ರಾಯಚೂರು | ಜನರ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳು; ಜಿಲ್ಲಾಧಿಕಾರಿ ಭೇಟಿ ಮಾಡಿದ ನಗರಸಭೆ ಸದಸ್ಯರ ನಿಯೋಗ

Date:

ರಾಯಚೂರು  ನಗರದಲ್ಲಿ ಜನರಿಗೆ ಮೂಲಭೂತ ಸೌಕರ್ಯ ಒದಗಿಸಲು ನಗರಸಭೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಕೂಡಲೇ ಸಾಮಾನ್ಯ ಸಭೆ ಕರೆದು, ವಾರ್ಡವಾರು ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ನಗರಸಭೆ ಸದಸ್ಯರ ನಿಯೋಗ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ್ದು, ಮನವಿ ಮಾಡಿದೆ.

- Advertisement -

ನಗರಸಭೆ ಹಿರಿಯ ಸದಸ್ಯ ಜಯಣ್ಣ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳನ್ನು ನಿಯೋಗವು ಭೇಟಿ ಮಾಡಿದೆ. “ನಗರಸಭೆ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಯ ಹಿನ್ನಲೆಯಲ್ಲಿ ಸರ್ಕಾರ ಆಡಳಿತಾಧಿಕಾರಿಯನ್ನು ನೇಮಿಸಿದೆ. ಆದರೆ, ಸದಸ್ಯರು ಅಸ್ತಿತ್ವದಲ್ಲಿದ್ದು ಚುನಾಯಿತ ಸದಸ್ಯರನ್ನು ಕಡೆಗಣಿಸಿ ‘ಸಿ ಕಾರ್ಯ’ ನಿರ್ವಹಿಸಲಾಗುತ್ತಿದೆ” ಎಮದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಆಯಾ ವಾರ್ಡಿನ ಜನರು ನಗರಸಭೆ ಸದಸ್ಯರೊಂದಿಗೆ ನೇರ ಸಂಪರ್ಕದಲ್ಲಿದ್ದಾರೆ. ಕುಡಿಯುವ ನೀರು, ಬೀದಿ ದೀಪ, ಸ್ವಚ್ಚತೆ ಕುರಿತು ಅಧಿಕಾರಿಗಳು ಸಮರ್ಪಕ ಸ್ಪಂದನೆ ನೀಡುತ್ತಿಲ್ಲ. ಚುನಾಯಿತ ಸದಸ್ಯರನ್ನು ಕಡೆಗಣಿಸುವುದಾದರೆ ಅಧಿಕಾರದಲ್ಲಿ ಮುಂದುವರೆಯುವದರಲ್ಲಿ ಅರ್ಥವಿಲ್ಲ. ಕೂಡಲೇ ಅಧಿಕಾರಿಗಳು ಹಾಗೂ ಸದಸ್ಯರ ಸಭೆ ಕರೆದು ಸಮಸ್ಯೆಗಳ ನಿವಾರಣೆ ಮಾಡಬೇಕು” ಎಂದು ಜಯಣ್ಣ ಒತ್ತಾಯಿಸಿದ್ದಾರೆ.

ಪ್ರಭಾರಿ ಜಿಲ್ಲಾಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ ಮಾತನಾಡಿ, “ಶೀಘ್ರದಲ್ಲಿ ಜಿಲ್ಲಾಧಿಕಾರಿಗಳು ಬರಲಿದ್ದು, ಸಭೆ ಕರೆಯುವ ಕುರಿತು ಗಮನಕ್ಕೆ ತರುತ್ತೇವೆ. ವಾರ್ಡವಾರು ಸಮಸ್ಯೆಗಳ ಪಟ್ಟಿ ನೀಡಿದರೆ, ಪರಿಹಾರಕ್ಕೆ ಕ್ರಮವಹಿಸಲಾಗುತ್ತದೆ” ಎಂದರು.

ನಿಯೋಗದಲ್ಲಿ ನಗರಸಭೆ ಸದಸ್ಯ ಇ ಶಶಿರಾಜ, ದರೂರು ಬಸವರಾಜ, ಎನ್ ಶ್ರೀನಿವಾಸರೆಡ್ಡಿ, ಸಾಜೀದ್ ಸಮೀರ್, ಇ.ಶಶಿರಾಜ, ಎನ್.ಕೆ.ನಾಗರಾಜ, ನರಸರೆಡ್ಡಿ, ಜಿಂದಪ್ಪ, ದರೂರು ಬಸವರಾಜ, ಬಿ.ರಮೇಶ, ನಾಗರಾಜ, ಕಡಗೋಳ ಆಂಜಿನೇಯ್ಯ, ರವೀಂದ್ರ ಜಲ್ದಾರ, ನರಸಿಂಹಲು ಮಾಡಗಿರಿ, ಆಂಜಿನೇಯ್ಯ ಸೇರಿದಂತೆ ಅನೇಕರಿದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂಡಿ | ಸ್ಥಳೀಯ ಚುನಾವಣೆ: ಕಾಂಗ್ರೆಸ್ ಬಲಗೊಳಿಸಲು ಯಶವಂತರಾಯಗೌಡ ಪಾಟೀಲ ಕರೆ

ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರಸಭೆ...

ಬಸವನ ಬಾಗೇವಾಡಿ ಸಮೀಪ 3.5 ತೀವ್ರತೆಯ ಭೂಕಂಪ ದಾಖಲು!

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ದಿಂದಾವರ ಗ್ರಾಮ ಪಂಚಾಯಿತಿ ಸಮೀಪ...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಹಾವೇರಿ | ಪಿಎಫ್ ಹೊಸ ನೀತಿ: ವಿರೋಧಿಸಿ ಮಹಿಳಾ ಉದ್ಯೋಗಿಗಳು ದಿಡೀರ್ ಹೆದ್ದಾರಿ ತಡೆದು ಪ್ರತಿಭಟನೆ

"ಕೇಂದ್ರ ಸರ್ಕಾರವು ಭವಿಷ್ಯನಿಧಿ (ಪಿಎಫ್) ಸೌಲಭ್ಯದಲ್ಲಿ ಹೊಸ ಆದೇಶ ಮಾಡಿರುವುದು ಗಾರ್ಮೆಂಟ್ಸ್...