ರಾಯಚೂರು | ದಸರಾ ಪ್ರಯುಕ್ತ‌ ಬಹುಭಾಷಾ ಕವಿಗೋಷ್ಠಿ

Date:

ರಾಯಚೂರು ಪರಂಪರೆಯ ಜಿಲ್ಲೆಯಾಗಿದ್ದು, ಇಲ್ಲಿ ದಾಸ ಸಾಹಿತ್ಯ, ಗಝಲ್ ಸಾಹಿತ್ಯ, ಪ್ರಾಚೀನ ಇತಿಹಾಸದಿಂದ ಮಧ್ಯಕಾಲೀನ ಇತಿಹಾಸದವರೆಗೆ ನಾನಾ ರೀತಿಯ ಸಾಹಿತ್ಯಗಳು ಹುಟ್ಟಿ ಬೆಳೆದಿವೆ ಎಂದು ನಗರಸಭೆ ಪೌರಾಯುಕ್ತ ಗುರು ಸಿದ್ದಯ್ಯ ಹೇಳಿದರು.

- Advertisement -

ರಾಯಚೂರಿನ ಐತಿಹಾಸಿಕ ಕೋಟೆ ಅಧ್ಯಯನ ಸಮಿತಿ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಬಹುಭಾಷಾ ಕವಿಗೋಷ್ಠಿಯಲ್ಲಿ ಅವರು ಮಾತನಾಡಿದರು. “ಪ್ರಸ್ತುತ ಸಮಾಜಕ್ಕೆ ಸಾಹಿತ್ಯದ ಮುಖಾಂತರ ಜಾಗೃತಿ ಮೂಡಿಸುವುದು ಅತ್ಯವಶ್ಯಕವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ನಗರಸಭೆಯ ಹಿರಿಯ ಸದಸ್ಯ, ಐತಿಹಾಸಿಕ ಕೋಟೆ ಅಧ್ಯಯನ ಸಂಸ್ಥೆಯ ಗೌರವಾಧ್ಯಕ್ಷ ಜಯಣ್ಣ ಮಾತನಾಡಿ, “ಈ ಕಾರ್ಯಕ್ರಮವು ಸುಮಾರು 30 ವರ್ಷಗಳಿಂದ ನಡೆದುಕೊಂಡು ಬಂದಿದ್ದು, ಜಿಲ್ಲೆಯ ಸಾಹಿತ್ಯ ಕಾರ್ಯಕ್ರಮಗಳು ಅತ್ಯವಶ್ಯಕವಾಗಿದೆ” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ ಜಯಲಕ್ಷ್ಮಿ ಮಂಗಳ ಮೂರ್ತಿ ಮಾತನಾಡಿ, “ಕವಿ ಕಲ್ಪನೆಯ ಸಾಹಿತ್ಯವನ್ನು ಇಂತಹ ಕಾರ್ಯಕ್ರಮಗಳಲ್ಲಿ ಮಾಡುವುದು ಅತ್ಯಂತ ಮಹತ್ವವಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ತೋಟಗಾರಿಕೆ ಪಿತಾಮಹ ಡಾ. ಎಂ ಎಚ್ ಮರೀಗೌಡ ಪುತ್ಥಳಿ ಅನಾವರಣ

ಈ ವೇಳೆ ಸದಸ್ಯ ದರೂರ್ ಬಸವರಾಜ್, ಉರ್ದು ಹಿರಿಯ ಕವಿ ವಹಿದ್ ವಾಜಿದ್, ವೀರ ಹನುಮಾನ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ರಂಗಣ್ಣ ಪಾಟೀಲ್, ತಾಲೂಕು ಅಧ್ಯಕ್ಷ ವೆಂಕಟೇಶ್ ಬೇವಿನ ಬೆಂಚಿ, ನಗರಸಭೆಯ ಅಭಿಯಂತರದ ಮಹೇಶ್ ಕುಮಾರ್, ಐತಿಹಾಸಿಕ ಕೋಟೆ ಸಮಿತಿಯ ಅಧ್ಯಕ್ಷ ಕೆ ಸತ್ಯನಾರಾಯಣ, ಕಾರ್ಯದರ್ಶಿಗಳಾದ ಸೈಯದ ಹಫೀಜುಲ್ಲಾ, ಜುನಾಥ್ ಐಲಿ ಸೇರಿದಂತೆ ಇತರರು ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...