ಸರ್ಕಾರವು ರಾಜ್ಯದಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ರಾಯಚೂರು ಜಿಲ್ಲೆಯಲ್ಲಿ ವಕ್ಫ್ ವಿವಾದದಲ್ಲಿ ಯಾವುದೇ ಗೊಂದಲಗಳಿಲ್ಲ. ವಕ್ಫ್ ಸಲಹಾ ಸಮಿತಿಯ ಎಲ್ಲರೂ ಒಗ್ಗಟ್ಟಿನಿಂದ ಹೋಗಬೇಕು ಎಂದು ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜು ಸಲಹೆ ನೀಡಿದರು.
ರಾಯಚೂರು ನಗರದ ಜಿಲ್ಲಾ ಪಂಚಾಯತ್ ಎದುರು ಇರುವ ಅಮೀರ್ ಕಾಂಪ್ಲೆಕ್ಸ್‌ಗೆ ಸ್ಥಳಾಂತರಗೊಂಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಕಾರ್ಯಾಲಯ ಉದ್ಘಾಟನೆ ಮಾಡಿ ಮಾತನಾಡಿದರು.
“ರಾಜ್ಯದಲ್ಲಿ ಅಲ್ಪಸಂಖ್ಯಾತರು ಹಾಗೂ ಎಲ್ಲ ಧರ್ಮದ ಸಮುದಾಯಗಳ ಅಭಿವೃದ್ಧಿಯಲ್ಲಿ ಮುಂದಾಗಬೇಕೆಂದು ಹಲವಾರು ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಯತ್ನವಿದೆ” ಎಂದು ಹೇಳಿದರು..
“ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಂದ ಬರಬೇಕಾದ ಎಲ್ಲ ಸೌಲಭ್ಯ ಕುರಿತು ಸರ್ಕಾರದ ಮಟ್ಟದಲ್ಲಿ ಗಮನಹರಿಸಲಾಗುತ್ತದೆ. ಕಾಂಗ್ರೆಸ್ ಸರ್ಕಾರವು ಜನಸಾಮಾನ್ಯರಿಗೆ ಬೇಕಾಗುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಟ್ರಾನ್ಸ್ ಫಾರ್ಮರ್‌ಗೆ ಭಾರೀ ಗಾತ್ರದ ಲಾರಿ ಡಿಕ್ಕಿ; ತಪ್ಪಿದ ಅನಾಹುತ
ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಮೌಲಾನಾ ಫರೀದ್ ಖಾನ್, ಜಮಾತೆ ಅಹ್ಲೆ ಸುನ್ನತ್ ರಾಜ್ಯಾಧ್ಯಕ್ಷ ತನ್ವೀರ್ ಹಾಷ್ಮಿ ಸಾಹೆಬ್, ಉರ್ದು ಅಕಾಡೆಮಿಯ ಅಧ್ಯಕ್ಷ ಮುಫ್ತಿ ಹಜರತ್ ಖಾಜಿ ಮೊಹಮ್ಮದ್ ಅಲಿ ಮಿಸ್ಬಾ, ಮೊಹಮ್ಮದ್ ಶಾಲಂ, ಬಷಿರುದ್ದೀನ್, ಸಾಜಿದ್ ಸಾಮೀರ್, ಶಂಶಾಲಂ ದರ್ಗಾ ಮುತವಲ್ಲಿ ಅಶ್ರಫ್ ರಾಜಾ ಇದ್ದರು.
