ರಾಯಚೂರು | ನಗರದ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್: ಪಾಲಿಕೆ ಆಯುಕ್ತ ಜುಬಿನ್

Date:

ನಗರದಲ್ಲಿ ಅಭಿವೃದ್ಧಿಗೆ ಸಾಕಷ್ಟು ಸವಾಲುಗಳಿದ್ದು, ಸಮಸ್ಯೆಗಳನ್ನು ಬಗೆಹರಿಸಲು ಸಚಿವರು, ಶಾಸಕರು, ಸಂಸದರು ಹಾಗೂ ಜಿಲ್ಲಾಧಿಕಾರಿಗಳ ಸಲಹೆ ಮೇರೆಗೆ ಎಲ್ಲಾ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರವೇ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ ರೂಪಿಸಲಾಗುವುದು ಎಂದು ರಾಯಚೂರು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೋಹೊತ್ರ ಹೇಳಿದರು.

- Advertisement -

ಡಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, “ನಗರದಲ್ಲಿ ಕುಡಿಯುವ ನೀರು, ಚರಂಡಿ ಸ್ವಚ್ಛತೆ, ಬೀದಿ ದೀಪ, ರಸ್ತೆ ಸೇರಿದಂತೆ ಅನೇಕ ಸಮಸ್ಯೆಗಳಿದ್ದು, ಪಾಲಿಕೆಗೆ ಇವೆಲ್ಲ ಸವಾಲುಗಳಿದ್ದಂತೆ. ಈಗಾಗಲೇ ನಗರದ ಸಮಸ್ಯೆಗಳ ಮಾಹಿತಿ ಪಡೆಯುತ್ತಿದ್ದು, ಮುಖ್ಯವಾಗಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗಿರುವುದು ಕಂಡುಬಂದಿದೆ. ಜೊತೆಗೆ ನಗರದಲ್ಲಿ ಧೂಳು ಹೆಚ್ಚಾಗಿದ್ದು, ನಗರವನ್ನು ಪ್ಲಾಸ್ಟಿಕ್ ಹಾಗೂ ಧೂಳು ಮುಖ್ತ ನಗರವನ್ನಾಗಿಸಲು ಮುಂದಿನ ದಿನಗಳಲ್ಲಿ ಯೋಜನೆಯನ್ನು ರೂಪಿಸಿ ಕಾರ್ಯ ಕೈಗೆತ್ತಿಕೊಳ್ಳಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಬೀದಿ ದೀಪಗಳ ಸಮರ್ಪಕ ನಿರ್ವಹಣೆ ಕುರಿತು ಪಾಲಿಕೆಯ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಚರ್ಚಿಸಲಾಗುವುದು. ನಗರದ ಎಲ್ಲ ಕಡೆಗಳಲ್ಲೂ ಬೀದಿ ದೀಪಗಳು ಸುವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಎಲ್ಲಾ ಕಡೆಗಳಲ್ಲಿ ವಾಟರ್ ಪೌಚ್‌ಗಳು ಬ್ಯಾನ್ ಆಗಿವೆ, ಆದರೆ ರಾಯಚೂರು ನಗರದಲ್ಲಿ ಮಾತ್ರ ನೀರಿನ ಪಾಕೆಟ್‌ಗಳು ಚಾಲ್ತಿಯಲ್ಲಿದ್ದು, ಮೂರು ವಾರಗಳಲ್ಲಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

“ನಗರದ ಅಭಿವೃದ್ಧಿಗೆ ಆದಾಯವು ಬಹುಮುಖ್ಯವಾಗಿದ್ದು, ಸಾರ್ವಜನಿಕರು ಪಾಲಿಕೆಗೆ ಕಟ್ಟುವ ತೆರಿಗೆಯನ್ನು ಸಮರ್ಪಕವಾಗಿ ಕಟ್ಟಬೇಕಾಗುತ್ತದೆ. ತೆರಿಗೆ ಸರಿಯಾಗಿ ಪಾವತಿ ಮಾಡಿದ್ದಲ್ಲಿ ನಗರದ ಅಭಿವೃದ್ಧಿಯೂ ಸುಲಭವಾಗಿ ನಡೆಯುತ್ತದೆ. ನಗರದಲ್ಲಿ ವಾರ್ಡ್‌ವಾರು ಮನೆ ಮನೆಗಳಿಗೆ ತೆರಳಿ ತ್ಯಾಜ್ಯವನ್ನು ಸಂಗ್ರಹಿಸಲಾಗುತ್ತಿದೆ. ಆದರೆ ಕಸವನ್ನು ಜಂಕ್ ಯಾರ್ಡ್‌ಗೆ ಸಾಗಿಸುವಾಗಿ ಸರಿಯಾದ ನಿರ್ವಹಣೆ ಇಲ್ಲದೆ ಕಸ ರಸ್ತೆಯ ಮೇಲೆ ಬೀಳುವ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆ ಅಧಿಕಾರಿಗಳು ಮತ್ತು ಕಸ ಸಂಗ್ರಹಣೆ, ವಿಲೇವಾರಿ ಹಾಗೂ ಸಾಗಾಣೆ ಮಾಡುವ ಸಿಬ್ಬಂದಿಗೆಳಿಗೆ ಸರಿಯಾಗಿ ನಿರ್ವಹಣೆ ಮಾಡುವಂತೆ ಸೂಚಿಸಲಾಗುವುದು. ನಗರದಲ್ಲಿ ಐತಿಹಾಸಿಕ ಸ್ಥಳಗಳು ಹಾಗೂ ಸರ್ಕಾರಿ ಆಸ್ತಿಗಳನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಕೂಡಲೇ ಒತ್ತುವರಿಯಾದ ಎಲ್ಲ ಸ್ಥಳಗಳಿಗೆ ಭೆಟಿ ನೀಡಿ ಅತಿಕ್ರಮಿಸಿಕೊಂಡಿರುವ ಸ್ಥಳಗಳನ್ನು ತೆರವುಗೊಳಿಸಲು ಯೋಜನೆ ರೂಪಿಸಲಾಗುವುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಅಕ್ರಮ ಆಸ್ತಿ ಆರೋಪ; ಜಿಪಂ ಸಹಾಯಕ ಲೆಕ್ಕಾಧಿಕಾರಿ ಮನೆಗೆ ಲೋಕಾಯುಕ್ತ ದಾಳಿ

ಈ ಸಂದರ್ಭದಲ್ಲಿ ಉಪ ಆಯುಕ್ತ ಗುರುಸಿದ್ದಯ್ಯ ಹಿರೇಮಠ, ಅಭಿವೃದ್ದಿ ಆಯುಕ್ತ ಅನಿಲ್, ವಲಯ ಆಯುಕ್ತ ಮೆಹಬೂಬ್ ಜಿಲಾನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...