ರಾಯಚೂರು | ಗುತ್ತಿಗೆದಾರರ ಬಾಕಿ ಹಣ ಪಾವತಿಸದೇ ಇದ್ದರೆ ಹೋರಾಟ; ನಾಗಪ್ಪ ಗಿರಣಿ ಎಚ್ಚರಿಕೆ

Date:

ಹಿಂದಿನ ಬಿಜೆಪಿ ಸರ್ಕಾರದಂತೆ ಕಾಂಗ್ರೆಸ್ ಸರ್ಕಾರವೂ ಕೂಡ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ ಅನ್ಯಾಯ ಮಾಡುತ್ತಿರುವುದನ್ನು ಅನ್ಯಾಯ ಖಂಡಿಸಿ 15 ದಿನಗಳ ನಂತರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ನಾಗಪ್ಪ ಗಿರಣಿ ಹೇಳಿದರು.

- Advertisement -

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, “ಜಿಲ್ಲೆಯಲ್ಲಿ ಸರಿ ಸುಮಾರು ₹300 ಕೋಟಿಯಿಂದ ₹500 ಕೋಟಿಯಷ್ಟು ಬಾಕಿ ಹಣವನ್ನು ಗುತ್ತಿಗೆದಾರರಿಗೆ ಪಾವತಿ ಮಾಡಬೇಕು. ಆದರೆ ರಾಜ್ಯದ ಮುಖ್ಯಮಂತ್ರಿಯವರು ಬಾಕಿಬಿಲ್ ಪಾವತಿಸುವಂತೆ ಸೂಚಿಸಿದ್ದರೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಧಿಕೃತ ಆದೇಶ ನೀಡದ ಹೊರತು ಬಿಲ್ ಪಾವತಿಸುವುದಿಲ್ಲವೆಂದು ಹೇಳುತ್ತಿದ್ದಾರೆ. ಸಾಲ ಮಾಡಿ ಗುತ್ತಿಗೆ ಕೆಲಸ ಮಾಡುವ ಗುತ್ತಿಗೆದಾರರನ್ನು ಎಲ್ಲ ಸರ್ಕಾರಗಳು ಸಾಲಗಾರರನ್ನಾಗಿಸಿವೆ. ಕೆಕೆಆರ್‌ಡಿಬಿ ಒಂದರಲ್ಲಿಯೇ ₹1,957 ಕೋಟಿ ಬಾಕಿಯಿದೆ. ರಾಜ್ಯಾದ್ಯಂತ 47 ಸಾವಿರ ಕೋಟಿ ರೂ. ಬಾಕಿಯಿದೆ. ಹಿಂದಿನ ಬಿಜೆಪಿ ಸರ್ಕಾರವೂ ಗುತ್ತಿಗೆದಾರರರಿಗೆ ಬಾಕಿ ಹಣ ನೀಡದೇ ನಿರ್ಲಕ್ಷವಹಿಸಿತ್ತು” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಕಾಂಗ್ರೆಸ್ ಸರ್ಕಾರ ಬಿಟ್ಟಿ ಯೋಜನೆಗಳನ್ನು ರೂಪಿಸಿ ಜಾರಿಯಲ್ಲಿ ತೊಡಗಿದೆ. ಹಣಹಾಕಿ ಮಾಡಿದ ಗುತ್ತಿಗೆದಾರರನ್ನು ಕಡೆಗಣಿಸಿದೆ” ಎಂದರು.

“ಬೆಂಗಳೂರಿನಲ್ಲಿ ಬಿಬಿಎಂಪಿ ಗುತ್ತಿಗೆದಾರರಿಗೆ ಬಾಕಿ ಹಣ ನೀಡದೇ ಇರುವುರಿಂದ ಗುತ್ತಿಗೆದಾರನೊಬ್ಬ ಆತ್ಮಹತ್ಯೆ ಮಾಡಿಕೊಳ್ಳಲು ಸರ್ಕಾರವೇ ಹೊಣೆಯಾಗಿದೆ. ಉಪ ಮುಖ್ಯಮಂತ್ರಿ ಡಿ ಕೆ ಶಿವುಕುಮಾರ್ ಅವರು ಗುತ್ತಿಗೆದಾರರ ಕುರಿತು ಅಹಂಕಾರವಾಗಿ ಮಾತನಾಡಿರುವುದು ಖಂಡನೀಯ” ಎಂದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಆಟೋ ಚಾಲಕರ ನಿಗಮ ಮಂಡಳಿ ರಚನೆಗೆ ಒತ್ತಾಯ

ಎಲ್ಲ ಶಾಸಕರು ಗುತ್ತಿಗೆದಾರರಾಗಿಯೇ ಶಾಸಕರು, ಸಚಿವರುಗಳಾಗಿದ್ದಾರೆ. ಗುತ್ತಿಗೆದಾರರ ಸಮಸ್ಯೆ ಏನು ಎಂದು ಗೊತ್ತಿದ್ದರೂ ಬಿಲ್ ಪಾವತಿಸುತ್ತಿಲ್ಲ. ಕೂಡಲೇ ಬಾಕಿಯಿರುವ ಬಿಲ್ ಪಾವತಿಗೆ ಮುಂದಾಗಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ, ಆಂಜಿನಯ್ಯ, ಸುರೇಶ ಹೊಸೂರು, ವೀರಯ್ಯ ಸ್ವಾಮಿ ಆಶಾಪುರು, ಡಿ.ರವೀಂದ್ರ ನಾಯಕ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...