ರಾಯಚೂರು | ಆರೋಪಿಗಳನ್ನು ಬಂಧಿಸುವಲ್ಲಿ ಮಣಿಪುರ ಸರ್ಕಾರ ವಿಫಲ; ದಸಂಸ ಕಿಡಿ

Date:

Advertisements

ಮಣಿಪುರದಲ್ಲಿ ಬುಡಕಟ್ಟು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ, ಸಾಮೂಹಿಕ ಅತ್ಯಾಚಾರ ಎಸಗಿದವರನ್ನು ಬಂಧಿಸುವಲ್ಲಿ ಅಲ್ಲಿನ ಸರ್ಕಾರ ವಿಫಲವಾಗಿದೆ. ಕೂಡಲೇ ಆರೋಪಿಗಳನ್ನು ಬಂಧಿಸಿ, ಕಠಿಣ ಶಿಕ್ಷೆ ವಿಧಿಸಬೇಕು ಎಂದು ದಲಿತ ಸಂಘರ್ಷ ಸಮಿತಿ (ದಸಂಸ-ಭೀಮವಾದ) ಆಗ್ರಹಿಸಿದೆ.

ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ ದಸಂಸ ಕಾರ್ಯಕರ್ತರು ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಮಣಿಪುರದಲ್ಲಿ ಮೇ 4ರಂದು ಮಹಿಳೆಯರ ಮೇಲೆ ದುಷ್ಕರ್ಮಿಗಳ ಗುಂಪು ದೌರ್ಜನ್ಯವೆಸಗಿದೆ. ಪ್ರಕರಣ ನಡೆದು ಒಂದೂವರೆ ತಿಂಗಳಾಗಿದೆ. ಎಫ್‌ಐಆರ್‌ ಕೂಡ ದಾಖಲಾಗಿದೆ. ಆದರೂ, ಆರೋಪಿಗಳನ್ನು ಬಂಧಿಸಲಾಗಿಲ್ಲ. ದುಷ್ಕರ್ಮಿಗಳನ್ನು ಸೆರೆಹಿಡಿಯುವಲ್ಲಿ ಅಲ್ಲಿನ ಬಿಜೆಪಿ ಸರ್ಕಾರ ವಿಫಲವಾಗಿದೆ” ಎಂದು ಕಿಡಿಕಾರಿದ್ದಾರೆ.

“ಹಿಂಸಾಚಾರ ಆರಂಭವಾಗಿ ಮೂರು ತಿಂಗಳು ಕಳೆಯುತ್ತಿವೆ. ಆದರೂ, ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿಲ್ಲ. ಅವರ ‘ಭೇಟಿ ಬಚಾವೋ, ಭೇಟಿ ಪಡಾವೋ’ ಎಂಬ ಹೇಳಿಕೆ ಹೆಸರಿಗೆ ಮಾತ್ರಸಿಮಿತವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಎನ್.ನರಸಿಂಹಲು, ಎಂ.ಬಾಬುಹರಿಜನವಾಡ, ಹನುಮೇಶ ಅರೋಲಿ, ಫಕ್ರುದ್ದೀನ್ ಅಲಿ ಅಹ್ಮದ್, ಸೈಯದ್‌ ವಾಹೀದು ಸೇರಿದಂತೆ ಹಲವರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಭಾರತ ಸ್ವಾವಲಂಬಿಯಾಗಲು ಗೃಹ ಕೈಗಾರಿಕೆಗಳು ಮುಂಚೂಣಿಗೆ ಬರಬೇಕು: ಡಾ. ವೀರೇಶ ಬಡಿಗೇರ

ವರ್ಣ, ವರ್ಗ, ಲಿಂಗರಹಿತ ಸಮಾಜ ಸ್ಥಾಪನೆಯು ಗಾಂಧಿಯ ಕನಸಾಗಿತ್ತು. ಸ್ವದೇಶಿ ಚಳವಳಿ,...

ತುಮಕೂರು ದಸರಾ ಜಂಬೂಸವಾರಿ : ಸಾಂಸ್ಕೃತಿಕ ವೈಭವ

 ತುಮಕೂರು ದಸರಾ ಉತ್ಸವದ ಅಂಗವಾಗಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...

ಕೊಪ್ಪಳ | ಉದಯೋನ್ಮುಖ ಕವಿಗಳು ಕವಿತೆ ರಚಿಸಲು ಆದ್ಯತೆ ನೀಡಬೇಕು: ವಿ. ಕುಲಪತಿ ಮಲ್ಲಿಕಾ ಘಂಟಿ

'ಸಾಹಿತ್ಯದ ಕೆಲಸ ಸ್ಥಗಿತಗೊಂಡ ಜನರ ಬದುಕನ್ನು ಚಲನಶೀಲನಗೊಳಿಸುವಂತದ್ದಾಗಿದ್ದು, ಈ ದಿಸೆಯಲ್ಲಿ ಉದಯೋನ್ಮುಖ...

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

Download Eedina App Android / iOS

X