ರಾಯಚೂರು | ನಾಗ ಮೋಹನ್‌ದಾಸ್ ಏಕ ಸದಸ್ಯ ವಿಚಾರಣಾ ಸಮಿತಿ ಸಂವಿಧಾನ ಬಾಹಿರ: ಮಹೇಂದ್ರ ಕುಮಾರ್

Date:

ಪರಿಶಿಷ್ಟ ಜಾತಿ ಸಮುದಾಯಕ್ಕಾಗಿ ಒಳ ಮೀಸಲಾತಿ ಜಾರಿ ಮಾಡಲು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ ಸಲಹೆ ಪಡೆಯದೆ ರಾಜ್ಯ ಕಾಂಗ್ರೆಸ್ ಸರ್ಕಾರ ಜಸ್ಟೀಸ್ ನಾಗಮೋಹನ್‌ದಾಸ್ ನೇತೃತ್ವದ ಏಕ ಸದಸ್ಯ ವಿಚಾರಣ ಸಮಿತಿ ನೇಮಕ ಮಾಡಿದ್ದು ಸಂವಿಧಾನ ಬಾಹಿರವಾಗಿದೆ ಎಂದು ಡಾ.ಬಿ.ಆರ್ ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ ಮಿತ್ರ ಆರೋಪಿಸಿದರು.

- Advertisement -

ಅವರಿಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, “ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ನೀಡಲು ಪರಿಶಿಷ್ಟ ಜಾತಿಯರಲ್ಲಿ ಮಾದಿಗ ಮತ್ತು ಅದರ ಸಂಬಂಧಿತ ಜಾತಿಗಳು, ಹೊಲೆಯ ಅದರ ಸಂಬಂಧಿತ ಜಾತಿಗಳು, ಪರಿಶಿಷ್ಟ ಜಾತಿಯಲ್ಲದ ಲಮಾಣಿ,‌ ಭೋವಿ, ಕೊರಚ, ಕೊರಮ ಜಾತಿಗಳನ್ನು ಹಾಗೂ ಅಲೆಮಾರಿ ಉಪ ಜಾತಿಗಳು ಸೇರಿ ನಾಲ್ಕು ಗುಂಪುಗಳಾಗಿ ಮಾಡಿದೆ. ಇದರ ಆಧಾರದ ಮೇಲೆ ಒಳ ಮೀಸಲಾತಿ ಜಾರಿ ಮಾಡಿದರೆ ಸಂವಿಧಾನದ ಅನುಚ್ಛೇದ 19(1) ಜೆ ಉಲ್ಲಂಘನೆ ಯಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

“ಸುಪ್ರೀಂ ಕೋರ್ಟ್‌ನ 7 ನ್ಯಾಯಾಧೀಶರ ಪೀಠ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ನೀಡಬಹುದು ಎಂದು ಸಲಹೆ ನೀಡಿ, ಕೆನೆ ಪದರದ ಪರಿಕಲ್ಪನೆ ಜಾರಿ ಮಾಡಲು ಹೇಳಿದರೂ ತರಾತುರಿಯಲ್ಲಿ ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಸಮಿತಿ ರಚನೆ ಮಾಡಿ ರಾಜ್ಯ ಕಾಂಗ್ರೆಸ್ ಸರ್ಕಾರ ನ್ಯಾಯಾಲಯದ ಸಲಹೆಯನ್ನೂ ಉಲ್ಲಂಘನೆ ಮಾಡಿದೆ” ಎಂದು ಆರೋಪಿಸಿದರು.

ಈ ಸುದ್ಡಿ ಓದಿದ್ದೀರಾ? ರಾಯಚೂರು |ಆಹಾರ ಸೇವನೆಯಲ್ಲಿ ಏರುಪೇರು ವಾಂತಿಬೇದಿ ಪ್ರಕರಣ; 10 ಜನ ಅಸ್ವಸ್ಥ

“ಕರ್ನಾಟಕ ಹೈಕೋರ್ಟ್‌ನಲ್ಲಿ 2024ರ ಏಪ್ರಿಲ್4 ರಂದು ಕೊರಮ, ಕೊರಚ, ಭೋವಿ, ಲಮಾಣಿ ಜಾತಿಗಳನ್ನು‌ ಪರಿಶಿಷ್ಟ ಜಾತಿ ಪಟ್ಟಿಯಿಂದ ಹೊರ‌ತೆಗೆಯಬೇಕು ಎಂದು ರಿಟ್ ಅರ್ಜಿ ಸಲ್ಲಿಸಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ. ಹಾಗಾಗಿ ನ್ಯಾಯಾಲಯದ ಆದೇಶ ಬಾಕಿ ಇರುವಾಗಲೇ ಒಳ ಮೀಸಲಾತಿ ಜಾರಿ ಮಾಡಬಾರದು” ಎಂದು ಮನವಿ ಮಾಡಿದರು.

ಈ ವೇಳೆ ಹುಸೇನ್ ಬಾಷ ಪಲಕನಮರಡಿ, ನರಸಿಂಹಲು ಪೋತಗಲ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ರಾಜ್ಯ ಜನಜಾಗೃತಿ ಧಮ್ಮ ಯಾತ್ರೆ ನಾಳೆ ಬಾಗಲಕೋಟೆಗೆ ಆಗಮನ

70ನೇ ಬೌದ್ಧ ಧಮ್ಮ ದೀಕ್ಷೆಯ ಪ್ರಯುಕ್ತ, ಸಂವಿಧಾನ ಆಧಾರಿತ ಪ್ರಬುದ್ಧ ಭಾರತ...

ಶಿಕಾರಿಪುರ | ಕವಿ, ಬರಹಗಾರರಿಂದ ಮನಸ್ಸು ಒಂದಾಗಿಸುವ ಕೆಲಸವಾಗಲಿ: ಡಾ. ಸರ್ಫ್ರಾಜ್ ಚಂದ್ರಗುತ್ತಿ

ಕವಿ ಹಾಗೂ ಬರಹಗಾರರು ತಮ್ಮ ಬರವಣಿಗೆ ಮೂಲಕ ಮನಸ್ಸುಗಳನ್ನು ಕೂಡಿಸುವ ಕೆಲಸ...

ರಾಯಚೂರು | ನಕಲಿ ವೈದ್ಯರ ಕ್ಲಿನಿಕ್‌ಗಳ ಮೇಲೆ ಆರೋಗ್ಯ ಇಲಾಖೆ ದಾಳಿ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ

ಜಿಲ್ಲೆಯಾದ್ಯಂತ ವಿವಿಧೆಡೆ ವೈದ್ಯಕೀಯ ಪದವಿ ಪಡೆಯದೆ ವೈದ್ಯ ವೃತ್ತಿ ನಡೆಸುತ್ತಿದ್ದರೆನ್ನಲಾದ ನಕಲಿ...