ರಾಯಚೂರು | ನ.23-24: ಸೋಲಿಡಾರಿಟಿ ಯೂತ್ ಮೂಮೆಂಟ್‌ನಿಂದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿ

Date:

Advertisements

ಯುವಕರಲ್ಲಿ ಫಿಟ್ನೆಸ್ ಮತ್ತು ಕ್ರೀಡಾ ಮನೋಭಾವವನ್ನು ಉತ್ತೇಜಿಸಲು ಸೋಲಿಡಾರಿಟಿ ಯೂತ್ ಮೂಮೆಂಟ್ ವತಿಯಿಂದ ರಾಯಚೂರಿನಲ್ಲಿ ನವೆಂಬರ್ 23 ಮತ್ತು 24 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ರಾಜ್ಯ ಕಾರ್ಯದರ್ಶಿ ಅಬ್ದುಲ್ ಹಸೀಬ್ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ರಾಜ್ಯದ ಯುವಕರಲ್ಲಿ ಫಿಟ್ನೆಸ್ ಮತ್ತು ಕ್ರೀಡಾ ಮನೋಭಾವವನ್ನು ಉತ್ತೇಜಿಸುವ ಸಲುವಾಗಿ ರಾಜ್ಯಮಟ್ಟದ ಪುರುಷರ ಕಬಡ್ಡಿ ಪಂದ್ಯಾವಳಿಯನ್ನು ರಾಯಚೂರು ಜಿಲ್ಲೆಯ ಸಿಂಧನೂರಿನ ಸತ್ಯ ಗಾರ್ಡನ್‌ನಲ್ಲಿ ನವೆಂಬರ್ 23 ಮತ್ತು 24 ರಂದು ನಡೆಸಲು ಸೋಲಿಡಾರಿಟಿ ಯೂತ್ ಮೂವೆಂಟ್ ಕರ್ನಾಟಕ ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.

ಈ ಪಂದ್ಯಾವಳಿಯ ಮೂಲಕ ಯುವಕರನ್ನು ದೈಹಿಕ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಲು ಹಾಗೂ ಯುವ ಪೀಳಿಗೆಯಲ್ಲಿ ಆರೋಗ್ಯಕರ ಜೀವನ ಶೈಲಿಯನ್ನು ಉತ್ತೇಜಿಸಲು ಸೋಲಿಡಾರಿಟಿ ಬಯಸುತ್ತಿದೆ. ಆರೋಗ್ಯಕರ ಶರೀರದಲ್ಲಿ ಆರೋಗ್ಯಕರ ಮನಸ್ಸು ಎಂಬಂತೆ ಯುವಕರು ದೈಹಿಕವಾಗಿಯೂ ಮಾನಸಿಕವಾಗಿಯೂ ಬಲಿಷ್ಠವಾದರೆ ಒಂದು ಆರೋಗ್ಯಕರ ಸಮಾಜದ ನಿರ್ಮಾಣವಾಗುತ್ತದೆ ಎಂದು ತಿಳಿಸಿದ್ದಾರೆ.

Advertisements

ಯುವಕರಲ್ಲಿ ಸೃಜನಶೀಲತೆಯನ್ನು ಬೆಳೆಸಲು ಕ್ರೀಡೆಗಳು ನಿರ್ಣಾಯಕ ಪಾತ್ರ ವಹಿಸುತ್ತದೆ. ಕಬಡ್ಡಿ ಪಂದ್ಯಾವಳಿ ನಮ್ಮ ಮಧ್ಯೆ ಸ್ಪರ್ಧಾತ್ಮಕ ಮನೋಭಾವವನ್ನು ಹುಟ್ಟು ಹಾಕುವುದರ ಜೊತೆಗೆ ನಮ್ಮ ಮಧ್ಯೆ ಸೌಹಾರ್ದತೆ, ಸಾಮರಸ್ಯ ಹಾಗೂ ಪರಸ್ಪರ ಒಳಗೊಳ್ಳುವಿಕೆಯ ವಾತಾವರಣವನ್ನು ನಿರ್ಮಾಣ ಮಾಡುತ್ತದೆ. ಮನಸ್ಸು ಮನಸ್ಸುಗಳನ್ನು ಬೆಸೆಯಲು ಸಹಕಾರಿಯಾಗುತ್ತದೆ ಎಂದು ತಿಳಿಸಿದ್ದಾರೆ.

ರಾಜ್ಯಮಟ್ಟದ ಈ ಪಂದ್ಯಾವಳಿಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳ ತಂಡಗಳು ಭಾಗವಹಿಸಲಿದ್ದು, ಸ್ಪರ್ಧಿಗಳಿಗೆ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ಹಾಗೂ ತಮ್ಮ ಜಿಲ್ಲೆಯನ್ನು ಪ್ರತಿನಿಧಿಸಲು ಮುಕ್ತ ಅವಕಾಶವನ್ನು ಒದಗಿಸಲಾಗುವುದು. ವಿಜೇತ ತಂಡಗಳಿಗೆ ಪ್ರಥಮ ಬಹುಮಾನವಾಗಿ ಐವತ್ತು ಸಾವಿರ ನಗದು ಹಾಗೂ ಟ್ರೋಫಿ ಮತ್ತು ಪ್ರಮಾಣಪತ್ರ , ದ್ವಿತೀಯ ಬಹುಮಾನವಾಗಿ ಮೂವತ್ತು ಸಾವಿರ ನಗದು ಹಾಗೂ ಟ್ರೋಫಿ ಮತ್ತು ಪ್ರಮಾಣಪತ್ರ, ತೃತೀಯ ಬಹುಮಾನವಾಗಿ ಹತ್ತು ಸಾವಿರ ನಗದು ಹಾಗೂ ಟ್ರೋಫಿ ಮತ್ತು ಪ್ರಮಾಣಪತ್ರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರತಿ ಜಿಲ್ಲೆಯಿಂದ ಎರಡು ತಂಡಗಳನ್ನು ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಲು ಆಯ್ಕೆ ಮಾಡಲಾಗುತ್ತದೆ. ಪ್ರಚಾರದ ಸಲುವಾಗಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪತ್ರಿಕಾಗೋಷ್ಠಿಗಳು ಪೋಸ್ಟರ್ ಮತ್ತು ಟೀ ಶರ್ಟ್ ಬಿಡುಗಡೆಯ ಕಾರ್ಯಕ್ರಮಗಳ ಜೊತೆಗೆ ಸಾಮಾಜಿಕ ಮಾಧ್ಯಮ ಪ್ರಚಾರವನ್ನೂ ನಡೆಸಲಾಗುತ್ತದೆ. ಸ್ಪರ್ಧೆ ಮಾಡಲು ಇಚ್ಛಿಸುವ ಎಲ್ಲಾ ತಂಡಗಳು ಸೋಲಿಡಾರಿಟಿ ಯೂತ್ ಮೂಮೆಂಟ್ ವತಿಯಿಂದ ನೀಡಲಾಗಿರುವ ಗೂಗಲ್ ಫಾರ್ಮ್ ಲಿಂಕ್‌ನಲ್ಲಿ ತಮ್ಮ ವಿವರ ಭರ್ತಿ ಮಾಡಬಹುದು. ನೋಂದಣಿಗೆ ಅಕ್ಟೋಬರ್ 25,2024 ಕೊನೆಯ ದಿನಾಂಕ ಎಂದು ರಾಜ್ಯ ಕಾರ್ಯದರ್ಶಿ ಅಬ್ದುಲ್ ಹಸೀಬ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು | ಹೈಕೋರ್ಟ್‌ ಪೀಠ ರಚನೆ ವಿಚಾರ: ಶಾಶ್ವತ ಹೋರಾಟ ಸಮಿತಿ ರಚನೆಗೆ ನಿರ್ಧಾರ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 7019951060, 8105073556 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸೋಲಿಡಾರಿಟಿ ಯೂತ್ ಮೂಮೆಂಟ್ ಪ್ರಕಟಣೆಯಲ್ಲಿ ತಿಳಿಸಿದೆ.

ನೋಂದಣಿ ಮಾಡಲು ಇರುವ ಗೂಗಲ್ ಲಿಂಕ್ ಫಾರಂ ಇಲ್ಲಿದೆ.

Registration Link:
https://forms.gle/FJLAYPjn7LraTgoF7

WhatsApp Image 2024 10 15 at 3.03.47 PM
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X