ರಾಯಚೂರು | ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಸಾರಿಗೆ ಸೌಲಭ್ಯಕ್ಕೆ ನಿಜಾಮುದ್ದೀನ್ ಒತ್ತಾಯ

Date:

ಗ್ರಾಮೀಣ ಪ್ರದೇಶದಿಂದ ಶಾಲೆ ಕಾಲೇಜುಗಳಿಗೆ ತೆರಳಲು ಸಮಯಕ್ಕೆ ಸರಿಯಾಗಿ ಸಾರಿಗೆ ಸೌಲಭ್ಯ ಕಲ್ಪಿಸಬೇಕು ಎಂದು ಜೆಡಿಎಸ್ ಮುಖಂಡ ನಿಜಾಮುದ್ದೀನ್ ಒತ್ತಾಯಿಸಿದರು.

- Advertisement -

ರಾಯಚೂರು ನಗರದಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಇವರು, “ನಿತ್ಯವೂ ಸಕಾಲಕ್ಕೆ ಬಸ್‌ಗಳ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ಆಟೋ, ಟಾಟಾ ಏಸಿ ಸೇರಿದಂತೆ ಇತರ ವಾಹನಗಳಿಗೆ ಜೋತುಬಿದ್ದು ಹರಸಾಹಸಪಟ್ಟು ಶಾಲೆ ಕಾಲೇಜಿಗೆ ಬರುತ್ತಿದ್ದಾರೆ. ಇದರಿಂದಾಗುವ ಅನಾನುಕೂಲಗಳನ್ನು ತಪ್ಪಿಸಲು ಕೂಡಲೇ ಗ್ರಾಮೀಣ ಭಾಗಕ್ಕೆ ಬಸ್ ಸೌಲಭ್ಯ ಒದಗಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

“ವಿದ್ಯಾರ್ಥಿಗಳು ಶಾಲೆ ಕಾಲೇಜುಗಳಿಗೆ ತೆರಳಲು ಸಕಾಲಕ್ಕೆ ಬಸ್‌ ಸೌಲಭ್ಯವಿಲ್ಲದೆ ಪ್ರಾಣದ ಹಂಗು ಲೆಕ್ಕಿಸದೆ ಬಸ್‌ಗಳಿಗೆ ಜೋತು ಬೀಳುವ ಪರಿಸ್ಥಿತಿ ಒದಗಿದೆ. ಸಕಾಲಕ್ಕೆ ಬಸ್‌ಗಳು ಸಿಗದೆ ಅಥವಾ ಬಸ್‌ಗಳು ಇದ್ದರೂ ಪೂರ್ತಿ ತುಂಬಿ ಬಾಗಿಲಲ್ಲಿ ಜೋತುಬಿದ್ದು ನಿಲ್ಲುವ ಚಿತ್ರಣ ಗ್ರಾಮೀಣ ಭಾಗದಲ್ಲಿ ಬಹುತೇಕ ಕಡೆ ಕಂಡುಬರುತ್ತಿದೆ” ಎಂದರು.

“ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಸಮಯ ಮತ್ತು ಮಾರ್ಗವನ್ನು ಹೊಂದಿಸದೆ ಇರುವುದರಿಂದ ವಿದ್ಯಾ ಸಂಸ್ಥೆಗಳಿಗೆ ವಿದ್ಯಾರ್ಥಿಗಳು ಹೋಗಲು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮೀಣ ಭಾಗಗಳಿಗೆ ಬಸ್ಸುಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳು ಟಂ-ಟಂ, ಟಾಟಾ ಮ್ಯಾಜಿಕ್, ಆಟೋ, ಗೂಡ್ಸ್‌, ಟ್ರ್ಯಾಕ್ಟರ್‌ಗಲ್ಲಿ ಪ್ರಯಾಣಿಸುವುದು ಸಾಮಾನ್ಯವಾಗಿದೆ. ಗ್ರಾಮೀಣ ಭಾಗಗಳಿಂದ ರಾಯಚೂರು ನಗರಕ್ಕೆ ಬರುವ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲೆ ಕಾಲೇಜು ತಲುಪಲು ಸಾಧ್ಯವಾಗುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಬಸ್ ಪಾಸು ಇದ್ದರೂ ಖಾಸಗಿ ವಾಹನಗಳಿಗೆ ಮೊರೆಯಾಗಿ ಹಣಕೊಟ್ಟು ಸಂಚರಿಸಬೇಕಾಗಿರುತ್ತದೆ. ಪ್ರತಿದಿನ ಸಾವಿರಾರು ವಿದ್ಯಾರ್ಥಿಗಳು ಬಾಗಿಲಲ್ಲಿ ಜೋತು ಬಿದ್ದು, ಪ್ರಾಣಾಪಾಯ ಲೆಕ್ಕಿಸದೆ ಪ್ರಯಾಣ ಮಾಡುತ್ತಿದ್ದಾರೆ. ಪ್ರತಿದಿನ ಸಾವಿರಾರು ವಿದ್ಯಾರ್ಥಿಗಳು ಗ್ರಾಮೀಣ ಭಾಗದಿಂದ ನಗರ ಪ್ರದೇಶಕ್ಕೆ ಹೋಗಿ ವ್ಯಾಸಂಗ ಮಾಡುತ್ತಿದ್ದು, ಶಾಲೆ ಕಾಲೇಜುಗಳಿಗೆ ಹೋಗಿ ಬರುವುದೆಂದರೆ ದೊಡ್ಡ ಪ್ರಯಾಸದ ಕೆಲಸ. ಸಾಯಂಕಾಲ ಮನೆಗಳಿಗೆ ಮುಟ್ಟುವಷ್ಟರಲ್ಲಿ ಕತ್ತಲು ಆವರಿಸಿರುತ್ತದೆ. ಮಳೆ ಬಂದರಂತೂ ಸಮಸ್ಯೆಗಳು ಹೇಳತೀರದಷ್ಟಾಗಿದೆ. ರಸ್ತೆಯಲ್ಲಿ ಬರುವ ಖಾಸಗಿ ವಾಹನಗಳು, ದ್ವಿ-ಚಕ್ರ ವಾಹನಗಳ ಸವಾರರನ್ನು ನಿಲ್ಲಿಸಿ ಬೇರೆ ವಾಹನಗಳಿಗೆ ಅವಲಂಬಿತರಾಗುವ ವಿದ್ಯಾರ್ಥಿ ವಿದ್ಯಾರ್ಥಿನಿಯರ ಸಂಕಷ್ಟವನ್ನು ನಾವು ಪ್ರತಿದಿನ ನೋಡುತ್ತಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ ? ರಾಯಚೂರು | ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ಶಾಲಾಡಳಿತದಿಂದ ಚೆಕ್‌ ವಿತರಣೆ

“ಬಸ್‌ಗಳ ಕೊರತೆಯಿಂದ ವಿದ್ಯಾರ್ಥಿಗಳು ವಿಶೇಷವಾಗಿ ಹೆಣ್ಣುಮಕ್ಕಳನ್ನು ಪಿಯುಸಿ ಹಾಗೂ ಪದವಿ ಕಾಲೇಜುಗಳ ಪ್ರವೇಶ ದಾಖಲಾತಿಗೆ ಹಿಂದೇಟು ಹಾಕುವಂತಹ ಪರಿಸ್ಥಿತಿ ನಮ್ಮ ಗ್ರಾಮೀಣ ಭಾಗದಲ್ಲಿ ಉದ್ಭವವಾಗಿದೆ. ಜಿಲ್ಲಾಧಿಕಾರಿ ಹಾಗೂ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಗ್ರಾಮೀಣ ಭಾಗದ ವಿದ್ಯಾರ್ಥಿ ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ಒಂದು ವಾರದೊಳಗೆ ವಿಶೇಷ ಬಸ್‌ಗಳ ಸೌಲಭ್ಯವನ್ನು ಕಲ್ಪಿಸಿಕೊಡಬೇಕು” ಎಂದು ಮನವಿ ಮಾಡಿದ್ದಾರೆ.

ಒಂದು ವೇಳೆ ವಾರದೊಳಗೆ ಮನವಿಗೆ ಸ್ಪಂದಿಸದೇ ಇದ್ದಲ್ಲಿ, ವಿದ್ಯಾರ್ಥಿ ವಿದ್ಯಾರ್ಥಿನಿಯರೊಂದಿಗೆ ಯರಗೇರಾ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 167ರ ಮದ್ಯರಸ್ತೆಯಲ್ಲಿ ಜೆಡಿಎಸ್ ವತಿಯಿಂದ ಅನಿವಾರ್ಯವಾಗಿ ಬೃಹತ್ ರಸ್ತೆ ತಡೆ ಹೋರಾಟ ಮಾಡಬೇಕಾಗುತ್ತದೆ. ಅದಕ್ಕೆ ಮುಂದಿನ ಯಾವುದೇ ಅಪಾಯಕ್ಕೆ ಅಥವಾ ಅಪಘಾತಕ್ಕೆ ಜಿಲ್ಲಾಡಳಿತ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ನೇರ ಜವಾಬ್ದಾರರಾಗಬೇಕಾಗುತ್ತದೆ” ಎಂದು ಎಚ್ಚರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಕೊಲೆ

ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ...

ಗ್ರಾಮೀಣ ಬದುಕು, ಕೃಷಿ ಸಂಸ್ಕೃತಿ ಪ್ರವಾಸಿಗರಿಗೆ ಪರಿಚಯಿಸಲು ಹೊಸ ಪ್ರವಾಸೋದ್ಯಮ ಪ್ಯಾಕೇಜ್‌ಗಳ ಚಿಂತನೆ

ಉಡುಪಿ ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳೊಂದಿಗೆ ಗ್ರಾಮೀಣ...

ವಿಜಯಪುರ | ಬರ ಪರಿಹಾರ ಹೆಚ್ಚಳ, ಸಾಲಮನ್ನಾಕ್ಕೆ ರಾಜ್ಯ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಮಳೆ ಕೈಕೊಟ್ಟು ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿರುವ...