‌ರಾಯಚೂರು | ಮೂಲ ಸೌಕರ್ಯ ಕಲ್ಪಿಸಲು ಶಾಸಕ ಶಿವರಾಜ ಪಾಟೀಲ ವಿಫಲ; ಗ್ರಾಮಸ್ಥರಿಂದ ಘೇರಾವ್

Date:

ʼತಮ್ಮ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ವಿಫಲವಾಗಿದ್ದೀರಿʼ ಎಂದು ಆರೋಪಿಸಿರುವ ಗ್ರಾಮಸ್ಥರು, ಮತ ಪ್ರಚಾರಕ್ಕೆ ತೆರಳಿದ ಬಿಜೆಪಿ ಶಾಸಕ ಡಾ. ಶಿವರಾಜ ಪಾಟೀಲರಿಗೆ ಘೇರಾವ್ ಹಾಕಿರುವ ಘಟನೆ ರಾಯಚೂರಿನ ಪೋತಗಲ್ ಗ್ರಾಮದಲ್ಲಿ ನಡೆದಿದೆ.

- Advertisement -

ರಾಯಚೂರು ವಿಧಾನಸಭಾ ಕ್ಷೇತ್ರದ ಪೋತಗಲ್, ಅಮರಾವತಿ ಗ್ರಾಮದಲ್ಲಿ ಶಾಸಕ ಡಾ.ಶಿವರಾಜ ಪಾಟೀಲ ತಮ್ಮ ಬೆಂಬಲಿಗರೊಂದಿಗೆ ಮತಯಾಚನೆ ಮಾಡಲು ತೆರಳಿದ್ದರು. ಈ ವೇಳೆ, ಗ್ರಾಮಸ್ಥರು ಶಾಸಕರಿಗೆ ಘೇರಾವ್ ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಪೋತಗಲ್ ಮತ್ತು ಅಮರಾವತಿ ಗ್ರಾಮದಲ್ಲಿ ಚರಂಡಿ, ಶುದ್ಧ ಕುಡಿಯುವ ನೀರು ಹಾಗೂ ಮೂಲಸೌಕರ್ಯವಿಲ್ಲ. 5 ವರ್ಷವಾದರೂ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆದಿಲ್ಲ. ಈಗ ಮತ್ತೆ ಮತ ಕೇಳಲು ಬಂದಿದ್ದೀರಾ” ಎಂದು ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಾದಿಗರ ರಾಜಕೀಯವನ್ನು ಬಿಜೆಪಿಗೆ ಅನೈತಿಕವಾಗಿ ಅಡಮಾನ ಮಾಡಬೇಕೆ?: ಹನುಮೇಶ್‌ ಗುಂಡೂರು

ಗ್ರಾಮಸ್ಥರೊಂದಿಗೆ ಮಾತನಾಡಿದ ಶಾಸಕ ಡಾ.ಶಿವರಾಜ ಪಾಟೀಲ, “ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತೇನೆ. ನನಗೆ ಮತ ಹಾಕಿ” ಎಂದು ಮನವೊಲಿಸಲು ಮುಂದಾದರು. ಆದರೂ, ಅವರ ಮಾತಿಗೆ ಗ್ರಾಮಸ್ಥರು ಮಣಿಯಲಿಲ್ಲ. ಬಳಿಕ ಶಾಸಕರು ಸ್ಥಳದಿಂದ ಕಾಲ್ಕಿತ್ತರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...