ರಾಯಚೂರು | ಪ್ರಯಾಗರಾಜ್‌ನ ಕುಂಭಮೇಳದಲ್ಲಿ ಸೂಕ್ತ ವ್ಯವಸ್ಥೆಯಿಲ್ಲದೆ ಹಲವು ಮಂದಿ ಸಾವು: ಎನ್ ಎಸ್ ಬೋಸರಾಜ್

Date:

Advertisements

ಪ್ರಯಾಗ್‌ರಾಜ್‌ನಲ್ಲಿ ನಡೆಯುವ ಕುಂಭಮೇಳದ ಬಗ್ಗೆ ಉತ್ತರ ಪ್ರದೇಶ ಹಾಗೂ ಕೇಂದ್ರದ ಬಿಜೆಪಿ ಸರ್ಕಾರ ದೊಡ್ಡ ಮಟ್ಟದಲ್ಲಿ ಪ್ರಚಾರ ಪಡೆದಿದ್ದು, ಈಗ ಅಲ್ಲಿ ಸೂಕ್ತ ವ್ಯವಸ್ಥೆವಿಲ್ಲದೆ ಹಲವು ಮಂದಿ ಸಾವನ್ನಪ್ಪಿದ್ದಾರೆ. ಇದರ ಬಗ್ಗೆ ಪ್ರಶ್ನೆ ಮಾಡಿದರೆ ಹಿಂದೂ ವಿರೋಧಿ, ದೇಶದ್ರೋಹಿಗಳೆಂದು ಪಟ್ಟಕಟ್ಟುತ್ತಾರೆ ಎಂದು ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜು ಆಕ್ರೋಶ ವ್ಯಕ್ತಪಡಿಸಿದರು.

ರಾಯಚೂರು ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, “ದೆಹಲಿ ರೈಲ್ವೆ‌ ನಿಲ್ದಾಣದಲ್ಲಿ ಸರಿಯಾದ ವ್ಯವಸ್ಥೆಯಿಲ್ಲದೆ ನೂರಾರು ಮಂದಿ ಭಕ್ತರು ಮರಣ ಹೊಂದಿದ್ದಾರೆ. ಸರಿಯಾದ ಅಂಕಿಸಂಖ್ಯೆ ನೀಡದೆ ತಮ್ಮ ವೈಫಲ್ಯ ಮರೆಮಾಚುತ್ತಿದ್ದಾರೆ‌. ವ್ಯವಸ್ಥೆಯ ಬಗ್ಗೆ ವಿರೋಧ ಪಕ್ಷದವರು ಏನಾದರೂ ಪ್ರಶ್ನಿಸಿದರೆ ಹಿಂದೂ ವಿರೋಧಿ, ಧರ್ಮವಿರೋಧಿಗಳೆಂದು ಹೇಳುತ್ತಾರೆ” ಎಂದರು.

“ಮಾಜಿ ಪ್ರಧಾನಿ ದೇವೆಗೌಡರು ಮಹಾದಾಯಿ ಯೋಜನೆ ಹಾಗೂ ಮೇಕೆದಾಟು ಯೋಜನೆ ಬಗ್ಗೆ ಹೋರಾಟ ಮಾಡೋಣವೆಂದು ಕಾಂಗ್ರೆಸ್ ನಾಯಕರಿಗೆ ಹೇಳಿರುವುದು ಹಾಸ್ಯಾಸ್ಪದ. ಅವರು ಎನ್‌ಡಿಎ ಸರ್ಕಾರದ ಭಾಗವಾಗಿದ್ದು, ರಾಜ್ಯ ಸಭೆಯಲ್ಲಿ ಪ್ರಧಾನಿ‌ ಮೋದಿಯನ್ನು ಹೋಗಳಿದ್ದೇ ಆಗಿದೆ. ಆದರೆ ಪ್ರಧಾನಿ ಬಳಿ ಹೋಗಿ ಸಹಿಮಾಡಿಸಿಕೊಳ್ಳಲು ಸಾಧ್ಯವಾಗಿಲ್ಲ” ಆಕ್ರೋಶ ವ್ಯಕ್ತಪಡಿಸಿದರು.

Advertisements

“ದೇವೆಗೌಡರು ವಿಧಾನಸಭೆ ಚುನಾವಣೆಗೂ ಮುಂಚೆ, ʼನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಒಂದು ದಿನದಲ್ಲಿ ಮಹದಾಯಿ ಯೋಜನೆಗೆ ಜಾರಿಗೊಳಿಸುತ್ತೇವೆʼ ಅಂದು ಹೇಳಿದ್ದರು. ಈಗ ಏನಾಗಿದೆ? ಪ್ರಧಾನಿ ಮೋದಿ ಬಳಿ ಚರ್ಚೆ ಮಾಡುವ ಧೈರ್ಯವಿಲ್ಲವೇ” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಅತಿಥಿ ಉಪನ್ಯಾಸಕರ ಕನಿಷ್ಠ ವೇತನ ಹೆಚ್ಚಳಕ್ಕೆ ಆಗ್ರಹ

“ರಾಯಚೂರು ನಗರ ಸೇರಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಇಲಾಖೆಗೆ ಬಿಡುಗಡೆಯಾದ ಅನುದಾನವನ್ನು ಸರಿಯಾಗಿ ಬಳಸಿಕೊಂಡು ಕೆರೆಗಳ ಸಂರಕ್ಷಣೆ ಹಾಗೂ ಅಭಿವೃದ್ಧಿ ಮಾಡಲಾಗುತ್ತಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಣ ದುರ್ಬಳಕೆಯಾದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇಲಾಖೆಯಲ್ಲಿ ಏನಾದರೂ ಲೋಪದೋಷಗಳು ಕಂಡುಬಂದಲ್ಲಿ ಸರಿಪಡಿಸಿ ಜನರಿಗೆ, ರೈತರಿಗೆ ಅನುಕೂಲ ಕಲ್ಪಿಸಲಾಗುವುದು” ಎಂದು ಭರವಸೆ ನೀಡಿದರು.

ಮಹಾನಗರ ಪಾಲಿಕೆಯ ಅಧ್ಯಕ್ಷೆ ನರಸಮ್ಮ ಮಾಡಗಿರಿ, ಸದಸ್ಯ ಜಯಣ್ಣ, ಮುಖಂಡರಾದ ಮಹಮ್ಮದ್ ಶಾಲಂ, ನರಸಿಂಹಲು ಮಾಡಗಿರಿ, ರಾಮಣ್ಣ ಇರಬಗೇರ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X