ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಅಕ್ಟೋಬರ್ 23ರ ಮಧ್ಯರಾತ್ರಿ ಲಘು ಭೂಕಂಪವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
“ತಾಲೂಕಿನ ನಿಲೋಗಲ್, ಹಟ್ಟಿ, ವೀರಾಪುರ ಹಾಗೂ ಗೆಜ್ಜಲಗಟ್ಟ ಗ್ರಾಮಗಳಲ್ಲಿ ಮಧ್ಯರಾತ್ರಿ ಭೂಮಿ ಕಂಪಿಸಿದ ಅನುಭವಾಗಿದೆ. ಭೂಕಂಪನವು ಸೌಮ್ಯವಾಗಿರುವುದರಿಂದ ಯಾವುದೇ ಹಾನಿ ಸಂಭವಿಸಿಲ್ಲ. ಆದರೆ ಸ್ಥಳೀಯರು ಭಯಭೀತರಾಗಿದ್ದರು” ಎಂದು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಮನಗರ | ₹6.25 ಕೋಟಿ ವೆಚ್ಚದಲ್ಲಿ ಕಾಮಗಾರಿ; ಜನರಿಗೆ ಸಿಗದ ಕಾವೇರಿ ನೀರು
“ರಿಕ್ಟರ್ ಮಾಪಕದಲ್ಲಿ 2.7 ತೀವ್ರತೆಯ ಲಘು ಭೂಕಂಪನವಾಗಿದ್ದು, ಇದು ಕೇವಲ ಒಂದು ಅಥವಾ ಎರಡು ಸೆಕೆಂಡುಗಳ ಕಾಲ ಮಾತ್ರ ಇತ್ತು. ಭೂಕಂಪದ ಕೇಂದ್ರ ಬಿಂದು ಹಟ್ಟಿ ಗ್ರಾಮ ಪಂಚಾಯಿತಿಯಿಂದ ನೈಋತ್ಯಕ್ಕೆ 2.6 ಕಿ ಮೀ ದೂರದಲ್ಲಿತ್ತು” ಎಂದು ತಿಳಿಸಿದ್ದಾರೆ.