ಅರಕೇರಾ ತಾಲ್ಲೂಕಿನ ಬಿ.ಗಣೇಕಲ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಆಂಗ್ಲ ಮಾಧ್ಯಮದ ಎಲ್‌ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಳೆ ವಿದ್ಯಾರ್ಥಿ ಸಂಘವು ಸಮವಸ್ತ್ರಗಳನ್ನು ವಿತರಿಸುವ ಮೂಲಕ ವಿಶೇಷ ಗಮನ ಸೆಳೆದಿದೆ.
ಗ್ರಾಮದ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಮಕ್ಕಳ ಉತ್ಸಾಹವನ್ನು ಹೆಚ್ಚಿಸಲು ಹಾಗೂ ಶೈಕ್ಷಣಿಕ ಹಾದಿಯಲ್ಲಿ ಒಗ್ಗೂಡಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಗ್ರಾಮದ ಗಣ್ಯರು ಭಾಗವಹಿಸಿದ್ದರು.
ಕಾರ್ಯಕ್ರಮ ಉದ್ದೇಶಿಸಿ ಶಾಲೆಯ ಮುಖ್ಯೋಪಾಧ್ಯಯರಾದ ಬಸವರಾಜ ಸ್ವಾಮಿ ಮಾತನಾಡಿ, ಗ್ರಾಮದ ಹಳೆಯ ವಿಧ್ಯಾರ್ಥಿ ಬಳಗದ ಮುಂದಾಳತ್ವದಿಂದ ಶಾಲೆಯ ಅಭಿವೃದ್ಧಿ ಹಾಗೂ ಶಿಕ್ಷಣ ಗುಣಮಟ್ಟ ಹೆಚ್ಚುತ್ತಿದೆ. ಹಿಂದೆಯು ಶಾಲೆಯ ಸ್ವಚ್ಛತೆ, ಆರೋಗ್ಯ, ಪರಿಸರ ಮತ್ತು ಶಾಲೆಯ ಏಳಿಗೆಗಾಗಿ ಬಹಳಷ್ಟು ಕಾಳಜಿ ತೋರಿಸಿ ಶಾಲೆಯ ಕುಂದು ಕೊರತೆಗಳಿಗೆ ಸಹಕಾರ ನೀಡಿದ್ದಾರೆ ಎಂದು ಶ್ಲಾಘಿಸಿದರು.
ಶಾಲೆಯ 40 ಮಕ್ಕಳಿಗೆ ಸಮವಸ್ತ್ರ ವಿತರಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ ಅಗತ್ಯವಿದ್ದು, ಈ ರೀತಿಯ ಕಾರ್ಯಗಳು ಮಕ್ಕಳ ಶಿಕ್ಷಣದಲ್ಲಿ ಉತ್ಸಾಹವನ್ನು ಹೆಚ್ಚಿಸುತ್ತವೆ ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಅತ್ಯಾಚಾರ ಪ್ರಕರಣ : ಅಪರಾಧಿಗೆ ಜೀವಾವಧಿ ಶಿಕ್ಷೆ
ಈ ವೇಳೆ ಶಾಲೆಯ ಪದಾಧಿಕಾರಿಗಳು, ಹಳೆ ವಿದ್ಯಾರ್ಥಿ ಸಂಘದ ವಿದ್ಯಾರ್ಥಿಗಳು, ಗ್ರಾಮದ ಮುಖಂಡರು ಇನ್ನಿತರರು ಉಪಸ್ಥಿತರಿದ್ದರು.

