ಲಾರಿ, ಬೈಕ್, ಬೊಲೆರೋ ಜೀಪ್ ನಡುವೆ ಸರಣಿ ಅಪಘಾತ ಸಂಭವಿಸಿ ಬೈಕ್ ಸವಾರನೋರ್ವ ಸಾವನ್ನಪ್ಪಿ, ಹಿಂಬದಿ ಸವಾರ ಗಂಭೀರ ಗಾಯಗೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಹೊರವಲಯದ ನಾಯರ್ ಬಂಕ್ ಹತ್ತಿರ ನಡೆದಿದೆ.
ತಿಮ್ಮಯಾದವ್ (25) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಹಿಂಬದಿ ಸವಾರ ದೇವರಾಜ್ ಯಾದವ್ ಎನ್ನುವವನಿಗೆ ಗಂಭೀರ ಗಾಯವಾಗಿದೆ. ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕ್ ಸವಾರನಿಗೆ ತಲೆಗೆ ಗಂಭೀರ ಪೆಟ್ಟಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಇದನ್ನು ಓದಿದ್ದೀರಾ? ಬೆಳಗಾವಿ | ಆಪ್ತ ಸಹಾಯಕ ಆತ್ಮಹತ್ಯೆ ಪ್ರಕರಣ: ಜಾಮೀನು ಸಿಕ್ಕ ಬೆನ್ನಲ್ಲೇ ಕರ್ತವ್ಯಕ್ಕೆ ಹಾಜರಾದ ತಹಶೀಲ್ದಾರ್
ರಾಯಚೂರು ಜಿಲ್ಲೆಯಲ್ಲಿ ದಿನನಿತ್ಯ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿವೆ. ರಸ್ತೆಗಳಲ್ಲಿರುವ ಗುಂಡಿಯ ಕಾರಣಕ್ಕೆ ಅಪಘಾತಗಳು ಹೆಚ್ಚಾಗಿ ಆಗುತ್ತಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
