ರಾಯಚೂರು | ಜಿಲ್ಲಾಸ್ಪತ್ರೆಯಲ್ಲಿ ಕೋತಿಗಳ ಹಾವಳಿ; ಹೈರಾಣಾದ ರೋಗಿಗಳು

Date:

ರಾಯಚೂರಿಗೆ ಏಮ್ಸ್‌ ಆಸ್ಪತ್ರೆ ಬೇಕೆಂದು ಜಿಲ್ಲೆಯ ಜನರು ಒತ್ತಾಯಿಸಿ ಹಲವು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ, ಜಿಲ್ಲೆಯ ಒತ್ತಾಯಕ್ಕೆ ಸರ್ಕಾರಗಳು ಕಿವಿಗೊಡುತ್ತಿಲ್ಲ. ಇದೀಗ, ಜಿಲ್ಲೆಯ ಜನರು ಏಮ್ಸ್‌ ಜೊತೆಗೆ, ಈಗಿರುವ ಜಿಲ್ಲಾಸ್ಪತ್ರೆಯ ಉತ್ತಮ ನಿರ್ವಹಣೆಗಾಗಿಯೂ ಹೋರಾಟ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ.

- Advertisement -

ರಾಯಚೂರಿನಲ್ಲಿರುವ ರಿಮ್ಸ್‌ ಆಸ್ಪತ್ರೆಯಲ್ಲಿ ಕೋತಿಗಳ ಉಪಠಳ ಹೆಚ್ಚಾಗಿದೆ. ಆಸ್ಪತ್ರೆಯ ವಾರ್ಡ್‌ಗಳಿಗೂ ನುಗ್ಗುವ ಕೋತಿಗಳು ರೋಗಿಗಳು ಮತ್ತು ಅವರ ಸಂಬಂಧಿಗಳಿಗೆ ತೊಂದರೆ ಕೊಡುತ್ತಿವೆ. ರೋಗಿಗಳಿಗೆ ನೀಡಲಾಗುವ ಊಟ ಮತ್ತು ಇನ್ನಿತರೆ ತಿನಿಸುಗಳನ್ನು ಹೊತ್ತೊಯ್ಯುತ್ತಿವೆ. ನೆಮ್ಮದಿಯಿಂದ ಕುಳಿತು ಊಟ ಮಾಡಲು, ತಿಂಡಿ ತಿನ್ನಲು ಬಿಡದೆ ಕಾಟ ಕೊಡುತ್ತಿವೆ ಎಂದು ರೋಗಿಗಳ ಪಾಲಕರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಕೋತಿಗಳ ಕಾಟದಿಂದ ಜನ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಈ ಪರಿಸ್ಥಿತಿ ಇಂದು-ನಿನ್ನೆಯದಲ್ಲ. ಹಲವು ತಿಂಗಳುಗಳಿಂದ ಕೋತಿಗಳ ಆಸ್ಪತ್ರೆ ಸುತ್ತ-ಮುತ್ತ ಬೀಡು ಬಿಟ್ಟಿವೆ. ಅವುಗಳನ್ನು ಓಡಿಸಲು ಆಗುತ್ತಿಲ್ಲ. ಓಡಿಸಲು ಮುಂದಾದರೆ, ನಮ್ಮ ಮೇಲೆಯೇ ಎಗರಿ ಹಲ್ಲೆ ಮಾಡುತ್ತವೆ” ಎಂದು ರೋಗಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬೀದರ್ | ತಡವಾಗಿದ್ದಕ್ಕೆ ಸಾರಿಗೆ ಬಸ್ ಚಲಾಯಿಸಿಕೊಂಡು ಹೋದ ವ್ಯಕ್ತಿ

“ಕೋತಿಗಳ ಹಾವಳಿ ತಪ್ಪಿಸಲು ಪಟಾಕಿ ಸಿಡಿಸುತ್ತಿದ್ದೇವೆ. ಅರಣ್ಯ ಇಲಾಖೆಗೂ ಮಾಹಿತಿ ನೀಡಿದ್ದೇವೆ. ಕೋತಿಗಳ ಕಾಟ ತಪ್ಪಿಸಲು ಕ್ರಮ ಕೈಗೊಳ್ಳುತ್ತಿದ್ದೇವೆ” ಎಂದು ಆಸ್ಪತ್ರೆಯ ಅಧೀಕ್ಷರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...