನಡೆಯುತ್ತಿದ್ದು, ಗ್ರಾಮೀಣ ಭಾಗದ ಜನರ ಸುರಕ್ಷತೆ ಮತ್ತು ಅನಕ್ಷರತೆಯನ್ನೇ ಬಂಡವಾಳ ಮಾಡಿಕೊಂಡು ಗ್ರಾಹಕರಂತೆ ಬಂದು ಹಣ ಡ್ರಾ ಮಾಡಿಕೊಡುವ ನೆಪದಲ್ಲಿ ಹಣ ದೋಚುತ್ತಿದ್ದಾರೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...