ರಾಯಚೂರು | ಡಿಕೆಶಿ ಹೊರಗಿಟ್ಟು ಯಾವುದೇ ರಹಸ್ಯ ಸಭೆ ಮಾಡಿಲ್ಲ, ಸಿಎಂ ಬದಲಾವಣೆಯೂ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

Date:

ರಾಜ್ಯದ ಮುಖ್ಯಮಂತ್ರಿ‌‌ ಸ್ಥಾನದಲ್ಲಿ ಈಗಾಗಲೇ ಸಿದ್ದರಾಮಯ್ಯನವರಿದ್ದು, ಅವರನ್ನು ಬದಲಾಯಿಸುವ ಅವಶ್ಯಕತೆಯಿಲ್ಲ. ಹಾಗಾಗಿ ಸಿಎಂ ಬದಲಾವಣೆ ಚರ್ಚೆಯೂ ಅಗತ್ಯವಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ‌ ತಿಳಿಸಿದರು.

- Advertisement -

ರಾಯಚೂರು ನಗರದ ನಿಜಲಿಂಗಪ್ಪ ಕಾಲೋನಿಯಲ್ಲಿರುವ ಸಚಿವ ಎನ್‌ ಎಸ್‌ ಬೋಸರಾಜು ಅವರ ನಿವಾಸದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, “ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಬಿಟ್ಟು‌ ಯಾವುದೇ ರಹಸ್ಯ ಸಭೆಯನ್ನು ಮಾಡಿಲ್ಲ. ಎಲ್ಲರೂ ಕೂಡಿಯೇ ಸಭೆ ಮಾಡಿದ್ದು, ಊಟದ ಸಭೆಯಾಗಿತ್ತು. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಬದಲಾವಣೆ, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಠಿಯಂತಹ ವಿಷಯಗಳ ಚರ್ಚೆಗಳ ಬಗ್ಗೆ ನಡೆಸಿಲ್ಲ. ಸಚಿವ ಸಂಪುಟದ ವಿಸ್ತರಣೆಯೂ ಇಲ್ಲ. ಮುಂದಿನ ಅವಧಿಗೆ ನಾನು ಸಿಎಂ ಅಂತ ಹೇಳಿದ್ದು, 2028ಕ್ಕೆ ನಾನೇ ಸಿಎಂ ಅಭ್ಯರ್ಥಿ ಎಂಬುದು ಭವಿಷ್ಯದಲ್ಲಿ ಏನಾಗುತ್ತೋ ನೋಡೋಣ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

“ರಾಜ್ಯದಲ್ಲಿ ಶೇ.60 ಪರ್ಸೆಂಟ್‌ ಸರ್ಕಾರವಿದೆ ಎನ್ನುವ ಬಿಜೆಪಿಗರು ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ಅಗತ್ಯ ದಾಖಲೆಗಳೊಂದಿಗೆ ಸಾಬೀತುಪಡಿಸಬೇಕು. ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆಯಿಲ್ಲ.‌ ಬೀದರ್‌ ಗುತ್ತಿಗೆದಾರನ ಡೆತ್ ನೋಟ್‌ನಲ್ಲಿ ಖರ್ಗೆಯವರ ಆಪ್ತರ ಹೆಸರಿದೆ. ಆದರೆ ಸಂತೋಷ್‌ ಎಂಬ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ನೇರವಾಗಿ ಈಶ್ವರಪ್ಪನವರದ್ದೇ ಹೆಸರಿತ್ತು. ಆಪ್ತರ, ಪಿಎಗಳ ಹೆಸರಿದೆಯೆಂದ ಮಾತ್ರಕ್ಕೆ ಸಚಿವರು ನೇರವಾಗಿ ಹೊಣೆಗಾರರಾಗುವುದಿಲ್ಲ. ಪ್ರಕರಣದ ತನಿಖೆ ನಡೆಯುತ್ತಿದೆ” ಎಂದರು.

ಸಾರಿಗೆ ಬಸ್‌ ದರ ಹೆಚ್ಚಳ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, “ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಯವರು ಕೇಂದ್ರದ ಜಿಎಸ್‌ಟಿ ಹೇರಿಕೆ ಬಗ್ಗೆಯೂ ಮಾತನಾಡಬೇಕು. ಕೇಂದ್ರ ಹಣಕಾಸು ಸಚಿವೆ ಹಳೆಗಾಡಿಗಳಿಗೆ ಶೇ.18ರಷ್ಟು ಜಿಎಸ್‌ಟಿ ಹಾಕಿದ್ದಾರೆ. ಸಕ್ಕರೆ, ಕಾರು ಸೇರಿದಂತೆ ಇತರೆ ಅಗತ್ಯ ವಸ್ತುಗಳಿಗೆ ಶೇ.12ರಷ್ಟು ಜಿಎಸ್‌ಟಿ ಹೇರಿದ್ದಾರೆ. ಇದರ ವಿರುದ್ಧ ಬಿಜೆಪಿಗರು ಮಾತನಾಡುವುದಿಲ್ಲ. ಬರೀ ಬಸ್‌ ದರದ ಕುರಿತು ವಿರೋಧ ವ್ಯಕ್ತಪಡಿಸಿದರೆ ಹೇಗೆ” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಐತಿಹಾಸಿಕ ದಾಖಲೆ ಬರೆದ ಕೆಆರ್‌ಎಸ್ ಜಲಾಶಯ: 156 ದಿನಗಳಿಂದ ಅಣೆಕಟ್ಟು ಭರ್ತಿ

“ಹಣಕಾಸಿನ ಸಮತೋಲನೆಯಿಲ್ಲದೆ ಕೆಲಸ ಮಾಡಿದ್ದರಿಂದ ಗುತ್ತಿಗೆದಾರರಿಗೆ ಪಾವತಿಸಬೇಕಾದ ಬಿಲ್‌ಗಳಿಗೆ ಹಣ ಬಿಡುಗಡೆಯಾಗಿಲ್ಲ. ಈ ಹಿಂದೆ ಆಡಳಿತ ನಡೆಸಿದ ಸರ್ಕಾರದ ಅಸಮತೋಲನ ಬಜೆಟ್ ಅಡಿಯಲ್ಲಿ ಕೆಲಸ ಮಾಡಿದ್ದರಿಂದ ಇದೀಗ ಆ ಕಾಮಗಾರಿಗಳಿಗೆ ದುಡ್ಡು ಕೊಡಬೇಕಾಗಿದ್ದು, ಹೆಚ್ಚುವರಿ ಹಣವನ್ನು ಹೊಂದಿಸಲಾಗುತ್ತಿದೆ. ಸಾವಿರ ಕೋಟಿ ಬಜೆಟ್‌ ಇದೆಯೆಂದರೆ ಆ ಮೊತ್ತದಲ್ಲಿಯೇ ಕೆಲಸವಾಗಿದ್ದರೆ ಹಣ ಬಿಡುಗಡೆ ಮಾಡಬಹುದು. ಆದರೆ ಸಾವಿರ ಕೋಟಿ ಬಜೆಟ್‌ ಇಟ್ಟು, 3 ಸಾವಿರ ಕೋಟಿ ಕೆಲಸ ಮಾಡಲಾಗಿದೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಕೆಲಸಗಳು ನಡೆದಿದ್ದು, ಆರ್ಥಿಕ ನೆರವಿಲ್ಲದೇ ಕೆಲಸಗಳನ್ನು ಮಾಡಿದ್ದರಿಂದ ಬಿಲ್ ಕೊಡಲು ತಡವಾಗುತ್ತಿದೆ. ಹಾಗಾಗಿ ದರ ಏರಿಕೆಯಾಗುತ್ತಿದೆ” ಎಂದು ಸಮರ್ಥಿಸಿಕೊಂಡರು.

ಈ ಸಂದರ್ಭದಲ್ಲಿ ಸಚಿವ ಎನ್‌ ಎಸ್‌ ಬೋಸರಾಜು, ಸಂಸದ ಕುಮಾರ ನಾಯಕ, ಮುಖಂಡ ಮೊಹಮ್ಮದ್‌ ಶಾಲಂ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...