ಹೋಳಿಹಬ್ಬ ಆಚರಿಸಿ ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಕೊಚ್ಚಿಹೋದ ಘಟನೆ ರಾಯಚೂರಿನ ಗಿಲ್ಲೆಸುಗೂರು ಕ್ಯಾಂಪ್ ಬಳಿಯ ಕಾಲುವೆಯಲ್ಲಿ ನಡೆದಿದೆ.
ಯರಗೇರಾ ಗ್ರಾಮದ ಕಿರಾಣಿ ಅಂಗಡಿ ವ್ಯಾಪಾರಿ ಮಹಾದೇವ(30)ನನ್ನು ನೀರಿನಲ್ಲಿ ಕೊಚ್ಚಿ ಹೋದ ದುರ್ದೈವಿ ಎಂದು ಗುರುತಿಸಲಾಗಿದೆ. ಸಂಭ್ರಮದಿಂದ ಹೋಳಿ ಆಚರಣೆ ಮಾಡಿದ ನಂತರ, ಮೂವರು ಸ್ನೇಹಿತರು ಕಾಲುವೆಗೆ ಈಜಾಡಲು ತೆರಳಿದ್ದರು. ಕಾಲುವೆಯಲ್ಲಿ ನೀರು ಹರಿಬಿಟ್ಟಿದ್ದರಿಂದ ಈಜಲು ಆಗದೆ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ರಾಯಚೂರು |ಅಡುಗೆ ಸಿಲಿಂಡರ್ ಸ್ಫೋಟ; ಕುರಿಗಳ ಸಜೀವ ದಹನ, ಗುಡಿಸಲು ಭಸ್ಮ
ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆ ಹುಡುಕಾಟ ನಡೆಸಲಾಗಿದೆ. ಸ್ವಲ್ಪ ಸಮಯದ ತರುವಾಯ ನೆರೆಯ ತೆಲಂಗಾಣ ರಾಜ್ಯದ ಗ್ರಾಮವೊಂದರಲ್ಲಿ ಮೃತದೇಹ ಪತ್ತೆಯಾಗಿದೆ. ಕಾಲುವೆಯಿಂದ ಹೊರ ತೆಗೆದು ಶವವನ್ನು ಅಲ್ಲಿನ ಸ್ಥಳೀಯ ಸಾರ್ವಜನಿಕ ಆಸ್ಪತ್ರೆ ಶವಗಾರಕ್ಕೆ ರವಾನಿಸಲಾಗಿದೆ. ಘಟನೆ ಸಂಬಂಧ ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
