ರಾಯಚೂರು | ಮಣಿಪುರ ಘಟನೆ; ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ

Date:

ದೇಶದಲ್ಲಿ ಮಹಿಳೆಯರು, ಬಾಲಕಿಯರು ಮತ್ತು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ, ದೌರ್ಜನ್ಯ, ಹಲ್ಲೆ ನಡೆಸುತ್ತಿರುವ ಆರೋಪಿಗಳನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ರಾಯಚೂರು ಜಿಲ್ಲಾಧಿಕಾರಿ ಮೂಲಕ ರಾಷ್ಟಪತಿಗೆ ಮನವಿ ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡ ಮೌನೇಶ್ ಜಾಲವಾಡಗಿ, “ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಪ್ರಕರಣ ಮರು ತನಿಖೆ ನಡೆಸಿ ಆರೋಪಿಗಳನ್ನು ಕೂಡಲೇ ಬಂಧಿಸಿ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡಬೇಕು. ರಾಯಚೂರು ಜಿಲ್ಲೆಯ ಗಿಲ್ಲೆಸುಗೂರು ಕ್ಯಾಂಪಿನ ಬಾಲಕಿಯ ಅನುಮಾನಸ್ಪದ ಸಾವಿನ ಬಗ್ಗೆ ತನಿಖೆ ನಡೆಸಬೇಕು. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ 11 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಎಸಗಿದ ಆರೋಪಿಗಳನ್ನು ಗಲ್ಲು ಶಿಕ್ಷೆಗೆ ಒಳಪಡಿಸಬೇಕು” ಎಂದು ಒತ್ತಾಯಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮಣಿಪುರದಲ್ಲಿ ನಡೆದ ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಬೆತ್ತಲೆ ಮೆರವಣಿಗೆ ಘಟನೆಯಿಂದ ಇಡೀ ಭಾರತ ದೇಶವೇ ತಲೆ ತಗ್ಗಿಸುವಂತಾಗಿದೆ. ನಿತ್ಯ ಮಹಿಳೆಯರ ಮೇಲೆ ದೌರ್ಜನ್ಯ ನಡೆದರೂ ಪ್ರಧಾನಿಯವರು ಮೌನವಾಗಿದ್ದಾರೆ” ಎಂದು ಆರೋಪಿಸಿದರು . ಆರೋಪಿಗಳಿಗೆ ಗೆಲ್ಲು ಶಿಕ್ಷೆಗೆ ಒಳಪಡಿಸಬೇಕು , ಎಂದು ಒತ್ತಾಯಿಸಿದರು.

ದೇಶ ಮತ್ತು ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ನಿತ್ಯವು ಮಹಿಳೆಯರ ಮೇಲೆ ದೌರ್ಜನ್ಯ, ಹಲ್ಲೆ, ಅತ್ಯಾಚಾರ ಪ್ರಕರಣಗಳು ನಡೆಯುತ್ತಿದ್ದು, ಇಂತಹ ದುಷ್ಕೃತ್ಯಕ್ಕೆ ಕಡಿವಾಣ ಹಾಕಿ ಮಹಿಳೆಯರಿಗೆ ರಕ್ಷಣೆ ನೀಡಬೇಕು. ಆರೋಪಿಗಳನ್ನು ಗಲ್ಲು ಶಿಕ್ಷೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿದರು.

ದಲಿತ ವಿದ್ಯಾರ್ಥಿ ಪರಿಷತ್‌ ಮಸ್ಕಿ ತಾಲೂಕು ಸಂಚಾಲಕ ಮೌನೇಶ ತುಗ್ಗಲದಿನ್ನಿ, ಡಿಎಸ್‌ಎಸ್ ಮುಖಂಡ ಎಂ.ಈರಣ್ಣ ಸೇರಿದಂತೆ ನೂರಾರು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ದಾವಣಗೆರೆ : ಜಿಲ್ಲೆಯ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಹಾಗೂ ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘಟನೆ ಜಿಲ್ಲಾ ಸಮಿತಿ ಕಾರ್ಯಕರ್ತರು ಒಗ್ಗೂಡಿ ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದ ಅತ್ಯಾಚಾರ ಘಟನೆ ಖಂಡಿಸಿ ನಗರದ ಗಾಂಧಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದರು.

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಭಾರತಿ ಕೆ. ಮಾತನಾಡಿ, “ಮಣಿಪುರ ಘಟನೆ ತೀವ್ರ ಆತಂಕ ಮೂಡಿಸಿದೆ. ಅಲ್ಲಿ ಇಬ್ಬರು ಮಹಿಳೆಯರನ್ನು ಪೊಲೀಸರ ವಶದಿಂದ ಕರೆದೊಯ್ದು, ಬೆತ್ತಲೆ ಮಾಡಿ, ಪರೇಡ್ ಮಾಡಿ ನಂತರ ಅವರನ್ನು ಸಾಮೂಹಿಕ ಅತ್ಯಾಚಾರಕ್ಕೆ ಒಳಪಡಿಸಲಾಗಿದೆ. ಸಮಾಜಘಾತುಕ ಶಕ್ತಿಗಳಿಂದ ತನ್ನ ಸಹೋದರಿಯನ್ನು ರಕ್ಷಿಸಲು ಯತ್ನಿಸುತ್ತಿದ್ದ ಸಂತ್ರಸ್ತೆಯ ಸಹೋದರನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಭೀಕರ ಘಟನೆಯು ಮೇ 4 ರಂದೇ ನಡೆದಿದ್ದು, ಇತ್ತೀಚೆಗೆ ಬೆಳಕಿಗೆ ಬಂದಿದೆ. ಈ ಘಟನೆಯು ಮಹಿಳೆಯರಿಗಷ್ಟೇ ಅಲ್ಲ, ದೇಶದ ಸಮಸ್ತ ಜನತೆಗೆ ಅತ್ಯಂತ ಕಳವಳಕಾರಿ ಮತ್ತು ಅವಮಾನಕರವಾಗಿದೆ. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳೆರಡೂ ಅಲ್ಲಿ ಸೃಷ್ಟಿಯಾಗಿರುವ ಕರಾಳ ಪರಿಸ್ಥಿತಿಗೆ ನೇರವಾಗಿ ಮತ್ತು ಪರೋಕ್ಷವಾಗಿ ಹೊಣೆಗಾರರಾಗಿದ್ದಾರೆ” ಎಂದು ಆರೋಪಿಸಿದರು.

ಜಿಲ್ಲಾ ಸಂಚಾಲಕ ಪರಶುರಾಮ್ ಮಾತನಾಡಿ, “ಈ ಘಟನೆ ಇಡೀ ಸಮಾಜವೇ ತಲೆತಗ್ಗಿಸುವಂತಿದೆ. ಮಹಿಳೆಯರಿಗೆ ಕನಿಷ್ಠ ಗೌರವ ನೀಡಬೇಕೆಂಬುದನ್ನೂ ತಿಳಿಯದ ಮೃಗೀಯ ವರ್ತನೆಯಾಗಿದೆ. ಆರೋಪಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮಣಿಪುರ ಘಟನೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಎಸ್‌ಎಫ್‌ಐ ಕರೆ

“ಸರ್ಕಾರಗಳು ಅಶ್ಲೀಲ ಸಿನಿಮಾ ಸಾಹಿತ್ಯಕ್ಕೆ ಕಡಿವಾಣ ಹಾಕದೆ ಎಲ್ಲರಿಗೂ ಸಿಗುವಂತೆ ಮಾಡಿವೆ. ಅಶ್ಲೀಲ ಸಿನಿಮಾ ಸಾಹಿತ್ಯವನ್ನು ಬ್ಯಾನ್ ಮಾಡಿ, ಆದರ್ಶ ವ್ಯಕ್ತಿಗಳ ಚರಿತ್ರೆಯನ್ನು ಇಂದಿನ ಮಕ್ಕಳಿಗೆ ಯುವಕರಿಗೆ ನೀಡಬೇಕು. ಬದಲಾವಣೆಗೆ ಇದೊಂದೇ ಮಾರ್ಗ” ಎಂದರು.

ಪ್ರತಿಭಟನೆಯಲ್ಲಿ ಮಮತಾ, ಸರಸ್ವತಿ, ಸುಷ್ಮಾ, ಸರಸ್ವತಿ ದುರ್ಗ, ಲಲಿತಮ್ಮ, ಸುಧಮ್ಮ ಇಂದಿರಾ, ಅನಿಲ್ ಕುಮಾರ, ಗುರು, ಮನು ಹಾಗೂ ಸಂಘಟನೆಯ ಕಾರ್ಯಕರ್ತರು ಭಾಗವಹಿಸಿದ್ದರು

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ರಾಯಚೂರು | ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ: ಬಿ.ವಿ ನಾಯಕ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ರಾಯಚೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿಯಾಗಿದ್ದೇನೆ....

ತುಮಕೂರು | ಕಲೆಯ ಗ್ರಹಿಕೆ ಮೇಲೆ ನಿರ್ಬಂಧ ಹೇರುವುದು ಅಪಾಯಕಾರಿ: ವಿಮರ್ಶಕ ರಾಘವೇಂದ್ರರಾವ್

ಕಲೆಯ ಗ್ರಹಿಕೆ ಮೇಲೆ ನಿರ್ಬಂಧಗಳನ್ನು ಹೇರುವುದು ಅಪಾಯಕಾರಿಯಾಗಿದೆ. ಗ್ರಹಿಕೆಯು ನಿಯಮಬದ್ಧವಾಗಿದ್ದರೂ ನಿರ್ಬಂಧ...

ಗದಗ | ಪ್ರತಿಯೊಬ್ಬರಿಗೂ ಮುಖ್ಯವಾದ ಸಂಪತ್ತು ಆರೋಗ್ಯ; ಎಂಎಲ್‌ಸಿ ಸಂಕನೂರ

ಪ್ರತಿಯೊಬ್ಬರಿಗೂ ಆರೋಗ್ಯ ಸಂಪತ್ತು ಮುಖ್ಯವಾದ ಸಂಪತ್ತಾಗಿದೆ. ನೌಕರರು ತಮ್ಮ ಆರೋಗ್ಯ ಸಂರಕ್ಷಣೆಗೆ...

ತುಮಕೂರಿನಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಸ್ವಾಮೀಜಿಗಳ ಒತ್ತಾಯ

ಮುಂದಿನ ಲೋಕಸಭಾ ಚುನಾವಣೆಗೆ ತುಮಕೂರು ಕ್ಷೇತ್ರದಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ಕೊಡುವಂತೆ...