ಹೆಚ್ಚುವರಿಯಾಗಿ ವಸತಿ ಮಂಜೂರು ಮಾಡಬೇಕು ಎಂದು ಒತ್ತಾಯಿಸಿ ಗೆಜ್ಜಲಗಟ್ಟಾ ಗ್ರಾಮ ಪಂಚಾಯಿತಿ ಸದಸ್ಯ ರಮೇಶ್ ವೀರಾಪೂರು ಅವರು ವಸತಿ ಸಚಿವ ಜಮೀರ್ ಅಹ್ಮದ್ ಅವರಿಗೆ ಮನವಿ ಸಲ್ಲಿಸಿದರು.
“ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಗೆಜ್ಜಲಗಟ್ಟಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳ ಫಲಾನುಭವಿಗಳಿಗೆ ವಸತಿ ಯೋಜನೆ ಅಡಿಯಲ್ಲಿ ಮನೆ ಮಂಜೂರು ಮಾಡುವ ಅವಶ್ಯಕತೆ ಇದೆ” ಎಂದು ಆಗ್ರಹಿಸಿದರು.
“ನಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಗತಿಕರು, ಅಂಗವಿಕಲರು, ಸೂರು ಇಲ್ಲದವರು, ಕಡು ಬಡಕುಟುಂಬದವರು, ದಲಿತರು ಹಾಗೂ ಅಲ್ಪ ಸಂಖ್ಯಾತರು ಮನೆ ಇಲ್ಲದೇ ಈಗಲೂ ಗುಡಿಸಲು, ಶೆಡ್ಡು, ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಆದ್ದರಿಂದ ಕೂಡಲೇ ಹೆಚ್ಚುವರಿ ವಸತಿಯ ಗುರಿ ನಿಗದಿಪಡಿಸಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಗದಗ: ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಧರಣಿ
“ವಿಕಾಸೌಧದಲ್ಲಿರುವ ವಸತಿ ಸಚಿವರ ಕಚೇರಿಯಲ್ಲಿ ಮನವಿ ಸಲ್ಲಿಸಿದ ಅವರು, ವಸತಿ ಸೌಲಭ್ಯದಿಂದ ವಂಚಿತರಾಗಿರುವ ವಾರ್ಡ್‌ನ ನಿವಾಸಿಗಳು ವಾರ್ಡ್ ಸದಸ್ಯರಿಗೆ ದಿನನಿತ್ಯ ಹಿಡಿಶಾಪ ಹಾಕುತ್ತಿದ್ದಾರೆ. ಆದ್ದರಿಂದ ನಮ್ಮ ಗ್ರಾಮ ಪಂಚಾಯಿತಿಗೆ ವಿಶೇಷ ಕೋಟಾದಡಿ 200 ಮಂದಿ ಫಲಾನುಭವಿಗಳಿಗೆ ಮನೆಗಳನ್ನು ಮಂಜೂರು ಮಾಡಬೇಕು” ಎಂದು ಮನವಿ ಮಾಡಿದರು.