ರಾಯಚೂರು | ಸ್ಲಂ ನಿವಾಸಿಗಳಿಗೆ ನಿವೇಶನ ಹಂಚಿಕೆ: ಸಚಿವ ಶರಣ ಪ್ರಕಾಶ ಪಾಟಿಲ್

Date:

Advertisements

ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆಯಿಂದ ಹಮ್ಮಿಕೊಂಡ ಅನಿರ್ದಿಷ್ಟಾವಧಿ ಧರಣಿ ಇಂದಿಗೆ 3ನೇ ದಿನಕ್ಕೆ ಕಾಲಿಟ್ಟಿದ್ದು, ಧರಣಿ ಸ್ಥಳಕ್ಕೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ ಪಾಟಿಲ್ ಭೇಟಿ ನೀಡಿ ಮನವಿ ಸ್ವೀಕರಿಸಿದರು.

ನಿವೇಶನ ಹಕ್ಕು ಪತ್ರ ಪಡೆದ ನಿವೇಶನ ರಹಿತರಿಗೆ ಗುರುತಿಸಿದ ಸರ್ವೆ ನಂ.581, 929/2, 726/727 ಈ ಸರ್ವೆ ನಂಬರ್‌ಗಳ ಭೂಮಿಯಲ್ಲಿ ನಿವೇಶನ ಅಭಿವೃದ್ಧಿಪಡಿಸಿ ನಿವೇಶನ ಹಂಚಿಕೆ ಹಾಗೂ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಪಿಎಂಎವೈ ಯೋಜನೆಯ ಮನೆಗಳ ಕಾಮಗಾರಿ ಹಾಗೂ ಸ್ಲಂ ಘೋಷಣೆ ಮಾಡಲು ಈ ಬಗ್ಗೆ ಪರಿಶೀಲನೆ ಮಾಡಿ, ಇಲಾಖೆಯೊಂದಿಗೆ ಸಭೆ ನಡೆಸಿ ಬೇಡಿಕೆ ಈಡೇರಿಕೆಗೆ ಸ್ಪಂದಿಸಲಾಗುವುದು” ಎಂದು ಭರವಸೆ ನೀಡಿದರು.

“ನಿವೇಶನ ಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ನಗರಸಭೆಯಿಂದ ನೋಂದಣಿ ಮಾಡಿಸಿ ಮ್ಯುಟೇಷನ್ ಮತ್ತು ಫಾರಂ ನಂ 3 ಶೀಘ್ರದಲ್ಲಿ ನೀಡಬೇಕು, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಪಿಎಂಎವೈ ಯೋಜನೆಯಿಂದ ಮಂಜೂರಾದ 500 ಮನೆಗಳ ಕಾಮಗಾರಿ 5 ವರ್ಷಗಳು, 2770 ಮನೆಗಳ ಕಾಮಗಾರಿ 3 ವರ್ಷಗಳು ಗತಿಸಿದರೂ ಈವರೆಗೂ ಮನೆಗಳು ಪೂರ್ಣಗೊಳಿಸದೇ ಫಲಾನುಭವಿಗಳನ್ನು ಬೀದಿ ಪಾಲು ಮಾಡಿದ್ದಾರೆ. ಅರ್ಹ ಫಲಾನುಭವಗಳಿಗೆ ಮನೆಗಳ ಹಂಚಿಕೆಗೆ ಕ್ರಮ ವಹಿಸಲಾಗುತ್ತದೆ” ಎಂದು ಭರವಸೆ ನೀಡಿದರು.

Advertisements

“ಸ್ಲಂ ನಿವಾಸಿಗಳ ಬೇಡಿಕೆಗಳನ್ನು ಪರಿಶೀಲನೆ ಮಾಡಿ ಅಗತ್ಯ ಸೌಲಭ್ಯ ಒದಗಿಸಿ ಬಾಕಿ ಮನೆಗಳಿಗೆ  ಮಂಜೂರು ಮಾಡಿ ಕ್ರಮ ವಹಿಸಲಾಗುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬ್ಯಾಂಕ್‌ಗಳಲ್ಲಿ ಹೊರಗುತ್ತಿಗೆ ನಿಲ್ಲಿಸಿ, ನೇಮಕಾತಿ ಮಾಡಿ: ಸ್ಟೀಫನ್ ಜಯಚಂದ್ರ

ಈ ಸಂದರ್ಭದಲ್ಲಿ ಗ್ರಾಮೀಣ ಶಾಸಕ ಬಸನಗೌಡ ದದ್ದಲ, ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯತ್ ಸಿಇಒ ರಾಹುಲ್, ಪಾಂಡ್ವೆ ತುಕಾರಾಂ, ಅಧ್ಯಕ್ಷ ಜನಾರ್ಧನ ಹಳ್ಳಿಬೆಂಚಿ, ಕೆ ಪಿ ಅನಿಲಕುಮಾರ, ಉಪಾಧ್ಯಕ್ಷ ವೆಂಕಟೇಶ ಭಂಡಾರಿ, ಸಂಘಟನಾ ಕಾರ್ಯದರ್ಶಿ ಬಸವರಾಜ ಹೊಸೂರು, ಎಂ ಆರ್ ಬೇರಿ, ಮಹೇಶ, ನಾಗರಾಜ, ಜಂಬಣ್ಣ, ಹುಲಿಗೆಮ್ಮ, ವೀರೇಶ, ನಾಗಮ್ಮ, ನರಸಮ್ಮ, ಅನುಮಂತಿ ಸೇರಿದಂತೆ ಇತರರು ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

 "ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಿಂದ ಸಾಕಷ್ಟು ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗುವ ಪ್ರದೇಶಗಳ ಸಾರ್ವಜನಿಕರ...

ಬೀದರ್‌ | ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವದ್ವಯರ ಭೇಟಿ; ಪರಿಶೀಲನೆ

ಕಮಲನಗರ ಹಾಗೂ ಔರಾದ್‌ ತಾಲೂಕಿನಲ್ಲಿ ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಸ್ತುವಾರಿ...

ಹಾವೇರಿ | ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

"ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ...

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

Download Eedina App Android / iOS

X