ಹಳೆ ದ್ವೇಷದ ಹಿನ್ನೆಲೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಯಚೂರು ನಗರದ ಭಂಗಿಕುಂಟಾ ರಸ್ತೆಯ ಆರ್ ಕೆ ಲ್ಯಾಬ್ ಬಳಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಬಬಲೂ ಖದೀರ್ (40) ಎಂದು ಗುರುತಿಸಲಾಗಿದೆ.
ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ಕೊಲೆ ನಡೆದಿದ್ದರಿಂದ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಇನ್ನು ಕೊಲೆ ಮಾಡಿದವನು ನೆರೆಹೊರೆಯನವನೇ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ರಾಯಚೂರು | ಮಹಿಳೆಯರ ವಿವಿಧ ಬೇಡಿಕೆ ಈಡೇರಿಕೆಗೆ ಸಿಐಟಿಯು ಆಗ್ರಹ
ಘಟನೆಯ ಬಳಿಕ ಸದಾರ್ ಬಜಾರ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ತನಿಖೆ ಮುಂದುವರೆದಿದೆ.
