ರಾಯಚೂರು | ರಕ್ತಸ್ರಾವದಿಂದ ಬಾಣಂತಿ ಸಾವು; ಮಟಮಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಡಿಸಿ ಭೇಟಿ

Date:

Advertisements

ರಾಯಚೂರು ತಾಲೂಕಿನ ರಬ್ಬಣಕಲ್ ಗ್ರಾಮದಲ್ಲಿ ಶುಕ್ರವಾರ ರಕ್ತಸ್ರಾವದಿಂದ ಬಾಣಂತಿ ಮೃತಪಟ್ಟಿದ್ದ ಬಗ್ಗೆ ಸತ್ಯಾಸತ್ಯತೆ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ನಿತೀಶ್ ಕೆ ಅವರು ಸೋಮವಾರ ಮಟಮಾರಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಬಾಣಂತಿ ಈಶ್ವರಿ(32)ಯ ಸಾವಿನ‌ ಕುರಿತು ವೈದ್ಯರ ಬಳಿ ಮಾಹಿತಿ ಕೇಳಿದರು. ಡಿಸೆಂಬರ್ 8ರ ಬೆಳಿಗ್ಗೆ 3ರ ಸುಮಾರಿಗೆ ಮಟಮಾರಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದು, 3.50ಕ್ಕೆ ಸಹಜ ಹೆರಿಗೆ ಆಗಿತ್ತು. ಅಲ್ಲದೆ ತಾಯಿ ಮತ್ತು ಮಗು ಆರೋಗ್ಯವಾಗಿದ್ದರು. ಡಿಸೆಂಬರ್ 10ರ ಸಂಜೆ 5ಗಂಟೆಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಡಿಸೆಂಬರ್ 12ರವರೆಗೆ ಮನೆಯಲ್ಲಿ ಆರಾಮಾಗಿದ್ದರು. ಡಿಸೆಂಬರ್ 13ರಂದು ಇದ್ದಕ್ಕಿದ್ದಂತೆ ಅವರಿಗೆ ಉಸಿರಾಟ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಪುನಃ ಮಟಮಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದಾಗ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಆ್ಯಂಬುಲೆನ್ಸ್ ಮೂಲಕ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಅಲ್ಲಿಯೂ ಕೂಡಾ ಎಲ್ಲ ರೀತಿಯ ಚಿಕಿತ್ಸೆ ನೀಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ” ಎಂದು ವೈದ್ಯರು ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದರು.

ಮಟಮಾರಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೆಚ್ಚಿನ ವೈದ್ಯರು ಹಾಗೂ ಸಿಬ್ಬಂದಿಗಳ ಅವಶ್ಯಕತೆಯಿದ್ದು, ಆಸ್ಪತ್ರೆಗೆ ವೈದ್ಯರು ಸೇರಿದಂತೆ ಅಗತ್ಯ ಸಿಬ್ಬಂದಿಗಳನ್ನು ನೇಮಿಸಬೇಕೆಂದು ಈ ವೇಳೆ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

Advertisements

ಜಿಲ್ಲಾಧಿಕಾರಿ ನಿತೀಶ್ ಕೆ ಮಾತನಾಡಿ, “ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲಾಗಿದ್ದು, ಮುಂದಿನ ದಿನಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಯನ್ನು ನೇಮಿಸಿ ಇಲ್ಲಿಯೇ ಹೆರಿಗೆ ಮಾಡಿಸುವ ವ್ಯವಸ್ಥೆ ಮಾಡಲಾಗುವುದು” ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಂ ಪಾಂಡ್ವೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ನಂದಿತಾ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ್, ರಾಯಚೂರು ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಜ್ವಲ್, ಮಟಮಾರಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸತೀಶ್ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X