ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಅವರ ಪುತ್ರಿಯ ಕಾರು ಬೈಕ್ ಸವಾರನೊಬ್ಬನಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಮಿಯಾಪುರ ಕ್ರಾಸ್ ಬಳಿ ನಡೆದಿದೆ.
ದೇವದುರ್ಗ ಶಾಸಕಿ ಕರೆಮ್ಮ ನಾಯಕ್ ಅವರ ಪುತ್ರಿ ಗೌರಿ ಅವರ ಕಾರು ಆಂಧ್ರಪ್ರದೇಶ ಮೂಲದ ಕೋಮಿಶೆಟ್ಟಿ ಕೃಷ್ಣ ಎನ್ನುವ ಬೈಕ್‌ಗೆ ಡಿಕ್ಕಿ ಹೊಡೆದಿದೆ. ತಲೆಗೆ ಪೆಟ್ಟು ಬಿದ್ದು ಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ಬಳಿಕ ಶಾಸಕಿ ಪುತ್ರಿ ಗೌರಿ ಆಸ್ಪತ್ರೆಗೆ ಭೇಟಿ ನೀಡಿ ನೆರವಿನ ಭರವಸೆ ನೀಡಿದ್ದಾರೆ. ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ರಾಯಚೂರು | ಟ್ರಾಕ್ಟರ್ ಟ್ರಕಿಗೆ ಬೈಕ್ ಡಿಕ್ಕಿ; ಸವಾರ ಸಾವು