ರಾಯಚೂರು | ರೈತರ ಒಂದೂವರೆ ಕೋಟಿ ಬೇರೆಯವರ ಖಾತೆಗೆ ಜಮಾ; ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

Date:

Advertisements

ರಾಷ್ಟ್ರೀಯ ಫಸಲ್‌ ಬಿಮಾ ಯೋಜನೆ ಅಡಿ ವಿಮಾ ಕಂತು ಪಾವತಿಸಿರುವ ರೈತರ ಹಣವನ್ನು ಬೇರೆಯವರ ಖಾತೆಗೆ ಜಮಾ ಮಾಡಿರುವ ಕೃಷಿ, ಕಂದಾಯ ಹಾಗೂ ವಿಮಾ ಕಂಪೆನಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿ ಸಮಗ್ರ ತನಿಖೆ ನಡೆಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಆಗ್ರಹಿಸಿದರು.

ರಾಯಚೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಷ್ಟ್ರೀಯ ಫಸಲ್ ಬಿಮಾ ಯೋಜನೆ ರೈತರಿಗೆ ಅನುಕೂಲವಾಗುವ ಬದಲು ವಿಮಾ ಕಂಪನಿಗಳಿಗೆ ಲಾಭದಾಯಕವಾಗಿದೆ. ವಿಮಾ ಕಂತು, ಜಮೀನು ರೈತರದ್ದಾಗಿದ್ದರೆ, ಪರಿಹಾರವನ್ನು ಮಾತ್ರ ಬೇರೆಯವರ ಖಾತೆಗೆ ಜಮಾ ಮಾಡಲಾಗಿದೆ” ಎಂದು ಆರೋಪಿಸಿದರು.

“ಸಿರವಾರ ತಾಲೂಕಿನ ಮಾಡಗಿರಿ ಗ್ರಾಮದಲ್ಲಿ 1 ಕೋಟಿ ರೂ. ಹಾಗೂ ಹಳ್ಳಿ ಹೊಸೂರು ಗ್ರಾಮದ ರೈತರ 54 ಲಕ್ಷ ರೂ. ಪರಿಹಾರದ ಮೊತ್ತವನ್ನು ಬೇರೆಯವರ ಖಾತೆಗೆ ಜಮಾ ಮಾಡಲಾಗಿದೆ. ಆದರೆ ಕೃಷಿ ಅಧಿಕಾರಿಗಳು ರೈತರ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ” ಎಂದು ದೂರಿದರು.

Advertisements

“ತಪ್ಪಾಗಿ ಖಾತೆಗೆ ಜಮಾ ಮಾಡಿರುವುದು ಕೃಷಿ ಅಧಿಕಾರಿಗಳು, ವಿಮಾ ಕಂಪನಿಗಳು. ಅವರ ವಿರುದ್ಧ ಕೇಸ್ ದಾಖಲಿಸಬೇಕು. ರೈತರ ಪಹಣಿ, ಜಮೀನಿನಲ್ಲಿ ಬೆಳೆದ ಬೆಳೆಯ ಮಾಹಿತಿ ಪಡೆಯುವ ವಿಮಾ ಕಂಪನಿ ನಷ್ಟ ಪರಿಹಾರವನ್ನು ಮಾತ್ರ ಸಂಬಂಧವೇ ಇಲ್ಲದವರ ಖಾತೆಗೆ ಜಮಾ ಮಾಡಿರುವುದರ ಹಿಂದ ಬಹುದೊಡ್ಡ ಅಕ್ರಮ ಇದೆ. ಕೂಡಲೇ ರಾಜ್ಯ ಸರ್ಕಾರ ಸಮಗ್ರ ತನಿಖೆಗೆ ವಿಶೇಷ ತಂಡ ರಚಿಸಬೇಕು” ಎಂದು ಒತ್ತಾಯಿಸಿದರು.

“ಕೃಷಿ ಇಲಾಖೆ ಜಂಟಿನಿರ್ದೇಶಕಿ ದೇವಿಕಾ ಎಂಬುವವರು ಅನೇಕ ಅಕ್ರಮಗಳಿಗೆ ಕಾರಣರಾಗಿದ್ದಾರೆ. ಫಸಲ್ ಬಿಮಾ ಯೋಜನೆ ಮಾತ್ರವಲ್ಲ, ಚೆಕ್‌ ಡ್ಯಾಂ ನಿರ್ಮಾಣ, ಯಂತ್ರೋಪಕರಣ ವಿತರಣೆ ಸೇರಿದಂತೆ ಬಹುತೇಕ ಯೋಜನೆಗಳಲ್ಲಿ ಭ್ರಷ್ಟಾಚಾರ ಎಸಗಿದ್ದು ಕೂಡಲೇ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮಾನವಿ ತಾಲೂಕಿನಲ್ಲಿ ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ಜೋಳ ಮಾರಾಟ ಮಾಡಿರುವ ರೈತರಿಗೆ 10 ಕೋಟಿ ರೂ. ಹಣವನ್ನು ಸರ್ಕಾರ ಬಾಕಿ ಉಳಿಸಿಕೊಂಡಿದೆ. ಕೂಡಲೇ ಬಾಕಿ ಹಣ ಪಾವತಿಗೆ ಮುಂದಾಗಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬೇಡಿಕೆ ಈಡೇರಿಕೆಗೆ ಕೆಪಿಆರ್‌ಎಸ್‌ ಆಗ್ರಹ

“ಅಕ್ಕಿ ಗಿರಣಿ  ಮಾಲೀಕರು ಎಪಿಎಂಸಿ ಕಾಯ್ದೆ ರದ್ದುಗೊಳಿಸಲು ಆಗ್ರಹಿಸಿದ್ದಾರೆ. ಕಾಯ್ದೆಗಳು ಕಿರುಕುಳ ನೀಡಲು ರೂಪಿಸಲಾಗುವುದಿಲ್ಲ. ಈ ಕುರಿತು ಸಿಎಂ ಭೇಟಿ ಮಾಡಿ ಚರ್ಚಿಸಲಾಗುವುದು. ಅಧಿಕಾರಿಗಳ ಬೇಜವಾಬ್ದಾರಿಯಿಂದ ಎಫ್‌ಸಿಐ ಗೋದಾಮುಗಳಲ್ಲಿ ಹುಳುಗಳ ಹಾವಳಿ ಹೆಚ್ಚಾಗಿದೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್ ಇಂಗಳದಾಳ, ಬೂದೆಯ್ಯಸ್ವಾಮಿ ಗಬ್ಬೂರು, ದೇವರಾಜನಾಯಕ, ಮಲಣ್ಣ ದಿನ್ನಿ, ಬ್ರಹ್ಮಯ್ಯ ಆಚಾರಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X