ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಒಂದು ಉನ್ನತ ಹುದ್ದೆಯಲ್ಲಿರುವ ಅಧಿಕಾರಿಯೊಬ್ಬರು ತಮ್ಮ ಮೊಬೈಲ್ ಫೋನ್‌ನಲ್ಲಿ ರಮ್ಮಿ ಗೇಮ್ ಆಡಿದ್ದು ದೃಶ್ಯ ಆಕ್ರೋಶ ಉಂಟುಮಾಡಿದೆ.
ಕೆಡಿಪಿ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿಗಾಗಿ ಶಾಸಕರ ಹಾಗೂ ಸಚಿವರ ಮಧ್ಯೆ ವಾಗ್ವಾದ ನಡೆಯುತ್ತಿದ್ದರು ಸಭೆಯು ತನಗೆ ಸಂಬಂಧವಿಲ್ಲದಂತೆ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಪ್ರವೀಣ ಅವರು ರಮ್ಮಿ ಗೇಮ್ ನಲ್ಲಿ ಮಗ್ನರಾಗಿದ್ದರು. ಅಲ್ಲಿದ್ದ ಪತ್ರಕರ್ತರು ಕ್ಯಾಮೆರಾದಲ್ಲಿ ಸೆರೆ ಹಿಡಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ದಲಿತರಿಗೆ ಭೂಮಿ,ವಸತಿ ಹಕ್ಕುಪತ್ರ ನೀಡಲು ಒತ್ತಾಯ
ಅತ್ಯಂತ ಮಹತ್ವದ ಕೆಡಿಪಿ ಸಭೆಯಲ್ಲಿ ಶಿಸ್ತಿನಿಂದ ಭಾಗಿಯಾಗದೇ ಮೊಬೈಲ್ ನಲ್ಲಿ ತಲ್ಲೀಣರಾಗಿ ಅಸಭ್ಯ ವರ್ತನೆ ತೋರಿರುವುದು ಅಕ್ಷಮ್ಯ ಎಂದು ಸಚಿವರು ತರಾಟೆ ತೆಗೆದುಕೊಂಡರು. ಅಧಿಕಾರಿಯನ್ನು ಸಭೆಯಿಂದ ಹೊರ ಕಳುಹಿಸಿದರು. ಅಧಿಕಾರಿಯ ಅಸಭ್ಯ ಕಾರ್ಯವೈಖರಿಯ ಬಗ್ಗೆ ನೋಟೀಸ್ ಜಾರಿ ಮಾಡಿ ಶಿಸ್ತಿನ ಕ್ರಮಕ್ಕಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
