ರಾಯಚೂರು | ನಗರಸಭೆ ಅಧ್ಯಕ್ಷರಾಗಿ ನರಸಮ್ಮ, ಉಪಾಧ್ಯಕ್ಷರಾಗಿ ಸಾಜೀದ್ ಸಮೀರ್

Date:

Advertisements

ರಾಯಚೂರು ನಗರಸಭೆ 15 ತಿಂಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು, ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದೆ.

ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನರಸಮ್ಮ ಮಾಡಗಿರಿ, ಹಿಂದುಳಿದ ವರ್ಗಕ್ಕೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಸಾಜೀದ್ ಸಮೀರ್ ಅವಿರೋಧವಾಗಿ ಆಯ್ಕೆಯಾದರು.

ಒಟ್ಟು 35 ಸದಸ್ಯರ ಸಂಖ್ಯಾಬಲದಲ್ಲಿ ಬಿಜೆಪಿಯ 12 ಸದಸ್ಯರು, ಜೆಡಿಎಸ್ ನ ಮೂವರು ಸದಸ್ಯರು, ನಗರ ಶಾಸಕರ ಒಂದು ಮತ ಇದ್ದರೂ ಬಿಜೆಪಿ ಕಣದಿಂದ ದೂರ ಉಳಿಯುವ ಮೂಲಕ ಅಚ್ಚರಿ ಮೂಡಿಸಿತು.

Advertisements

ಕಾಂಗ್ರೆಸ್ ನ 11 ಸದಸ್ಯರು, ಒಂಭತ್ತು ಪಕ್ಷೇತರರು, ಸಚಿವ ಎನ್.ಎಸ್.ಭೋಸರಾಜು, ಸಂಸದ ಕುಮಾರ ನಾಯಕ , ಎಂಎಲ್ ಸಿ ವಸಂತ ಕುಮಾರ ಮತಗಳು ಕಾಂಗ್ರೆಸ್ ಪರವಿದ್ದ ಕಾರಣಕ್ಕೆ ಗೆಲುವು ಖಚಿತ ಎನ್ನುವಂತಾಗಿತ್ತು. ಆದರೆ, ಪಕ್ಷೇತರರ ಬೆಂಬಲ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಬಹುಮತ ಸಿಗುವ ಸಾಧ್ಯತೆ ಕಡಿಮೆಯಾಗಿದ್ದರಿಂದ ಕಣದಿಂದ ಹಿಂದೆ ಸರಿಯುವ ಮೂಲಕ ಕಾಂಗ್ರೆಸ್ ಹಾದಿ ಸುಗಮವಾಯಿತು.

ಕಳೆದ ಬಾರಿ ಬಿಜೆಪಿಯ ಲಲಿತಾ ಕಡಗೋಲು ಅಧ್ಯಕ್ಷರಿದ್ದರೆ, ಕಾಂಗ್ರೆಸ್‌ನ ನರಸಮ್ಮ ಮಾಡಗಿರಿ ಉಪಾಧ್ಯಕ್ಷರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Download Eedina App Android / iOS

X