ರಾಯಚೂರು | ಸಿ ಟಿ ರವಿ ಕ್ಷಮೆಯಾಚಿಸದಿದ್ದರೆ ಆತನ ಮನೆ ಮುಂದೆ ಧರಣಿ: ನಿರ್ಮಲಾ ಬೆಣ್ಣೆ ಎಚ್ಚರಿಕೆ

Date:

ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವಿರುದ್ಧ ಅವಾಚ್ಯ ಪದ ಬಳಸಿರುವ ಬಿಜೆಪಿ ಸದಸ್ಯ ಸಿ ಟಿ ರವಿ ಮತ್ತು ಆತನ ಮನೆಯ ಹೆಣ್ಣುಮಕ್ಕಳು ಕ್ಷಮೆಯಾಚಿಸದಿದ್ದರೆ ಮುಂದಿನ ದಿನಗಳಲ್ಲಿ ಸಿ ಟಿ ರವಿ ಮನೆ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುತ್ತದೆ ಎಂದು ಕಾಂಗ್ರೆಸ್ ಮಹಿಳಾ ಮುಖಂಡೆ ನಿರ್ಮಲಾ ಬೆಣ್ಣೆ ಎಚ್ಚರಿಕೆ ನೀಡಿದರು.

- Advertisement -

ರಾಯಚೂರು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, “ಪ್ರಜಾಪ್ರಭುತ್ವದ ಹೆಬ್ಬಾಗಿಲಾಗಿರುವ ಬೆಳಗಾವಿಯ ಸುವರ್ಣಸೌಧದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರಿಗೆ ಬಿಜೆಪಿ ಸದಸ್ಯ ಸಿ ಟಿ ರವಿ ಅವಾಚ್ಯ ಪದ ಬಳಸಿ ನಿಂದಿಸಿರುವುದು ಇಡೀ ರಾಜ್ಯದ ಮಹಿಳೆಯರಿಗೆ ಕೆಟ್ಟ ಸಂದೇಶವಾಗಿದೆ. ದೇಗುಲ ಎಂದೇ ಭಾವಿಸುವ ಬೆಳಗಾವಿ ಸುವರ್ಣ ಸೌಧದಲ್ಲಿ ಸಚಿವೆ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿರುವುದು ಸಭ್ಯತೆಯಲ್ಲ. ಸಿ ಟಿ ರವಿ ನಡೆ ತೀವ್ರ ಖಂಡನೀಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಒಬ್ಬ ಮಹಿಳಾ ಪ್ರತಿನಿಧಿಗೆ ಈ ರೀತಿ ಹೇಳಿಕೆ ನೀಡಿ ತನ್ನ ಸ್ಥಾನಕ್ಕೆ ಅವಮಾನ ಮಾಡಿಕೊಂಡಿದ್ದಾರೆ. ಈ ಹಿಂದೆ ರಮೇಶ್ ಜಾರಕಿಹೊಳಿ ಮಹಿಳೆಯರ ವಿರುದ್ಧ ಅವಾಚ್ಯ ಪದ ಬಳಸಿದ್ದರು. ಅದೇ ರೀತಿ ಈಗ ಸಿ ಟಿ ರವಿ ಬಳಸಿದ್ದಾರೆ. ಹೆಣ್ಣುಮಕ್ಕಳಿಗೆ ಕೆಟ್ಟ ಪದಗಳನ್ನು ಬಳಸಿರುವುದನ್ನು ಬಿಜೆಪಿ ಬೆಂಬಲಿಸುತ್ತಿದೆ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಮಿತ್ ಶಾ ರಾಜೀನಾಮೆಗೆ ಆಗ್ರಹ; ಡಿ.27ರಂದು ಬೃಹತ್‌ ಪ್ರತಿಭಟನೆ

“ಬಿಜೆಪಿಗರಿಗೆ ಮಹಿಳೆಯರ ಮೇಲೆ ಗೌರವವಿಲ್ಲ. ಕಾಂಗ್ರೆಸ್ ಪಕ್ಷ ಎಂದಿಗೂ ಮಹಿಳೆಯರ ವಿರುದ್ಧ ಅಗೌರವದಿಂದ ನಡೆದುಕೊಂಡಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಮಹಿಳೆಯರಿಗೆ ಅಪಾರ ಗೌರವವಿದೆ. ಆದರೆ ಸಿ ಟಿ ರವಿಯ ಅವಾಚ್ಯ ಪದ ತೀವ್ರ ಖಂಡನೀಯ” ಎಂದರು.

ಈ ಸಂದರ್ಭದಲ್ಲಿ ಎಸ್ ಪ್ರತಿಭಾ ರೆಡ್ಡಿ, ಜ್ಯೋತಿ, ಭಾರತಿ, ವಂದನಾ ಶಿವುಕುಮಾರ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡಿ: ಎಸ್.ಎಂ ಪಾಟೀಲ ಗಣಿಹಾರ

ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ...

ವಿಜಯಪುರ | ರೈತರಿಗೆ ಎಕರೆಗೆ ರೂ.25 ಸಾವಿರ ಪರಿಹಾರ ನೀಡಿ: ಭೀಮ್ ರಾಜ್ಯ ದಲಿತ ಸೇವಾ ಸಮಿತಿ ಆಗ್ರಹ

ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ ಕನಿಷ್ಠ...

SIR ರದ್ದುಗೊಳಿಸಿ, CEC ಜ್ಞಾನೇಶ್ ಕುಮಾರ್ ವಜಾಗೊಳಿಸಲು ಆಗ್ರಹ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಕೇಂದ್ರ...

ಉಡುಪಿ | ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಸಾಹಿತ್ಯದ ಪಾತ್ರ ಮಹತ್ವದ್ದು

ಪ್ರಶ್ನೆಗಳನ್ನು ಎತ್ತುವುದಷ್ಟೇ ಮುಖ್ಯವಲ್ಲ; ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವೂ ಅಗತ್ಯ. ಸಾಹಿತ್ಯವು...