ರಾಯಚೂರು | ಲಿಂಗಸುಗೂರು ಪಟ್ಟಣದಲ್ಲಿ ಹೆಚ್ಚಾದ ಮಂಗಗಳ ಹಾವಳಿ: ಕ್ರಮಕ್ಕೆ ನಾಗರಿಕರ ಆಗ್ರಹ

Date:

ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಮಂಗಗಳ ಕಾಟ ಹೆಚ್ಚಾಗಿದ್ದು, ರಸ್ತೆಗೆ ಓಡಾಡುವ ವಾಹನಗಳ ಸವಾರರ ಮೇಲೆ ಹಾಗೂ ಶಾಲಾ ಮಕ್ಕಳ ಮೇಲೆ ದಾಳಿ ಮಾಡಿ ಗಾಯಗೊಳಿಸುತ್ತಿರುವುದಾಗಿ ನಾಗರಿಕರು ದೂರಿದ್ದಾರೆ.

- Advertisement -

ಮಂಗಗಳ ಕಾಟ ತಾಳಲಾರದೇ ಸಾರ್ವಜನಿಕರು ಮನೆಯಿಂದ ಹೊರಗಡೆ ಹೋಗಲೂ ಹಿಂಜರಿಯುವಂತಾಗಿದೆ. ಪಟ್ಟಣದಲ್ಲಿ ಹಿಂದೆ ಒಂದು ವಾರದೊಳಗೆ ಸುಮಾರು 9 ಜನರ ಮೇಲೆ ಮಂಗಗಳು ದಾಳಿ ಮಾಡಿದ್ದರಿಂದ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪಟ್ಟಣದ ಸಬೇರ ಬೇಗಂ (62), ಸಂತೋಷಿ (42), ವಿದ್ಯಾರ್ಥಿ ಸನಾ(7), ವಿದ್ಯಾರ್ಥಿ ಮಸ್ಕಾನ್ ತಂದೆ ರಫಿ (16) ಸೇರಿ‌ ಅನೇಕರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.

ಮಂಗಗಳು ಏಕಾಏಕಿ ಹಿಂಡು ಹಿಂಡಾಗಿ ವಾಹನ ಸವಾರರ ಮೇಲೆ ಎಗರುತ್ತಿದೆ. ನಡೆದುಕೊಂಡು ಹೋಗುವ ಪಾದಚಾರಿಗಳನ್ನು ಬಿಡದೇ ಕಾಟಕೊಡುತ್ತಿದೆ. ಗ್ರಾಮದಲ್ಲಿ‌ನ ಮೊಬೈಲ್ ಟವ‌ರ್ ಮೇಲೆಯೇ ರಾತ್ರಿ ಕಾಲ ಕಳೆಯುವ ಮಂಗಗಳು ಹಗಲಿನಲ್ಲಿ ಮನೆಗಳ ಮಾಳಿಗೆಯಿಂದ ಮಾಳಿಗೆಗೆ ಜಿಗಿಯುತ್ತ ನೆಮ್ಮದಿ ಹಾಳು ಮಾಡಿದೆ ಎನ್ನುತ್ತಾರೆ ಗ್ರಾಮಸ್ಥರು.

ಇದನ್ನು ಓದಿದ್ದೀರಾ? ಬೆಳಗಾವಿ ಡಿಸಿಸಿ ಬ್ಯಾಂಕ್ ಮೇಲಿನ ಸುದೀರ್ಘ ವರ್ಷಗಳ ಹಿಡಿತ ಕಳೆದುಕೊಂಡ ಕತ್ತಿ ಕುಟುಂಬ

ಈ ಬಗ್ಗೆ ಸ್ಥಳೀಯ ನಿವಾಸಿ ಅಮ್ಜದ್ ಅಲಿ ಮಾತನಾಡಿ, ಮಂಗಗಳ ಹಾವಳಿಯಿಂದ ಬೇಸತ್ತ ಪಟ್ಟಣದ ಮಕ್ಕಳು ಮುಂಜಾನೆ ಶಾಲೆಗೆ ಹೋಗುವುದಕ್ಕೂ ಹೆದರುತ್ತಿದ್ದಾರೆ. ರಸ್ತೆಯ ಮೇಲೆ ಎಲ್ಲೆಂದರಲ್ಲಿ ಗುಂಪಾಗಿ ಕುಳಿತುಕೊಳ್ಳುತ್ತಿರುವ ಮಂಗಗಳಿಗೆ ಹೆದರುತ್ತಿದ್ದಾರೆ. ರಸ್ತೆಯಲ್ಲಿ ದ್ವಿಚಕ್ರ ಸವಾರರು ಸಂಚರಿಸುವುದಕ್ಕೂ ಕಷ್ಟವಾಗುತ್ತಿದೆ. ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಗೆ ಮಂಗಗಳು ಜಿಗಿಯುತ್ತ ಬರುವುದರಿಂದ ಹಲವರು ಬೈಕ್‌ನಿಂದ ಬಿದ್ದಿದ್ದು, ಗಾಯಗಳು ಆಗಿವೆ ಎಂದು ತಿಳಿಸಿದರು.

ಸಂಬಂಧಪಟ್ಟ ಇಲಾಖೆ ಮಂಗಗಳನ್ನು ತಕ್ಷಣ ಸೆರೆ ಹಿಡಿದು ಸ್ಥಳಾಂತರಿಸಬೇಕು. ಮುಂದೆ ಭಯಾನಕ ಘಟನೆಗಳು ಸಂಭವಿಸಿದರೆ ಪುರಸಭೆ ನೇರ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...