ರಾಯಚೂರು | ಬಂಡವಾಳಿಗರ ಕೈಯಲ್ಲಿ ಮಾಧ್ಯಮ; ಪ್ರಜಾಪ್ರಭುತ್ವಕ್ಕೆ ಅಪಾಯ: ಸಚಿವ ಶರಣಪ್ರಕಾಶ ಪಾಟೀಲ್

Date:

ಸುದ್ದಿ ಮಾಧ್ಯಮಗಳು ಬಂಡವಾಳಶಾಹಿಗಳ ಕೈಗೆ ಸಿಲುಕಿರುವುದು ಪ್ರಜಾಪ್ರಭುತ್ವಕ್ಕೆ ಎದುರಾದ ಅಪಾಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.

- Advertisement -

ರಾಯಚೂರು ನಗರದಲ್ಲಿ ಜಿಲ್ಲಾ ಕಾರ್ಯನಿರತ ಪ್ರತಕರ್ತರ ಸಂಘ ಹಾಗೂ ರಿಪೋರ್ಟರ್ಸ್‌ ಗಿಲ್ಡ್‌ಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಪ್ರತಿಕಾ ದಿನಾಚರಣೆ, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಪತ್ರಿಕೆಗಳು ಇಂದಿಗೂ ವಿಶ್ವಾಸ ಉಳಿಸಿಕೊಂಡಿವೆ. ಆದರೆ ಓದುಗರ ಸಂಖ್ಯೆ ಇಳಿಕೆಯಾಗುತ್ತಿರುವುದು ಕಳವಳಕಾರಿಯಾಗಿದೆ. ಮುದ್ರಣ ಮಾಧ್ಯಮ ಮಾತ್ರ ಅಧಿಕೃತವಾಗಿದ್ದ ಕಾಲವೊಂದಿತ್ತು. ಆದರೀಗ ದೃಶ್ಯಮಾಧ್ಯಮದೊಂದಿಗೆ ಸಾಮಾಜಿಕ ಮಾಧ್ಯಮಗಳು ಹೆಚ್ಚು ಪ್ರಚಾರ ಪಡೆಯುತ್ತಿವೆ. ಪತ್ರಕರ್ತರು ಆರ್ಥಿಕವಾಗಿ ಸದೃಢವಾದರೆ ಮಾತ್ರ ಉತ್ತಮ ಸೇವೆ ಪಡೆಯಬಹುದು” ಎಂದು ಹೇಳಿದರು.

“ಪತ್ರಿಕೆಗಳು ಸಬಲವಾಗಲು ರಾಜ್ಯ ಸರ್ಕಾರ ಹೊಸ ಜಾಹೀರಾತು ನೀತಿ ರೂಪಿಸಿ ಜಾರಿಗೊಳಿಸಲು ಸಿದ್ದತೆಯಲ್ಲಿದೆ. ಪತ್ರಕರ್ತರ ಸಮಸ್ಯೆಗಳ ನಿವಾರಣೆಗೂ ರಾಜ್ಯ ಸರ್ಕಾರ ಚಿಂತನೆ ಮಾಡಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಜೆಟ್‌ನಲ್ಲಿ ಪತ್ರಕರ್ತರ ಮಾಸಾಶನವನ್ನು ಹೆಚ್ಚಿಸಲು ನಿರ್ಧರಿಸಿದೆ. ಪತ್ರಕರ್ತರಿಗೆ ವಸತಿ, ನಿವೇಶನ ಹಾಗೂ ಗ್ರಾಮೀಣ ಪಾಸ್ ಒದಗಿಸಲು ಸಕಾರಾತ್ಮಕವಾಗಿ ಕ್ರಮವಹಿಸಲಿದೆ” ಎಂದರು.

“ಪತ್ರಕರ್ತರಿಗೆ ಸೇವಾ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾನೂನು ರೂಪಿಸುವ ಅವಶ್ಯಕತೆಯಿದೆ. ಪತ್ರಿಕೆಗಳು ಉಳಿದರೆ ಪತ್ರಕರ್ತರು ಉಳಿಯಲು ಸಾಧ್ಯ. ಪತ್ರಿಕೆಗಳನ್ನು ಉಳಿಸಿ ಬೆಳೆಸಲು ಪರ್ಯಾಯ ಚಿಂತನೆಗಳು ನಡೆಯಬೇಕಿದೆ. ಪತ್ರಿಕೆಗಳು ಸರ್ಕಾರವನ್ನೇ ಉರುಳಿಸುವಷ್ಟು ಪ್ರಭಾವಿಶಾಲಿಗಳಾಗಿದ್ದವು. ಆದರೆ, ಪ್ರಸ್ತುತದಲ್ಲಿ ಪತ್ರಿಕೆಗಳ ಪ್ರಸಾರ ಸಂಖ್ಯೆ ಕುಂಠಿತವಾಗುತ್ತಿದ್ದು, ಓದುಗರು ಸಂಖ್ಯೆ ಇಳಿಕೆಯಾಗುತ್ತಿರುವುದು ಕಳವಳಕಾರಿಯಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ನ್ಯಾಯಾಲಯಗಳಲ್ಲೂ ವಿಕಲಚೇತನರಿಗೆ ಪೂರಕವಾದ ವ್ಯವಸ್ಥೆ ಕಲ್ಪಿಸುವ ಬಗ್ಗೆ ಚಿಂತಿಸಬೇಕಿದೆ : ಸುಪ್ರೀಂ ನ್ಯಾಯಮೂರ್ತಿ ಎಸ್.ಎ ಬೋಪಣ್ಣ

“ಸಮಾಜ ಪತ್ರಿಕೆಗಳನ್ನು ಬೆಳೆಸಲು ಚಿಂತಿಸಬೇಕಿದೆ. ಪತ್ರಕರ್ತರು ನಕಾರಾತ್ಮಕ ಸುದ್ದಿಗಳಿಗಿಂತ ಹೆಚ್ಚು ಸಕಾರಾತ್ಮಕ ಸುದ್ದಿಗಳಿಗೆ ಒತ್ತು ನೀಡಬೇಕಾದ ಅವಶ್ಯಕತೆಯಿದೆ. ನಕಾರಾತ್ಮಕ ವರದಿಗಳಿಗಿಂದ ಸಮಾಜಕ್ಕೆ ಸಂದೇಶ ನೀಡುವ, ಜಾಗೃತಿ ಮೂಡಿಸುವ ಕೆಲಸ ಪತ್ರಕರ್ತರಿಂದ ನಡೆಯಲಿ” ಎಂದರು.

ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜು, ಶಾಸಕರುಗಳಾದ ಹಂಪನಗೌಡ ಬಾದರ್ಲಿ, ಡಾ.ಶಿವರಾಜಪಾಟೀಲ್, ಹಂಪಯ್ಯನಾಯಕ, ದದ್ದಲ ಬಸನಗೌಡ, ಕರೆಮ್ಮ ನಾಯಕ, ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ, ಎಸ್‌ಪಿ ನಿಖಿಲ್ ಬಿ. ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಆರ್ ಗುರುನಾಥ, ಚನ್ನಬಸವ, ಶಿವಮೂರ್ತಿ ಹೀರೆಮಠ, ಎಂ ಪಾಷಾ, ವಿಜಯ ಜಾಗಟಕಲ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮಖಂಡಿ | ದಲಿತ ಸಾಹಿತ್ಯ ಶೋಷಣೆಯ ವಿರುದ್ಧದ ಧ್ವನಿ: ಪರಶುರಾಮ ಮಹಾರಾಜನವರ

ಅಸ್ಪೃಶ್ಯತೆ, ಸಾಮಾಜಿಕ ತಾರತಮ್ಯ ಹಾಗೂ ಶೋಷಣೆಯ ವ್ಯವಸ್ಥೆಯ ವಿರುದ್ಧ ಪ್ರಶ್ನೆ ಎತ್ತಿ,...

ವಿಜಯಪುರ | ವಿಶೇಷಚೇತನರ ಸಬಲೀಕರಣಕ್ಕೆ ವಿವಿಧ ಯೋಜನೆ: ಆನ್‌ಲೈನ್ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲೆಯ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...

ಬಾಗಲಕೋಟೆ | ಬರದ ಹೊಡೆತಕ್ಕೆ ಬೆಳೆ ನಿರ್ನಾಮ! ಎಕರೆಗೆ ರೂ.30 ಸಾವಿರ ಖರ್ಚು, ಕೈ ಸೇರದ ಫಸಲು

ಬಾಗಲಕೋಟೆ ಜಿಲ್ಲೆಯ ರೈತರು ಬಿತ್ತನೆ, ಗೊಬ್ಬರ, ಕೂಲಿ ಸೇರಿದಂತೆ ಎಕರೆಗೆ ರೂ.25ರಿಂದ...

ಸಾಗರ | ಡಾ. ಹೆಚ್. ಗಣಪತಿಯಪ್ಪ ಸ್ಮಾರಕ ಅಭಿವೃದ್ಧಿಗೆ ಶಾಸಕರಿಗೆ ಮನವಿ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ದಿವಂಗತ ಹೆಚ್.ಗಣಪತಿಯಪ್ಪ...