ರಾಯಚೂರು | ಒಂದೇ ಸೂರಿನಡಿ ಸೌಲಭ್ಯಕ್ಕೆ ಸಕಾಲ ಸೇವೆ ಪ್ರಾರಂಭಿಸಿದ ನಗರಸಭೆ

Date:

ರಾಯಚೂರು ನಗರದ ಜನತೆಗೆ ಒಂದೇ ಸೂರಿನಡಿ ಸೌಲಭ್ಯಗಳ ಅವಕಾಶ ಕಲ್ಪಿಸಲು ಸಕಾಲ ಸೇವೆ (ಸಿಂಗಲ್ ವಿಂಡೋ ಸಿಸ್ಟಮ್) ಕೌಂಟರ್‌ಗಳನ್ನು ಪ್ರಾರಂಭಿಸಲಾಗಿದೆ.

- Advertisement -

ಇಲ್ಲಿ ಸರಳವಾಗಿ ಇ-ಖಾತಾ ಮುಟೇಷನ್, ತಿದ್ದುಪಡಿ, ತೆರಿಗೆ ಪಾವತಿ, ಕುಂದುಕೊರತೆಗಳ ಮಾಹಿತಿ ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಸಾರ್ವಜನಿಕರು ಸಂಪರ್ಕಿಸಬಹುದು. ನಗರಸಭೆಯು ಈ ಸೇವೆ ಆರಂಭಿಸಿದ್ದು, ನಗರ ನಿವಾಸಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಎನ್. ಎಸ್. ಬೋಸರಾಜು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸಾರ್ವಜನಿಕ ಸೇವೆಗಳ ಕೌಂಟರ್ ಉದ್ಘಾಟಿಸಿ ಮಾತನಾಡಿ, ನಗರದ ಜನತೆಗೆ ಸಾರ್ವಜನಿಕ ಸೇವೆ ಸುಗಮವಾಗಿ ದೊರೆಯಲು ಹಾಗೂ ಇ-ಖಾತಾ, ಮುಟೇಷನ್‌ಗಾಗಿ ತೊಂದರೆ ಪಡೆಯದೆ ಕೌಂಟರ್ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ವಾರ್ಡ್‌ಗಳಲ್ಲಿ ಪ್ರತ್ಯೇಕ ಕೌಂಟರ್‌ಗಳಿದ್ದು, ಜೊತೆಗೆ ಹೆಲ್ಪ್ ಲೈನ್ ಕೌಂಟರ್ ಸಹ ಮಾಡಿದೆ. ಯಾವುದೇ ಸಮಸ್ಯೆಗಳಿದ್ದಲ್ಲಿ ಇಲ್ಲಿ ತಮ್ಮ ಸಮಸ್ಯೆ ತಿಳಿಸಬಹುದು ಎಂದರು.

ನಗರಸಭೆ ಅಧಿಕಾರಿಗಳು ಸಹ ಸಾರ್ವಜನಿಕರಿಗೆ ಸ್ಪಂದಿಸಿ ಕೆಲಸ ಮಾಡಬೇಕು. ಅಧಿಕಾರಿಗಳು ಉತ್ತಮ ಕೆಲಸ ಮಾಡಿದಾಗ ಮಾತ್ರ ಜನರಿಗೆ ಅನುಕೂಲವಾಗುತ್ತದೆ. ನಗರದಲ್ಲಿ ಅನೇಕ ಸಮಸ್ಯೆಗಳಿದ್ದು, ನಗರಸಭೆಯ ಮೇಲೆ ಆಧಾರವಾಗಿದ್ದಾರೆ. ಎಲ್ಲಾ ವಾರ್ಡ್ ಸದಸ್ಯರು ತಮ್ಮ ತಮ್ಮ ವಾರ್ಡ್‌ಗಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಆಲಿಸಲಿದ್ದು, ಕುಡಿಯುವ ನೀರಿನ ತೊಂದರೆ ಇದ್ದಲ್ಲಿ ಸರಿಪಡಿಸುವ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ, ಹಿರಿಯ ನಗರ ಸಭೆ ಸದಸ್ಯ ಜಯಣ್ಣ, ಶಾಂತಪ್ಪ, ಜಿಂದಪ್ಪ, ಬಸವರಾಜರಡ್ಡಿ, ರಮೇಶ, ಭೀಮರಾಯ್, ಶಾಂತಪ್ಪ, ನರಸಿಂಹಲು ಮಾಡಗಿರಿ, ಆಂಜನೇಯ್ಯ ಕಡಗೋಲ್, ದರೂರ್ ಬಸವರಾಜ್ ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...