ರಾಯಚೂರು | ಮೂರು ದಿನಗಳ ಮುಂಗಾರು ಸಾಂಸ್ಕೃತಿಕ ಬೆಳ್ಳಿ ಹಬ್ಬಕ್ಕೆ ಚಾಲನೆ

Date:

Advertisements

ಮುನ್ನೂರುಕಾಪು ಸಮಾಜದಿಂದ ನಗರದ ರಾಜೇಂದ್ರ ಗಂಜ್ ಆವರಣದಲ್ಲಿ ಆಯೋಜಿಸಿದ ಮೂರು ದಿನಗಳ ಮುಂಗಾರು ಸಾಂಸ್ಕೃತಿಕ ರಾಯಚೂರು ಬೆಳ್ಳಿ ಹಬ್ಬವನ್ನು ಅತ್ಯಂತ ಅದ್ದೂರಿಯಾಗಿ ಚಾಲನೆ ದೊರೆಯಿತು.

ನಗರದಲ್ಲಿ ನಡೆಯಲಿರುವ ಮುಂಗಾರು ಸಾಂಸ್ಕೃತಿಕ ಅಂಗವಾಗಿ ಮೊದಲ ದಿನದ ಎತ್ತುಗಳಿಂದ ಭಾರವಾದ ಕಲ್ಲು‌ ಎಳೆಯುವ ಸ್ಪರ್ಧೆಯನ್ನು ಸಣ್ಣ ನೀರಾವರಿ ಸಚಿವರಾದ ಎನ್ ಎಸ್ ಬೋಸರಾಜು ಅವರು ಚಾಲನೆ ನೀಡಿದರು.

ಸಚಿವರಾದ ಎನ್ ಎಸ್ ಬೋಸರಾಜ್ ಮುಂಗಾರು ಸಾಂಸ್ಕೃತಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ,ಕಲೆ, ಸಾಹಿತ್ಯ, ಸಂಸ್ಕೃತಿಗೆ ಪ್ರೋತ್ಸಾಹಿಸುವ ಚಟುವಟಿಗಳನ್ನು ನಿರಂತರವಾಗಿ ಮಾಡುವುದರ ಜೊತೆ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬ 25 ವರ್ಷಗಳಿಂದ ಆಚರಿಸಿ ರೈತರನ್ನು ಹುರಿದುಂಬಿಸುತ್ತಿದೆ ಎಂದರು.

1000134697

ಈ ಭಾಗದ ಕಲೆ ಸಂಸ್ಕೃತಿ ಸಾಹಿತ್ಯ ಹಾಗೂ ಜಾನಪದ ಕ್ರೀಡೆಯನ್ನು ಹಬ್ಬದ ಮೂಲಕ ಅನಾವರಣಗೊಳಿಸಿ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿದೆ. ನಗರದಲ್ಲಿ ಇತರೆ ಸಮಾಜಗಳು ಆಯೋಜಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಕಾರಣನಂತರಗಳಿಂದ ಅರ್ಧಕ್ಕೆ ಮೋಟಕುಗೊಳಿಸಲಾಗುತ್ತಿದೆ. ಆದರೆ ಮುನ್ನೂರು ಕಾಪು ಸಮಾಜದ ಹಿರಿಯ ಮುಖಂಡ ಹಬ್ಬದ ರೂವಾರಿ ಮಾಜಿ ಶಾಸಕ ಎ. ಪಾಪಾರೆಡ್ಡಿ ಮತ್ತು ಬೆಲ್ಲ ನರಸರೆಡ್ಡಿ ಅವರ ನೇತೃತ್ವದಲ್ಲಿ ನಡೆಯುವ ಮುಂಗಾರು ಬೆಳ್ಳಿ ಹಬ್ಬ ರಾಜ್ಯದಲ್ಲಿ ಮಾದರಿಯಾಗಿದೆ.3 ಕೋಟಿ ಅನುದಾನದಲ್ಲಿ ಬೋಳಮದೊಡ್ಡಿ ಏತ ನೀರಾವರಿ ಟೆಂಡರ್ ಆಹ್ವಾನಿಸಲಾಗಿದೆ. ಲಿಫ್ಟ್ ಏರಿಗ್ರೇಷನ್ ನಡೆಯುತ್ತಿದ್ದು ಕಾಮಗಾರಿ ಪೂರ್ಣಗೊಂಡ ನಂತರ16 ಸಾವಿರ ಎಕರೆ ಪ್ರದೇಶದ ರೈತರಿಗೆ ಅನುಕೂಲವಾಗಲಿದೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅವಮಾನ ಹೇಳಿಕೆ ನಾರಾಯಣಸ್ವಾಮಿ ,ಎನ್ ರವಿಕುಮಾರ ಸದಸ್ಯತ್ವ ರದ್ದತಿಗೆ ಡಿಎಸ್ಎಸ್ ಆಗ್ರಹ

Advertisements

ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಮಾತನಾಡಿ, ಕಳೆದ 25 ವರ್ಷಗಳಿಂದ ನಿರಂತರವಾಗಿ ರೈತರಗೋಸ್ಕರ ಹಾಗೂ ರೈತರಿಗೆ ಕೃಷಿ ಚಟುವಟಿಕೆಯಲ್ಲಿ ತೋಡುಗುವಂತೆ ಮಾಡುತ್ತಿರುವ ಯಾವುದಾದರು ಇದ್ದಾರೆ ಅದು ಮುನ್ನೂರು ಕಾಪು ಸಮಾಜ. ಇದರ ಶ್ರೇಯಸ್ಸು ಹಬ್ಬದ ರೂವಾರಿ ಎ. ಪಾಪಾರೆಡ್ಡಿ ಅವರಿಗೆ ಸಲ್ಲುತ್ತದೆ ಎಂದರು. ಮುನ್ನೂರು ಕಾಪು ಸಮಾಜದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರ ಇದೇ. ಪಾಪಾರೆಡ್ಡಿ ಅವರು ಸಮಾಜದ ಮುತ್ತು ರತ್ನ ಎಂದರು.

ಈ ಸಂದರ್ಭದಲ್ಲಿ ವೀರತಪಸ್ವಿ ಅಭಿನವ ರಾಚೋಟಿ ಮಹಾಸ್ವಾಮಿಗಳು ಸೋಮವಾರಪೇಟೆ ಮಠ, ಮಲ್ಲಿಕಾರ್ಜುನ ಸ್ವಾಮೀಜಿಗಳು,ಮಹಾನಗರ ಪಾಲಿಕೆ ಮಹಾಪೌರ ನರಸಮ್ಮ ನರಸಿಂಹಲು ಮಾಡಗಿರಿ, ಹಬ್ಬದಲ್ಲಿ ಪಾಲ್ಗೊಂಡ ವೀಕ್ಷಿಸಿದರು ,ಮಾಜಿ ಶಾಸಕರು ಹಾಗೂ ಹಬ್ಬದ ರೂವಾರಿ ಎ.ಪಾಪಾರೆಡ್ಡಿ, ಮುನ್ನೂರುಕಾಪು ಸಮಾಜದ ಅಧ್ಯಕ್ಷ ಬೆಲ್ಲಂ ನರಸರೆಡ್ಡಿ, ಕಾರ್ಯದರ್ಶಿ ವಿ.ಕೃಷ್ಣಮೂರ್ತಿ, ಎನ್ ಶಂಕ್ರಪ್ಪ, ಜಯವಂತರಾವ್ ಪತಂಗಿ, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಪಾಲಿಕೆ ಉಪಾಧ್ಯಕ್ಷ ಸಾಜೀದ್ ಸಮೀರ್, ಮಹ್ಮಮದ್ ಶಾಲಂ,ಗದರ್ ಬೆಟ್ಟಪ್ಪ, ಮುನ್ನೂರು ಕಾಪು ಸಮಾಜದ ಮುಖಂಡರು ಸೇರಿದಂತೆ ಅನೇಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X