ಶೀಘ್ರದಲ್ಲಿಯೇ ಮಹಾನಗರ ಪಾಲಿಕೆಯಾಗಿ ರಾಯಚೂರು ನಗರಸಭೆ ಮೇಲ್ದರ್ಜೆಗೆ: ಸಚಿವ ರಹೀಮ್‌ಖಾನ್

Date:

ರಾಯಚೂರು ನಗರಸಭೆ ಶೀಘ್ರದಲ್ಲಿಯೇ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಲಿದೆ ಎಂದು ರಾಜ್ಯ ಪೌರಾಡಳಿತ ಸಚಿವ ರಹೀಮ್‌ ಖಾನ್ ಅವರು ಹೇಳಿದರು.

- Advertisement -

ರಾಯಚೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. “ಸಚಿವ ಸಂಪುಟದಲ್ಲಿ ಮೂರ್ನಾಲ್ಕು ಬಾರಿ ಈ ವಿಷಯದ ಬಗ್ಗೆ ಪ್ರಸ್ತಾಪಿಸಲಾಗಿದೆ. ನಗರ ಸಭೆಗೆ ಸರ್ಕಾರದಿಂದ ಕೇವಲ ₹10 ಕೋಟಿ ಅನುದಾನ ನೀಡಲಾಗುತ್ತದೆ. ಆದರೆ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದರೆ, ₹50 ಕೋಟಿ ಅನುದಾನ ಬಿಡುಗಡೆಯಾಗಲಿದೆ. ಹಾಗಾಗಿ ಮಹಾನಗರ ಪಾಲಿಕೆಯಾಗಿ ಮೇಲ್ದದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ಅತ್ಯಂತ ಸಕ್ರಿಯವಾಗಿ ಚುನಾವಣೆಯನ್ನು ಎದುರಿಸಲು ಸಿದ್ಧಗೊಳ್ಳಬೇಕಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಾಮಕರಣ ನಿರೀಕ್ಷೆ ತೀವ್ರಗೊಂಡಿದೆ. ಮುಖಂಡರು ಮತ್ತು ಕಾರ್ಯಕರ್ತರಿಗೆ ನಾಮಕರಣ ದೊರೆಯಲೇಬೇಕು ಎನ್ನುವುದರಲ್ಲಿ ಯಾವುದೇ ಆಕ್ಷೇಪವಿಲ್ಲ. ಸರ್ಕಾರ ಈ ನಿಟ್ಟಿನಲ್ಲಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಮಟ್ಟದ ಎಲ್ಲ ನಾಮಕರಣಗಳನ್ನು ಮುಂದಿನ ಹದಿನೈದು ದಿನಗಳಲ್ಲಿ ಪೂರ್ಣಗೊಳಿಸುವಂತೆ ಆದೇಶಿಸಿದ್ದಾರೆ.

ಮುಂದಿನ 15 ದಿನಗಳಲ್ಲಿ ಎಲ್ಲ ನಾಮಕರಣ ಪ್ರಕ್ರಿಯೆಗಳು ಪೂರ್ಣಗೊಳ್ಳುವ ವಿಶ್ವಾಸವನ್ನು ವ್ಯಕ್ತಪಡಿಸಿದವರು, ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬ ಮುಖಂಡರು ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಅತಿ ಹೆಚ್ಚಿನ ಸ್ಥಾನ ಕಾಂಗ್ರೆಸ್ ಗೆಲ್ಲುವಂತೆ ಮಾಡುವ ಜವಾಬ್ದಾರಿ ನಿರ್ವಹಿಸಬೇಕಾಗಿದೆ” ಎಂದರು.

“ರಾಜ್ಯ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಬೋಸರಾಜು ಅವರು ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ನಿರಂತರವಾಗಿ ಸರ್ಕಾರದೊಂದಿಗೆ ಚರ್ಚಿಸುತ್ತಾರೆ. ಕೆಲ ಸಂದರ್ಭದಲ್ಲಿ ಸರ್ಕಾರದ ಮೇಲೆ ಒತ್ತಡ ಹಾಕುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಅನುದಾನವನ್ನು ಪಡೆಯುತ್ತಾರೆ. ರಾಯಚೂರು ವಿಶ್ವವಿದ್ಯಾಲಯ ಅನುದಾನಕ್ಕೆ ಸಂಬಂಧಿಸಿದ ಸಭೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ನೇರವಾಗಿ ಮಾತನಾಡುವ ಮೂಲಕ ₹48 ಕೋಟಿ ಅನುದಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ” ಎಂದರು.

“ಪೌರಾಡಳಿತ ಇಲಾಖೆಯಿಂದ ದೊರೆಯಬೇಕಾದ ಯಾವುದೇ ಸೌಕರ್ಯಗಳನ್ನು ರಾಯಚೂರು ಜಿಲ್ಲೆಗೆ ಮೊದಲ ಆದ್ಯತೆ ಮೇರೆಗೆ ನೀಡಲಾಗುತ್ತದೆ. ರಾಯಚೂರು ನಗರದಲ್ಲಿ ಅನೇಕ ಸಮಸ್ಯೆಗಳಿದ್ದು, ಈ ಬಗ್ಗೆ ಚರ್ಚಿಸಲು ಜಿಲ್ಲೆಯಲ್ಲಿ ಪರಿಶೀಲನಾ ಸಭೆ ನಡೆಸುವಂತೆ ಬೋಸರಾಜು ಅವರು ನಿರಂತರವಾಗಿ ಒತ್ತಾಯಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಈ ಪರಿಶೀಲನಾ ಸಭೆ ನಡೆಸಲಾಗುತ್ತಿದೆ” ಎಂದು ಹೇಳಿದರು.

“ಹಿಂದಿನ ಬಿಜೆಪಿ ಸರ್ಕಾರ ಬಡವರು ಮತ್ತು ದಲಿತರ ಹಾಗೂ ರೈತರ ಬಗ್ಗೆ ಯಾವುದೇ ಕಾಳಜಿ ಹೊಂದಿರಲಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ದಲಿತರು, ಬಡವರು ಹಾಗೂ ರೈತರ ಪರ ಕಳಕಳಿ ಹಿನ್ನೆಲೆಯಲ್ಲಿ ಐದು ಗ್ಯಾರಂಟಿಗಳ ಮೂಲಕ ಜೀವನ ಭದ್ರತೆಯನ್ನು ಒದಗಿಸಿದೆ. ಈ ಐದು ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿಗೊಳಿಸುವ ಗುರಿ ನಮ್ಮ ಮುಂದೆ ಇರುವುದರಿಂದ ಅನುದಾನ ಬಿಡುಗಡೆಯಲ್ಲಿ ಕೊಂಚ ತೊಂದರೆಯಾದರೂ, ಈಗ ಎಲ್ಲವೂ ಸರಿ ಹೋಗುವ ರೀತಿಯಲ್ಲಿ ಅನುದಾನ ಬಿಡುಗಡೆ ಆರಂಭಗೊಂಡಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೆರಗೋಡು ಧ್ವಜ ವಿವಾದ: ಫೆ.7ರಂದು ಕರೆ ಕೊಟ್ಟಿದ್ದ ಮಂಡ್ಯ ಬಂದ್‌ ವಾಪಸ್‌

ಕಾಂಗ್ರೆಸ್ ಮುಖಂಡ ಪಾರಸ್‌ಮಲ್ ಸುಖಾಣ ಅವರು ಮಾತನಾಡಿ, “ಜಿಲ್ಲೆಯಲ್ಲಿ ಅನೇಕ ಸಮಸ್ಯೆಗಳಿವೆ. ಈ ಬಗ್ಗೆ ಸರ್ಕಾರ ಗಮನಿಸಬೇಕಾಗಿದೆ” ಎಂದರು.

ಸಭೆಯಲ್ಲಿ ಸಚಿವ ಎನ್ ಎಸ್ ಬೋಸರಾಜು, ಶಾಸಕ ಹಂಪಯ್ಯ ನಾಯಕ, ಮುಖಂಡರುಗಳಾದ ಮಹ್ಮದ್ ಶಾಲಂ, ಜಿ ಬಸವರಾಜರೆಡ್ಡಿ, ಜಯಣ್ಣ, ಅಮರೇಗೌಡ ಹಂಚಿನಾಳ, ರುದ್ರಪ್ಪ ಅಂಗಡಿ ಸೇರಿದಂತೆ ಇತರರು ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...

ಯಾದಗಿರಿ | ಮಾಜಿ ತಾ.ಪಂ ಸದಸ್ಯನ ಮೇಲೆ ಹಲ್ಲೆ ಆರೋಪ; ಆರು ಮಂದಿ ವಿರುದ್ಧ ಪ್ರಕರಣ ದಾಖಲು

ಸಾಲದ ಬಡ್ಡಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಶಹಾಪುರ ತಾಲ್ಲೂಕು ಪಂಚಾಯಿತಿ ಮಾಜಿ...