ರಾಯಚೂರು | ಸ್ಮಶಾನವಿಲ್ಲದೆ ಮನೆ ಮುಂದೆಯೇ ಅಂತ್ಯಕ್ರಿಯೆ ಮಾಡುತ್ತಿದ್ದ ರಂಗಾಪುರ ಗ್ರಾಮಕ್ಕೆ ಅಧಿಕಾರಿಗಳ ಭೇಟಿ

Date:

Advertisements

ಮಸ್ಕಿ ತಾಲ್ಲೂಕು ರಂಗಾಪುರ ಗ್ರಾಮದಲ್ಲಿ ದೀರ್ಘಕಾಲದಿಂದ ಮುಂದುವರಿದಿದ್ದ ಸ್ಮಶಾನ ಸಮಸ್ಯೆಗೆ ಪರಿಹಾರ ಸಿಗುವ ಭರವಸೆ ಮೂಡಿದೆ. ಸುಮಾರು 40 ವರ್ಷಗಳಿಂದ ಸ್ಮಶಾನಕ್ಕೆ ನಿಗದಿತ ಜಾಗವಿಲ್ಲದೆ, ಗ್ರಾಮಸ್ಥರು ತಮ್ಮ ಮನೆಗಳ ಮುಂಭಾಗದಲ್ಲೇ ಅಂತ್ಯಕ್ರಿಯೆ ನೆರವೇರಿಸುತ್ತಿದ್ದರು. ಇದರಿಂದ ಗ್ರಾಮಸ್ಥರಲ್ಲಿ ಅಸಮಾಧಾನ ಹೆಚ್ಚಾಗಿತ್ತು.

ಈ ವಿಷಯವನ್ನು ಈದಿನ.ಕಾಂ ಮಾಧ್ಯಮವು “ಸ್ಮಶಾನವಿಲ್ಲದೆ ಮನೆ ಮುಂದೆಯೇ ಅಂತ್ಯಕ್ರಿಯೆ; ನಾಲ್ಕು ದಶಕಗಳ ಸಮಸ್ಯೆಗೆ ಪರಿಹಾರ ಯಾವಾಗ?” ಶೀರ್ಷಿಕೆಯಡಿ ಗುರುವಾರ ವಿಶೇಷ ವರದಿ ಪ್ರಕಟಿಸಿತ್ತು. ಈ ವರದಿಯ ಬಳಿಕ ತಹಶೀಲ್ದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಗ್ರಾಮಸ್ಥರ ಮನವಿ ಆಲಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದು, ಶೀಘ್ರದಲ್ಲೇ ಸ್ಮಶಾನ ಜಾಗ ನಿಗದಿ ಮಾಡುವ ಕಾರ್ಯ ಪ್ರಾರಂಭವಾಗುವ ಸಾಧ್ಯತೆ ಇದೆ.

ಈ ಸುದ್ದಿ ಓದಿದ್ದೀರಾ? ಸ್ಮಶಾನವಿಲ್ಲದೆ ಮನೆ ಮುಂದೆಯೇ ಅಂತ್ಯಕ್ರಿಯೆ; ನಾಲ್ಕು ದಶಕಗಳ ಸಮಸ್ಯೆಗೆ ಪರಿಹಾರ ಯಾವಾಗ?

Advertisements

ಈ ಗ್ರಾಮದ ಮುಖಂಡ ಅಮ್ಜದ್ ಮಾತನಾಡಿ, “ಹಲವು ವರ್ಷಗಳಿಂದ ತೀವ್ರವಾಗಿ ಎದುರಿಸುತ್ತಿದ್ದ ಈ ಸಮಸ್ಯೆಗೆ ಕೊನೆಗೂ ಪರಿಹಾರ ದೊರೆಯುವ ನಿರೀಕ್ಷೆ ಮೂಡಿದ್ದು, ಸ್ಥಳೀಯರು ಸಂತೋಷ ವ್ಯಕ್ತಪಡಿಸಿದ್ದಾರೆ. ಈದಿನ.ಕಾಮ್‌ ಮಾಧ್ಯಮ ತಂಡಕ್ಕೆ ತುಂಬು ಹೃದಯದ ಧನ್ಯವಾದಗಳು” ಎಂದರು.

WhatsApp Image 2025 09 29 at 10.45.49 AM
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

ಹುಬ್ಬಳ್ಳಿ | ಮಹಾನಗರ ಪಾಲಿಕೆ ಕಲಾಪಕ್ಕೆ 18 ಮಾರ್ಷಲ್‌ಗಳ ನೇಮಕ

ಸಾಮಾನ್ಯವಾಗಿ ವಿಧಾನಸಭೆ ಕಲಾಪದಲ್ಲಿ ಮಾರ್ಷಲ್‌ಗಳು ಕಾರ್ಯನಿರ್ವಹಿಸುತ್ತಾರೆ. ಆ ಮಾದರಿಯಲ್ಲಿ ಇದೀಗ ಪ್ರಥಮ‌...

Download Eedina App Android / iOS

X