ರಾಯಚೂರು | ತಾಲ್ಲೂಕು ಘೋಷಣೆ ಒತ್ತಾಯಿಸಿ ಮುದಗಲ್ ಬಂದ್ ಸಂಪೂರ್ಣ ಯಶಸ್ವಿ

Date:

ಮುದಗಲ್ ಪಟ್ಟಣವನ್ನು ತಾಲೂಕು ಕೇಂದ್ರವಾಗಿ ಘೋಷಿಸುವಂತೆ ಹಾಗೂ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳು ಬುಧವಾರ ಕರೆ ನೀಡಿದ್ದ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿ, ಸಂಪೂರ್ಣ ಯಶಸ್ವಿಯಾಯಿತು.

- Advertisement -

ಪ್ರತಿಭಟನಾಕಾರರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಬಳಿಕ ಕೆಲಕಾಲ ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಹೋರಾಟ ಸಮಿತಿಯ ಸದಸ್ಯ ಅಶೋಕಗೌಡ ಪಾಟೀಲ್ ಮುದಗಲ್ ಪಟ್ಟಣವು ಸುತ್ತಮುತ್ತಲಿನ 60 ಗ್ರಾಮಗಳು ಹಾಗೂ 18 ತಾಂಡಾಗಳಿಗೆ ಕೇಂದ್ರ ಬಿಂದುವಾಗಿದ್ದು, ಎರಡು ರಾಜ್ಯ ಹೆದ್ದಾರಿಗಳನ್ನು ಹೊಂದಿರುವ ಪ್ರಮುಖ ಪಟ್ಟಣವಾಗಿದೆ ಎಂದು ಹೇಳಿದರು. ತಾಲೂಕು ಕೇಂದ್ರವಾಗಲು ಅಗತ್ಯವಿರುವ ಎಲ್ಲಾ ಮೂಲಭೂತ ಅರ್ಹತೆಗಳನ್ನು ಈ ಪಟ್ಟಣ ಹೊಂದಿದೆ ಎಂದು ಅವರು ವಿವರಿಸಿದರು.

ಪುರಸಭೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ವಿದ್ಯುತ್ ಪ್ರಸಾರಣಾ ಕೇಂದ್ರ, ಪದವಿ ಕಾಲೇಜು, ಬಸ್ ನಿಲ್ದಾಣ, ಸಮುದಾಯ ಆರೋಗ್ಯ ಕೇಂದ್ರ, ಪೊಲೀಸ್ ಠಾಣೆ, ನಾಡ ತಹಶೀಲ್ದಾರ್ ಕಚೇರಿ ಸೇರಿದಂತೆ ರಾಷ್ಟ್ರೀಕೃತ ಬ್ಯಾಂಕ್‌ಗಳಂತಹ ಸೌಕರ್ಯಗಳು ಈಗಾಗಲೇ ಇಲ್ಲಿವೆ ಎಂದು ತಿಳಿಸಿದರು.

23433

ಪಟ್ಟಣ ಪ್ರಮುಖ ವಾಣಿಜ್ಯ ಕೇಂದ್ರವಾಗಿದ್ದು, ಈ ಹಿಂದೆ ಹುಂಡೆಕಾರ್, ಗದ್ದಿಗೌಡರ್, ವಾಸುದೇವ ಸಮಿತಿಗಳು ಪಟ್ಟಣ ತಾಲೂಕು ಕೇಂದ್ರವಾಗಲು ಯೋಗ್ಯವಾಗಿದ್ದು,ತಾಲೂಕು ಕೇಂದ್ರವನ್ನಾಗಿ ಮಾಡಬೇಕು ಎಂದು ಮಾಜಿ ಶಾಸಕ ದಿ.ಎಂ.ಗಂಗಣ್ಣನವರ ನೇತೃತ್ವದಲ್ಲಿ ಸಾಕಷ್ಟು ಬಾರಿ ಸರಕಾರಕ್ಕೆ ಮನವಿ ಸಲ್ಲಿಸಿದರು ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮನವಿ ಸ್ವೀಕರಿಸಿ ಶಾಸಕ ಮಾನಪ್ಪ ವಜ್ಜಲ್ ಮಾತನಾಡಿ ಕಾಂಗ್ರೆಸ್ ಸರಕಾರ ಮುದಗಲ್ ಪಟ್ಟಣವನ್ನು ಹೊಸ ತಾಲೂಕು ಕೇಂದ್ರವೆಂದು ಘೋಷಣೆ ಮಾಡಬೇಕು ಹಾಗೂ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಅನುಧಾನ ಮೀಸಲಿಡಬೇಕು ಎಂದು ಈಗಾಗಲೇ ಅಧಿವೇಶನದಲ್ಲಿ ನಾನಾ ಬಾರಿ ಪ್ರಸ್ತಾಪಿಸಿದರೂ ಸರಕಾರ ಕಿಂಚಿತ್ತೂ ಗಮನಹರಿಸಿಲ್ಲ.ಬಜೆಟ್ ಅಧಿವೇಶನಕ್ಕೂ ಮುಂಚೆ ಹೋರಾಟಗಾರ ಜತೆ ನಾನು ಕೂಡಾ ಭಾಗವಹಿಸಿ ಮುಖ್ಯಮಂತ್ರಿಗಳಲ್ಲಿ ಹಾಗೂ ಕಂದಾಯ ಸಚಿವರಲ್ಲಿ ಮನವಿಗೂ ಸಿದ್ದ ಎಂದರು.

ಈ ಸುದ್ದಿ ಓದಿದ್ದೀರಾ? ಲಿಂಗಸುಗೂರು | ಕಾರು ಪಲ್ಟಿಯಾಗಿ ಹೋಟೆಲ್‌ಗೆ ನುಗ್ಗಿ ಅಪಘಾತ; ಪ್ರಾಣಾಪಾಯದಿಂದ ಪಾರು

ಈ ಸಂದರ್ಭದಲ್ಲಿ ತಹಸೀಲ್ದಾರ್ ಪುರುರಾಜಸಿಂಗ್ ಸೊಲಂಕಿ,
ಕೃಷ್ಣಾ ಚಲುವಾದಿ, ಮೈಬೂಬಸಾಬ, ಕಡ್ಡಿಪುಡಿ, ಶರಣಪ್ಪ ಕಟ್ಟಿಮನಿ, ಮೌನೇಶ ಶಿವನಗುತ್ತಿ, ರಹೀಮ್ ಷಾ, ಬಸವರಾಜ ಬಂಕ ದಮನಿ ಸೇರಿ ಇತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...

ಯಾದಗಿರಿ | ಮಾಜಿ ತಾ.ಪಂ ಸದಸ್ಯನ ಮೇಲೆ ಹಲ್ಲೆ ಆರೋಪ; ಆರು ಮಂದಿ ವಿರುದ್ಧ ಪ್ರಕರಣ ದಾಖಲು

ಸಾಲದ ಬಡ್ಡಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಶಹಾಪುರ ತಾಲ್ಲೂಕು ಪಂಚಾಯಿತಿ ಮಾಜಿ...