ಬಾವಿಗೆ ಬಿದ್ದ ಮಗನನ್ನು ರಕ್ಷಿಸಲು ಹೋದ ತಾಯಿ ಕಾಲು ಜಾರಿ ಬಿದ್ದಿದ್ದು ತಾಯಿ ಮಗ ಇಬ್ಬರೂ ಮೃತಪಟ್ಟರುವ ಘಟನೆ ರಾಯಚೂರು ತಾಲೂಕಿನ ಮಲಿಯಾಬಾದ್ ಗ್ರಾಮದಲ್ಲಿ ನಡೆದಿದೆ.
ತಾಯಿ ರಾಧಮ್ಮ, ಮಗ ಸಂಜು ಬಾವಿಗೆ ಬಿದ್ದು ಮೃತಪಟ್ಟವರು ಎಂದು ತಿಳಿದುಬಂದಿದೆ.
ಬಾವಿಯಲ್ಲಿ ಮಗ ಕಾಲು ಜಾರಿ ಬಿದ್ದ ಕೂಡಲೇ ತಾಯಿ ರಕ್ಷಣೆ ಮಾಡಲು ಮುಂದಾಗಿದ್ದಾರೆ. ಅದೇ ವೇಳೆ ಅವರೂ ಕೂಡ ಕಾಲು ಜಾರಿ ಬಿದ್ದಿದ್ದು, ಇದೀಗ ಇಬ್ಬರೂ ಮೃತಪಟ್ಟಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಾಲಬಾಧೆ : ವಿಷ ಸೇವಿಸಿ ರೈತ ಆತ್ಮಹತ್ಯೆ
ಸ್ಥಳೀಯರು ಕೂಡಲೇ ಇಬ್ಬರನ್ನೂ ಬಾವಿಯಿಂದ ಹೊರ ತೆಗೆದಿದ್ದಾರೆ. ಅಷ್ಟರಲ್ಲಾಗಲೇ ತಾಯಿ ಮಗು ಮೃತಪಟ್ಟಿದ್ದಾರೆ. ಯರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
